Karnataka Covid19 Update: ರಾಜ್ಯದಲ್ಲಿಂದು 229 ಹೊಸ ಪ್ರಕರಣಗಳು, ಮೂವರ ಸಾವು

Karnataka Covid19 Update: ರಾಜ್ಯದಲ್ಲಿಂದು 229 ಹೊಸ ಪ್ರಕರಣಗಳು, ಮೂವರ ಸಾವು
ಪ್ರಾತಿನಿಧಿಕ ಚಿತ್ರ

ಬೆಂಗಳೂರಿನಲ್ಲಿ ಇಂದು ಒಂದೇ ದಿನ 146 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,79,508ಕ್ಕೆ ಏರಿಕೆಯಾಗಿದೆ. 17,79,508ಸೋಂಕಿತರ ಪೈಕಿ 17,60,149 ಜನರು ಗುಣಮುಖರಾಗಿದ್ದಾರೆ.

TV9kannada Web Team

| Edited By: Ayesha Banu

Mar 06, 2022 | 9:24 PM

ಬೆಂಗಳೂರು: ರಾಜ್ಯದಲ್ಲಿ ಇಂದು (ಮಾರ್ಚ್ 06) ಹೊಸದಾಗಿ 229 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,42,575 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಇಂದು 264 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 38,99,298 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,991 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 3,248 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇಕಡಾ 0.47 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 146 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,79,508ಕ್ಕೆ ಏರಿಕೆಯಾಗಿದೆ. 17,79,508ಸೋಂಕಿತರ ಪೈಕಿ 17,60,149 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,933 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 2,425 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 7, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 146, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 5, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 5, ಕೋಲಾರ 0, ಕೊಪ್ಪಳ 2, ಮಂಡ್ಯ 2, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 6, ತುಮಕೂರು 13, ಉಡುಪಿ 2, ಉತ್ತರ ಕನ್ನಡ 3, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಮಾಡಿದ್ದನ್ನೇ ಪ್ರತಿಪಕ್ಷಗಳು ಉಕ್ರೇನ್​ ವಿಚಾರದಲ್ಲೂ ಮಾಡುತ್ತಿವೆ: ಪ್ರಧಾನಿ ನರೇಂದ್ರ ಮೋದಿ

ಮೊಬೈಲ್ ಅನ್ನು ಸದಾ ಹಿಡಿದಿರುವ ಅಭ್ಯಾಸ ಇದೆಯೇ? ಅಪಾಯದ ಬಗ್ಗೆ ಇರಲಿ ಎಚ್ಚರ

Follow us on

Related Stories

Most Read Stories

Click on your DTH Provider to Add TV9 Kannada