AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕ ರಾಜ್ಯದಲ್ಲಿ 382 ಹೊಸ ಪ್ರಕರಣ, 10 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 239 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,79,017 ಕ್ಕೆ ಏರಿಕೆಯಾಗಿದೆ. 17,79,017 ಸೋಂಕಿತರ ಪೈಕಿ 17,59,458 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕ ರಾಜ್ಯದಲ್ಲಿ 382 ಹೊಸ ಪ್ರಕರಣ, 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Mar 03, 2022 | 7:35 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಮಾರ್ಚ್ 03) ಹೊಸದಾಗಿ 382 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,41,835 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಇಂದು 689 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 38,97,928 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,979 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 3,890 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 239 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,79,017 ಕ್ಕೆ ಏರಿಕೆಯಾಗಿದೆ. 17,79,017 ಸೋಂಕಿತರ ಪೈಕಿ 17,59,458 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 04 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,928 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 2,630 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 14, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 239, ಬೀದರ್ 2, ಚಾಮರಾಜನಗರ 6, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 3, ಚಿತ್ರದುರ್ಗ 6, ದಕ್ಷಿಣ ಕನ್ನಡ 6, ದಾವಣಗೆರೆ 0, ಧಾರವಾಡ 11, ಗದಗ 1, ಹಾಸನ 5, ಹಾವೇರಿ 0, ಕಲಬುರಗಿ 6, ಕೊಡಗು 16, ಕೋಲಾರ 3, ಕೊಪ್ಪಳ 1, ಮಂಡ್ಯ 0, ಮೈಸೂರು 15, ರಾಯಚೂರು 0, ರಾಮನಗರ 0, ಶಿವಮೊಗ್ಗ 10, ತುಮಕೂರು 12, ಉಡುಪಿ 7, ಉತ್ತರ ಕನ್ನಡ 7, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಪುನೀತ್​ರನ್ನು ನೆನೆದ ಜನಾರ್ದನ ​ರೆಡ್ಡಿ ಮಗ ಕಿರೀಟಿ

ಕೊರೊನಾ ಹರಡಿದ್ದು -ಟ್ರಾಫಿಕ್ ಜಾಮ್ ಮಾಡಿದ್ದಷ್ಟೇ ಕಾಂಗ್ರೆಸ್​ ಪಾದಯಾತ್ರೆಯ ಸಾಧನೆ: ಸಚಿವ ಕಾರಜೋಳ ವ್ಯಂಗ್ಯ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ