ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ: ಷೇರು ಮಾರುಕಟ್ಟೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

ಕರ್ನಾಟಕ ಸೈಬರ್ ಕಮಾಂಡ್ ಬೆಂಗಳೂರಿನ ಜಯನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೈಟೆಕ್ ಸ್ಟಾಕ್ ಮಾರ್ಕೆಟ್ ವಂಚನೆ ಜಾಲವನ್ನು ಭೇದಿಸಿದೆ. ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದ ಈ ಕಾಲ್ ಸೆಂಟರ್‌ನಿಂದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಡಿಜಿಟಲ್ ಫೋರೆನ್ಸಿಕ್ ಬಳಸಿ ವಂಚಕರನ್ನು ಪತ್ತೆಹಚ್ಚಲಾಗಿದೆ. ಅಮಾಯಕ ಹೂಡಿಕೆದಾರರು ಇಂತಹ ಆಮಿಷಗಳಿಂದ ಎಚ್ಚರದಿಂದಿರಬೇಕು, ಎಚ್ಚರಿಕೆಯ ಹೂಡಿಕೆ ನಿರ್ಧಾರಗಳನ್ನು ಕೈಗೊಳ್ಳಲು ಸಲಹೆ ನೀಡಲಾಗಿದೆ.

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ: ಷೇರು ಮಾರುಕಟ್ಟೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!
ಇಬ್ಬರು ವಂಚಕರ ಬಂಧನ

Updated on: Feb 24, 2026 | 5:04 PM

ಬೆಂಗಳೂರು, ಫೆ.24: ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದ ಹೈಟೆಕ್ ವಂಚಕರ ಜಾಲವನ್ನು ಕರ್ನಾಟಕ ಸೈಬರ್ ಕಮಾಂಡ್ ಪತ್ತೆಹಚ್ಚಿದೆ. ಜಯನಗರದಲ್ಲಿ ಕಾಲ್ ಸೆಂಟರ್ ರೂಪದಲ್ಲಿ (stock market scam) ಕಾರ್ಯನಿರ್ವಹಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಜಯನಗರದ 9ನೇ ಬ್ಲಾಕ್‌ನ ಅಂಜನಾದ್ರಿ ಅವೆನ್ಯೂನಲ್ಲಿರುವ ‘ಮಲ್ಟಿವೇವ್ ಬಿಸಿನೆಸ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್’ ಎಂಬ ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ಸಂಸ್ಥೆಯು ಹೊರರಾಜ್ಯದ 15 ಮಂದಿ ಎಕ್ಸಿಕ್ಯೂಟಿವ್‌ಗಳನ್ನು ಕೆಲಸಕ್ಕೆ ಇಟ್ಟುಕೊಂಡಿತ್ತು. ಇವರು ಅಮಾಯಕರಿಗೆ ಕರೆ ಮಾಡಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅತಿ ಹೆಚ್ಚು ಲಾಭ ನೀಡುವುದಾಗಿ ಆಮಿಷವೊಡ್ಡುತ್ತಿದ್ದರು. ಗ್ರಾಹಕರು ಹಣ ವರ್ಗಾವಣೆ ಮಾಡಿದ ತಕ್ಷಣ ಫೋನ್ ಸ್ವಿಚ್ ಆಫ್ ಮಾಡಿ ಪರಾರಿಯಾಗುತ್ತಿದ್ದರು. ಗುಜರಾತ್‌ನ ಸೂರತ್ ಮೂಲದ ಕುಮಾವತ್ ಯೋಗೇಶ್ ಅಮರರಾಮ್ (ಪ್ರಸ್ತುತ ಜಯನಗರ ನಿವಾಸಿ) ಮತ್ತು ದೆಹಲಿಯ ಹಜರತ್ ನಿಜಾಮುದ್ದೀನ್ ಮೂಲದ ಇಮ್ರಾನ್ (ಬಿಟಿಎಂ ಲೇಔಟ್ ನಿವಾಸಿ) ಬಂಧಿತ ಆರೋಪಿಗಳು.

ಇದನ್ನೂ ಓದಿ: ಸಾರ್ವಜನಿಕರ ಪ್ರಾಣ ತೆಗೆಯಲು ಕಾಯುತ್ತಿದೆ ಈ ರಸ್ತೆ: ತೆರೆದ ಗುಂಡಿಯಲ್ಲಿ ಬಿದ್ದು ಕೈಕಾಲು ಮುರಿದುಕೊಂಡ ಜನ

ಇಲ್ಲಿದೆ ನೋಡಿ ಎಕ್ಸ್​​ ಪೋಸ್ಟ್​​;

ಬಿಟಿಎಂ ಲೇಔಟ್‌ನಿಂದ ಬರುತ್ತಿದ್ದ ಕರೆಗಳನ್ನು ಡಿಜಿಟಲ್ ಫೋರೆನ್ಸಿಕ್ ಮೂಲಕ ಪತ್ತೆಹಚ್ಚಿದ ಪೊಲೀಸರು, ಐಎಂಇಐ (IMEI) ಸಂಖ್ಯೆ ಮತ್ತು ಗೂಗಲ್ ಇಮೇಲ್ ಐಡಿಗಳ ಮೂಲಕ ಆರೋಪಿ ಅಮರರಾಮ್‌ನನ್ನು ಟ್ರೇಸ್ ಮಾಡಿದ್ದಾರೆ. ಆರೋಪಿಗಳು ಗೂಗಲ್ ಮೂಲಕ ಸಂಭವನೀಯ ಗ್ರಾಹಕರ ಡೇಟಾ ಸಂಗ್ರಹಿಸುತ್ತಿದ್ದರು. ಕೊಳೆಗೇರಿ ನಿವಾಸಿಗಳ ಹೆಸರಿನಲ್ಲಿ ಸಿಮ್ ಕಾರ್ಡ್‌ಗಳನ್ನು ಪಡೆದು ಮತ್ತು ಹೊರರಾಜ್ಯದ ಬ್ಯಾಂಕ್ ಖಾತೆಗಳನ್ನು ವಂಚನೆಗೆ ಬಳಸಿಕೊಳ್ಳುತ್ತಿದ್ದರು. ವಂಚಿಸಿದ ಹಣವನ್ನು ಹಲವು ‘ಮ್ಯೂಲ್’ (Mule) ಖಾತೆಗಳಿಗೆ ವರ್ಗಾಯಿಸಿ, ನಂತರ ಎಟಿಎಂ ಮೂಲಕ ಡ್ರಾ ಮಾಡಿ ಹಂಚಿಕೊಳ್ಳುತ್ತಿದ್ದರು. ದಾಳಿಯ ವೇಳೆ ಪೊಲೀಸರು 31 ಮೊಬೈಲ್ ಫೋನ್‌ಗಳು, 13 ಲ್ಯಾಪ್‌ಟಾಪ್‌ಗಳು, 16 ಸಿಮ್ ಕಾರ್ಡ್‌ಗಳು, ಕಂಪನಿಯ ಲೆಟರ್‌ಹೆಡ್‌ಗಳು ಮತ್ತು ಸಂತ್ರಸ್ತರ ವಿವರಗಳಿರುವ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us