AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲೂ ಸಿಲಿಂಡರ್​​ ಕೊರತೆ ಗದ್ದಲ: ಆಡಳಿತ ಮತ್ತು ವಿಕ್ಷದ ನಡುವೆ ವಾಕ್ಸಮರ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕರ್ನಾಟಕದಲ್ಲಿ ಸಿಲಿಂಡರ್ ಕೊರತೆ ಉಂಟಾಗಿದ್ದು, ಹೋಟೆಲ್ ಉದ್ಯಮ ಮತ್ತು ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವಿಷಯ ವಿಧಾನಸಭೆಯಲ್ಲಿ ದೊಡ್ಡ ಗದ್ದಲಕ್ಕೆ ಕಾರಣವಾಗಿದೆ. ಶೂನ್ಯವೇಳೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದು, ರಾಜಕೀಯ ಆರೋಪ ಪ್ರತ್ಯಾರೋಪಗಳು ಜೋರಾಗಿ ನಡೆದಿವೆ.

ವಿಧಾನಸಭೆಯಲ್ಲೂ ಸಿಲಿಂಡರ್​​ ಕೊರತೆ ಗದ್ದಲ: ಆಡಳಿತ ಮತ್ತು ವಿಕ್ಷದ ನಡುವೆ ವಾಕ್ಸಮರ
ವಿಧಾನ ಸಭೆImage Credit source: Google
ಸುನಿಲ್​ ಎಮ್​ ಹೆಚ್​
| Edited By: |

Updated on: Mar 11, 2026 | 2:10 PM

Share

ಬೆಂಗಳೂರು, ಮಾರ್ಚ್​​ 11: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್​​ ಪೂರೈಕೆ ವ್ಯತ್ಯಯದಿಂದಾಗಿ ರಾಜ್ಯದಲ್ಲಿ ಹೋಟೆಲ್​​ ಉದ್ಯಮಗಳು, ಜನ ಸಾಮಾನ್ಯರು ವಿಪರೀತ ಸಂಕಷ್ಟಕ್ಕೆ ಸಿಲುಕಿರುವ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಸಿಲಿಂಡರ್​ ಕೊರತೆ ಬಗ್ಗೆ ಚರ್ಚೆಗೆ ಸ್ಪೀಕರ್​​ ಅವಕಾಶ ನೀಡಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಸದನದ ರಣಾಂಗಣವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್​​ ಶಾಸಕರು ಪರಸ್ಪರ ದೂಷಿಸಿಕೊಂಡಿದ್ದಾರೆ. ಚರ್ಚೆ ಮಧ್ಯೆ ಪ್ರಧಾನಿ ಮೋದಿ ಅವರ ಹೆಸರು ಪ್ರಸ್ತಾಪವಾಗಿರೋದು ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದೆ.

ಸಿಲಿಂಡರ್​ ಕೊರತೆ ಬಗ್ಗೆ ವಿಧಾನಸಭೆಯಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್ ಪ್ರಸ್ತಾಪ ಮಾಡಿದ್ದು, ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ವೇಳೆ ಆಹಾರ ಸಚಿವರಿಂದ ಉತ್ತರ ಕೊಡಿಸೋಣ ಎಂದು ಸ್ಪೀಕರ್​ ಹೇಳಿದ್ದಾರೆ. ಶಾಸಕರ ಪ್ರಸ್ತಾಪಕ್ಕೆ ಉತ್ತರಿಸಿದ ಆಹಾರ ಸಚಿವ ಮುನಿಯಪ್ಪ, ಇರಾನ್-ಇಸ್ರೇಲ್ ಯುದ್ಧದಿಂದ ಸಿಲಿಂಡರ್​ ಪೂರೈಕೆ ಆಗ್ತಿಲ್ಲ. ಆದರೆ ಗೃಹ ಬಳಕೆಯ ಸಿಲಿಂಡರ್​​ಗಳಿಗೆ ಯಾವುದೇ ಸಮಸ್ಯೆ ಇಲ್ಲ. 25 ದಿನಕ್ಕೊಮ್ಮೆ ಗೃಹ ಬಳಕೆಯ ಸಿಲಿಂಡರ್​ ಕೊಡುತ್ತೇವೆ. ಗ್ಯಾಸ್​ ಸಿಲಿಂಡರ್​​ಗೆ ಹೆಚ್ಚು ಖರ್ಚು ಮಾಡಿ ಸ್ಟೋರೇಜ್ ಮಾಡುವುದು ಬೇಡ ಎಂದಿದ್ದಾರೆ. ಈ ವೇಳೆ ಮುನಿಯಪ್ಪ ಮಾತಿಗೆ ರಂಗನಾಥ್ ಮರು ಪ್ರಶ್ನೆ ಮಾಡಿದ್ದು, 2000 ರೂ. ಕೊಟ್ಟು ವಾಣಿಜ್ಯ ಸಿಲಿಂಡರ್ ಪಡೆಯುವುದು ಹೇಗೆ? ಮೋದಿ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ ಎಂದಿದ್ದಾರೆ. ಈ ವೇಳೆ ಪ್ರತಿಪಕ್ಷ ಸದಸ್ಯರು ಆಕ್ಷೇಪ ತೆಗೆದಿದ್ದು, ಸುಖಾ ಸುಮ್ಮನೆ ಆರೋಪ ಮಾಡಬೇಡಿ ಎಂದಿದ್ದಾರೆ. ಇತ್ತ ಬಿಜೆಪಿ ವಿರುದ್ಧ ಕಾಂಗ್ರೆಸ್ ಶಾಸಕರಿಂದಲೂ ಆಕ್ರೋಶ ವ್ಯಕ್ತವಾಗಿದ್ದು, ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಸಮಸ್ಯೆ ಸರಿಪಡಿಸುವುದು ಯಾರು? ಬಿಜೆಪಿಯವರು ಯಾಕೆ ಮಾತನಾಡಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಮೋದಿ ಅಂದರೆ ಇವರಿಗೆಷ್ಟು ಭಯ ಎಂದು ಗೋಪಾಲಕೃಷ್ಣ ಹೇಳಿದ್ದು ಮತ್ತಷ್ಟು ಮಾತಿನ ಚಕಮಕಿಗೆ ಕಾರಣವಾಗಿದೆ.

ಇದನ್ನೂ ಓದಿ: ರಾಜ್ಯದ ಹಲವು ಕಡೆ ಗ್ಯಾಸ್ ಸಿಲಿಂಡರ್ ಸಮಸ್ಯೆ

ಸಿಎಂ ಸಿದ್ದರಾಮಯ್ಯ ಗರಂ

ಈ ವೇಳೆ ಮಧ್ಯಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ, ಮುನಿಯಪ್ಪ ತೈಲ ಕಂಪನಿಯವರ ಜೊತೆ ಮಾತನಾಡಿದ್ದಾರೆ. ಗ್ಯಾಸ್ ಪೂರೈಕೆ ಮಾಡುವುದು ಕೇಂದ್ರ ಸರ್ಕಾರ ಅಲ್ಲವೇ? ಅವರು ಉತ್ತರ ಹೇಳೋಕೆ ಅವಕಾಶ ಕೊಡಿ. ಕೇಂದ್ರ ಸಚಿವರು ಹೇಳಿದ್ದನ್ನು ಅವರು ಪ್ರಸ್ತಾಪ ಮಾಡಿದ್ರು. ನೀವು ಕೇಂದ್ರ ಸರ್ಕಾರ ಅಂದರೆ ಎದ್ದು ನಿಂತಿಕೊಳ್ಳುತ್ತೀರಾ ಎಂದು ಸಿಎಂ ಹೇಳಿದ್ದಾರೆ. ಇದು ಸಿಎಂ ಮತ್ತು ವಿಪಕ್ಷ ನಾಯಕರ ನಡುವೆ ವಾಗ್ವಾದಕ್ಕೆ ಕಾರಣವಾಗಿದ್ದು, ವಾಣಿಜ್ಯ ಬಳಕೆ ಸಿಲಿಂಡರ್ ಬರಲಿಲ್ಲ ಅಂದ್ರೆ ಚಳವಳಿ ಮಾಡ್ಬೇಕಾಗುತ್ತೆ ಎಂದು ಸಿಎಂ ಹೇಳಿರೋದಾಗಿ ಅಶೋಕ್ ಕಿಡಿ ಕಾರಿದ್ದಾರೆ. ಆದ್ರೆ ಚಳವಳಿ ಮಾಡಿ ಅಂತಾ ಪ್ರಚೋದನೆ ಮಾಡಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದರೂ ಕೇಳದ ಅಶೋಕ್​​, ಚಳವಳಿ ಮಾಡಿ ಎಂದಿದ್ದೀರಿ ಅಂತಾ ಮಾಧ್ಯಮಗಳಲ್ಲಿ ಬಂದಿದೆ. ಸ್ಟ್ರೈಕ್ ಮಾಡೋಕೆ ಬೆಂಬಲ ಇದೆ ಎಂದಿದ್ದೀರಿ ಎಂದಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟಾದ ಪ್ರಸಂಗಕ್ಕೂ ವಿಧಾನಸಭೆ ಸಾಕ್ಷಿಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ