ಕಾಮಗಾರಿ ಪ್ರಗತಿಯೇ ಬೆಂಗಳೂರಿನ ಅಭಿವೃದ್ಧಿ; ಮುಂಗಾರು ಪೂರ್ವ ಸಿದ್ಧತೆ ಪರಿಶೀಲಿಸಿದ ಬಳಿಕ ಡಿಕೆ ಶಿವಕುಮಾರ್ ಹೇಳಿಕೆ

ಡಿಕೆ ಶಿವಕುಮಾರ್ ಅವರು ಗುರುವಾರ ಮುಂಗಾರು ಪೂರ್ವ ಸಿದ್ಧತೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕಾಮಗಾರಿ ಪ್ರಗತಿಯೇ ಬೆಂಗಳೂರಿನ ಅಭಿವೃದ್ಧಿ; ಮುಂಗಾರು ಪೂರ್ವ ಸಿದ್ಧತೆ ಪರಿಶೀಲಿಸಿದ ಬಳಿಕ ಡಿಕೆ ಶಿವಕುಮಾರ್ ಹೇಳಿಕೆ
ಮುಂಗಾರು ಪೂರ್ವ ಸಿದ್ಧತೆ ಪರಿಶೀಲಿಸಿದ ಡಿಕೆ ಶಿವಕುಮಾರ್
Follow us
Ganapathi Sharma
|

Updated on: Jun 08, 2023 | 2:58 PM

ಬೆಂಗಳೂರು: ಕಾಮಗಾರಿ ಪ್ರಗತಿಯೇ ಬೆಂಗಳೂರಿನ ಅಭಿವೃದ್ಧಿ. ಬೆಂಗಳೂರು ನಗರದ ಬಗ್ಗೆ ಈ ಹಿಂದೆ ಕೆಟ್ಟ ಹೆಸರು ಬಂದಿತ್ತು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ನಗರದ ವಿವಿಧ ಕಡೆಗಳಲ್ಲಿ ಮುಂಗಾರು ಪೂರ್ವ ಸಿದ್ಧತೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ನಂತರ ರಾಮಗೊಂಡನಹಳ್ಳಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕಾಲುವೆ, ಒಳಚರಂಡಿಗಳನ್ನು ಪರಿಶೀಲನೆ ನಡೆಸಿದ್ದೇನೆ. ಮಳೆ ನೀರಿನಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇನೆ ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ಅವರು ಗುರುವಾರ ಮುಂಗಾರು ಪೂರ್ವ ಸಿದ್ಧತೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೂ ಹೊಂದಿರುವ ಶಿವಕುಮಾರ್ ಜತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಇತರ ಅಧಿಕಾರಿಗಳು ಮತ್ತು ಮಹದೇವಪುರ ಶಾಸಕಿ ಮಂಜುಳಾ ಅರವಿಂದ್ ಲಿಂಬಾವಳಿ ಇದ್ದರು.

ಉಪಮುಖ್ಯಮಂತ್ರಿ ಅವರು ಯಮಲೂರಿನಲ್ಲಿ ಒತ್ತುವರಿ ಮತ್ತು ಮಳೆನೀರು ಚರಂಡಿ (ಎಸ್‌ಡಬ್ಲ್ಯೂಡಿ) ಕಾಮಗಾರಿಯನ್ನು ಪರಿಶೀಲಿಸಿದರು. ಎಸ್‌ಡಬ್ಲ್ಯುಡಿ ಅಗಲ ಕಡಿಮೆಯಾದ ಬಗ್ಗೆ ಗಮನಹರಿಸಿ ತಾತ್ಕಾಲಿಕ ಕ್ರಮವಾಗಿ ಕಚ್ಚೆ ಚರಂಡಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ವರ್ಷ ಅತಿವೃಷ್ಟಿಯಿಂದ ಉಂಟಾದ ಪ್ರವಾಹದಿಂದ ಹಾನಿಗೊಳಗಾದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಯಮಲೂರು ಕೂಡ ಒಂದು. ಇಲ್ಲಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್, ಯಮಲೂರಿನ ದಿವ್ಯಶ್ರೀ ಬಳಿ ನಿರ್ಮಾಣವಾಗ್ತಿರೋ ಹೊಸ ರಾಜಕಾಲುವೆ ತಡೆ ಗೋಡೆ ಪರಿಶೀಲಿಸಿದರು.

ನಂತರ ಬೆಳ್ಳಂದೂರು ಕೆರೆಗೆ ಭೇಟಿ ನೀಡಿದರು. ಕೆರೆಯಲ್ಲಿ ಅಧಿಕಾರಿಗಳು ಕಾಮಗಾರಿ ಪ್ರಗತಿ ಕುರಿತು ಶಿವಕುಮಾರ್ ಅವರಿಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Karnataka High Court: ಸಾರ್ವಜನಿಕ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲೇಬೇಕು; ಕರ್ನಾಟಕ ಹೈಕೋರ್ಟ್​​ ತಾಕೀತು

ಬಳಿಕ ಬೆಂಗಳೂರಿನ ಸರ್ಜಾಪುರದ ರೈನ್‌ಬೋ ಡ್ರೈವ್ ಲೇಔಟ್‌ಗೆ ಭೇಟಿ ನೀಡಿದರು. ಕಳೆದ ವರ್ಷ ಮಳೆಗಾಲದಲ್ಲಿ ಹಲವು ಬಾರಿ ಬಡಾವಣೆ ಜಲಾವೃತವಾಗಿತ್ತು. ಶಿವಕುಮಾರ್ ಲೇಔಟ್ ಬಳಿಯ ಚರಂಡಿಗಳನ್ನು ಪರಿಶೀಲಿಸಿ ಅಧಿಕಾರಿಗಳು ಯಾವುದೇ ಅಡೆತಡೆಯಿಲ್ಲದೆ ಕಾಮಗಾರಿಗೆ ಅವಕಾಶ ಕಲ್ಪಿಸುವಂತೆ ನಿವಾಸಿಗಳಿಗೆ ಮನವಿ ಮಾಡಿದರು.

ಮಹದೇವಪುರ ವಲಯದ ಗುಂಜೂರಿಗೆ ಭೇಟಿ ನೀಡಿದ ಸಚಿವರು ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ