Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮುಲು ಜೊತೆಗೆ 50 ಶಾಸಕರನ್ನು ಸಂಪರ್ಕಿಸಿದ್ದೆ; ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬಿಜೆಪಿಯಿಂದ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲಾಗುತ್ತಿದೆ ಎಂದು ಬಳ್ಳಾರಿಯಲ್ಲಿ ಜನಾರ್ದನ್ ರೆಡ್ಡಿ ಹೇಳಿದ್ದರು. ಈ ಹೇಳಿಕೆ ಕರ್ನಾಟಕದ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ಸತೀಶ್ ಜಾರಕಿಹೊಳಿ ಅವರನ್ನು ಸೆಳೆಯಲು ಡಿಕೆಶಿ ಶ್ರೀರಾಮುಲು ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಜನಾರ್ದನ್ ರೆಡ್ಡಿ ಆರೋಪಿಸಿದ್ದರು. ಈ ಆರೋಪಕ್ಕೆ ಕಾಂಗ್ರೆಸ್ ನಾಯಕರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಶ್ರೀರಾಮುಲು ಜೊತೆಗೆ 50 ಶಾಸಕರನ್ನು ಸಂಪರ್ಕಿಸಿದ್ದೆ; ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
DCM Dk Shivakumar
Follow us
Anil Kalkere
| Updated By: ಸುಷ್ಮಾ ಚಕ್ರೆ

Updated on: Jan 24, 2025 | 7:43 PM

ಬೆಂಗಳೂರು: ಮಾಜಿ ಗೆಳೆಯರಾದ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲು ಅವರ ನಡುವೆ ಭಾರೀ ಕಂದಕ ಏರ್ಪಟ್ಟಿದೆ. ಅವರಿಬ್ಬರ ನಡುವಿನ ಗಲಾಟೆ ಇದೀಗ ಬೇರೆ ಆಯಾಮ ತೆಗೆದುಕೊಂಡಿದೆ. ಡಿ.ಕೆ ಶಿವಕುಮಾರ್ ಶ್ರೀರಾಮುಲು ಅವರನ್ನು ಕಾಂಗ್ರೆಸ್​ ಪಕ್ಷಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದೇ ಕಾರಣಕ್ಕೆ ಶ್ರೀರಾಮುಲು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಟೀಕಿಸಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದು, ನಾನು ಶ್ರೀರಾಮುಲು ಅವರಿಗೆ ಈಗ ಯಾವುದೇ ಆಹ್ವಾನ ನೀಡಿಲ್ಲ ಎಂದಿದ್ದಾರೆ.

ಕಾಂಗ್ರೆಸ್​​ ಪಕ್ಷಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಆಹ್ವಾನ ನೀಡಿದ ಬಗ್ಗೆ ಜನಾರ್ದನ ರೆಡ್ಡಿಯ ಹೇಳಿಕೆಗೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಶ್ರೀರಾಮುಲು ಅವರನ್ನು ಭೇಟಿಯಾಗಿಲ್ಲ, ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ವಿಧಾನಸಭೆ ಚುನಾವಣೆಗೂ ಮೊದಲು ನಾನು ಪಕ್ಷಕ್ಕೆ ಬರಲು ಕೇಳಿದ್ದೆ. ಆಗ ಶ್ರೀರಾಮುಲು ಅವರು ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದು ಹೇಳಿದ್ದರು. ಆಗ ಶ್ರೀರಾಮುಲು ಮಾತ್ರವಲ್ಲ 50 ಶಾಸಕರನ್ನು ಕೂಡ ಸಂಪರ್ಕ ಮಾಡಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ಹಳೇ ದೋಸ್ತಿಯ ರಾಜಕೀಯ ಗುಟ್ಟು ಬಿಚ್ಚಿಟ್ಟ ರೆಡ್ಡಿ

ವಿಧಾನಸಭಾ ಚುನಾವಣೆಗೂ ಮುನ್ನ ನಾನು ಬೇರೆ ಶಾಸಕರನ್ನು ಸಂಪರ್ಕಿಸಿದ್ದೆ. ಈಗ ನಾನು ಯಾರನ್ನೂ ಸಂಪರ್ಕ ಮಾಡಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರು ಬಾಯಿಚಪಲಕ್ಕೆ ಮಾತಾಡಿದರೆ ಅದಕ್ಕೆ ನಾನು ಉತ್ತರ ಕೊಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಶ್ರೀರಾಮುಲು ಅವರನ್ನು ಡಿಕೆಶಿ ಸಂಪರ್ಕ ಮಾಡಿದ್ದಾರೆ ಅನ್ನೋ ವಿಚಾರದಲ್ಲಿ ಹುರುಳಿಲ್ಲ. ಅವರು ಬಾಯಿ ಚಪಲಕ್ಕೆ ಮಾತಾಡ್ತಾರೆ. ಅವರು ಪಾರ್ಟಿಯಲ್ಲೇ ಇರಲಿಲ್ಲ. ಈಗ ಪಾರ್ಟಿಗೆ ಕಾಲಿಟ್ಟು ಮನೆ ಒಡೆಯೋ ಕೆಲಸ ಮಾಡ್ತಿದ್ದಾನೆ. ನಾನ್ಯಾಕೆ ಅವನನ್ನು ದೊಡ್ಡವನನ್ನಾಗಿ ಮಾಡಲಿ? ಅವನು ನನ್ನ ಹೆಸರು ತಗೊಂಡರೆ ನಾನು ದೊಡ್ಡವನಾಗುತ್ತೇನಾ? ಅವನು ಯಾರ ಸಂಪರ್ಕದಲ್ಲಿದ್ದ ಅಂತ ಚರ್ಚೆ ಬೇಡ. ನನ್ನ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾನೆ. ನನಗೆ ಶ್ರೀರಾಮುಲು ಸಿಕ್ಕಿಲ್ಲ, ಮಾತಾಡಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: ಶ್ರೀರಾಮುಲು, ಜನಾರ್ದನ ರೆಡ್ಡಿ ಸಮರ ನಿಯಂತ್ರಣಕ್ಕೆ ಬಿಜೆಪಿ ಹೈಕಮಾಂಡ್ ಎಂಟ್ರಿ: ವಿಜಯೇಂದ್ರಗೆ ಬಂತು ಖಡಕ್ ಸೂಚನೆ

ಇನ್ನು, ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತೀಯ ಜನತಾ ಪಕ್ಷ ಒಡೆದ ಮನೆಯಾಗಿದೆ. ಬಿಜೆಪಿಯ ಒಳಜಗಳವನ್ನು ಕಾಂಗ್ರೆಸ್ ಪಕ್ಷಕ್ಕೆ ಏಕೆ ತರುತ್ತೀರಾ? ನಾನು ಯಾರನ್ನೂ ಸಂಪರ್ಕಿಸಿಲ್ಲವೆಂದು ಶ್ರೀರಾಮುಲು ಅವರೇ ಹೇಳಿದ್ದಾರೆ. ಜನಾರ್ದನ ರೆಡ್ಡಿ ನಡೆಯಿಂದ ಬಿಜೆಪಿ ನಾಯಕರು ಆತನನ್ನು ಯಾಕಾದರೂ ಪಕ್ಷಕ್ಕೆ ಸೇರಿಸಿಕೊಂಡಿದ್ದೇವೋ ಎಂದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಿರಿಯರು, ಕಿರಿಯರು ಯಾರೇ ಬಂದರೂ ಸ್ವಾಗತ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್