ನನ್ನ ಬಳಿ ತಗ್ಗಿ ಬಗ್ಗಿ ಇರಬೇಕು, ಬೇರೆಯವರ ಜತೆಗಿದ್ದಂತೆ ಇದ್ದರೆ ಆಗುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಮಾತು

ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ. ಅನುದಾನ ಮಂಜೂರು ಮಾಡಿ ಬಿಜೆಪಿ ಶಾಸಕರಿರುವ ಜಯನಗರವನ್ನು ಮಾತ್ರ ಕಡೆಗಣಿಸಿದ್ದು ಇತ್ತೀಚೆಗೆ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆ ಶಿವಕುಮಾರ್ ಬಳಿ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಡಿಕೆ ಶಿವಕುಮಾರ್ ಉತ್ತರ ಹೇಗಿತ್ತು ನೋಡಿ.

ನನ್ನ ಬಳಿ ತಗ್ಗಿ ಬಗ್ಗಿ ಇರಬೇಕು, ಬೇರೆಯವರ ಜತೆಗಿದ್ದಂತೆ ಇದ್ದರೆ ಆಗುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಮಾತು
ಡಿಕೆ ಶಿವಕುಮಾರ್ ಹಾಗೂ ತೇಜಸ್ವಿ ಸೂರ್ಯ
Follow us
Shivaraj
| Updated By: Ganapathi Sharma

Updated on: Nov 06, 2024 | 2:21 PM

ಬೆಂಗಳೂರು, ನವೆಂಬರ್ 6: ‘ನನ್ನ ಬಳಿ ತಗ್ಗಿ ಬಗ್ಗಿ ಇರಬೇಕು, ಬೇರೆಯವರ ಜತೆಗಿದ್ದಂತೆ ಇದ್ದರೆ ಆಗುವುದಿಲ್ಲ.’ ಹೀಗೆಂದಿದ್ದು ಡಿಸಿಎಂ ಡಿಕೆ ಶಿವಕುಮಾರ್. ಅದೂ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬಳಿ! ನಮ್ಮ ಮೆಟ್ರೋ ನಾಗಸಂದ್ರ ಮಾದಾವರ ವಿಸ್ತರಿತ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡುವ ಸಂದರ್ಭ ತೇಜಸ್ವಿ ಸೂರ್ಯ ಕೇಳಿದ ಪ್ರಶ್ನೆಗೆ ಡಿಕೆ ಶಿವಕುಮಾರ್ ಖಡಕ್ ಆಗಿಯೇ ಉತ್ತರ ನೀಡಿದರು.

ನಾಗಸಂದ್ರ ಮಾದಾವರ ನಡುವೆ ಮೆಟ್ರೋ ರೈಲು ಸೇವೆಗೆ ಚಾಲನೆ ನೀಡುವ ಮುನ್ನ ಡಿಕೆ ಶಿವಕುಮಾರ್ ಹಾಗೂ ತೇಜಸ್ವಿ ಸೂರ್ಯ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರದಲ್ಲಿ ಭಾಗಿಯಾದರು. ಇದೇ ವೇಳೆ, ಅನುದಾನ ವಿಚಾರವಾಗಿ ಡಿಕೆ ಶಿವಕುಮಾರ್ ಬಳಿ ತೇಜಸ್ವಿ ಸೂರ್ಯ ಪ್ರಸ್ತಾಪಿಸಿದರು.

ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ನೀಡಿದಾಗ, ಜಯನಗರವನ್ನು ಕಡೆಗಣಿಸಿದ ಬಗ್ಗೆ ತೇಜಸ್ವಿ ಸೂರ್ಯ ಪ್ರಸ್ತಾಪಿಸಿದರು.

ಡಿಕೆ ಶಿವಕುಮಾರ್ ಹೇಳಿದ್ದೇನು?

ತೇಜಸ್ವಿ ಸೂರ್ಯ ಮಾತಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ಜಯನಗರ ಶಾಸಕ ಸಿಕೆ ರಾಮಮೂರ್ತಿಯ ಮಾತು ಹೆಚ್ಚಾಯಿತು. ಆಸ್ಪತ್ರೆಯನ್ನು ಕಿತ್ತುಹಾಕಿಸಿದ್ದೇನೆ, ನನ್ನ ಬಳಿ ತಗ್ಗಿ ಬಗ್ಗಿ ಇರಬೇಕು. ಬೇರೆಯವರ ರೀತಿ ಇದ್ದಹಾಗೆ ನನ್ನ ಹತ್ತಿರ ಇದ್ದರೆ ಆಗುವುದಿಲ್ಲ. ನಾನು ಅಧಿಕಾರಕ್ಕೆ ಬಂದಮೇಲೆ ಬೆಂಗಳೂರು ಅಧೋಗತಿ ತಲುಪಿದೆ ಎಂದಿದ್ದ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ತಲಾ 10 ಕೋಟಿ ರೂ. ಮಂಜೂರು ಮಾಡಿ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಇತ್ತೀಚೆಗೆ ಆದೇಶ ಹೊರಡಿಸಿದ್ದರು. ಆದರೆ, ಬಿಜೆಪಿ ಶಾಸಕರಿರುವ ಜಯನಗರ ಕ್ಷೇತ್ರಕ್ಕೆ ಮಾತ್ರ ಅನುದಾನ ಮಂಜೂರು ಮಾಡಿರಲಿಲ್ಲ. ಈ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಸಿಎಂ ಆಯ್ತು ಈಗ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು: ಏನಿದು ಪ್ರಕರಣ?

ನಂತರ ಅನುದಾನ ನೀಡದೇ ಇರುವ ನಿರ್ಧಾರವನ್ನು ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದರು. ಸರ್ಕಾರದ ವಿರುದ್ಧ ರಾಮಮೂರ್ತಿ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಅದನ್ನು ಸಾಬೀತುಪಡಿಸಲಿ, ಆಮೇಲೆ ಅನುದಾನದ ಬಗ್ಗೆ ನೋಡೋಣ ಎಂದಿದ್ದರು. ನಂತರ, ಅನುದಾನ ವಿಚಾರವಾಗಿ ವಕೀಲ ಹೆಚ್ ಯೋಗೇಂದ್ರ ಎಂಬವರು ಡಿಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರನ್ನೂ ನೀಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಧನರಾಜ್ ಮಿಮಿಕ್ರಿ ಕಲೆಗೆ ಭೇಷ್ ಎನ್ನಬೇಕು; ಬಿಗ್ ಬಾಸ್ ಮನೆಯ ಫನ್ನಿ ವಿಡಿಯೋ
ಧನರಾಜ್ ಮಿಮಿಕ್ರಿ ಕಲೆಗೆ ಭೇಷ್ ಎನ್ನಬೇಕು; ಬಿಗ್ ಬಾಸ್ ಮನೆಯ ಫನ್ನಿ ವಿಡಿಯೋ
ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ
ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ
ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್​ಗೆ ಸಮನ್ಸ್ ಜಾರಿಯಾಗಿತ್ತು
ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್​ಗೆ ಸಮನ್ಸ್ ಜಾರಿಯಾಗಿತ್ತು
ಕೆಪಿಸಿಸಿ ಅಧ್ಯಕ್ಷನಾದವನಿಗೆ ಮತಸೆಳೆಯುವ ಸಾಮರ್ಥ್ಯವಿರಬೇಕು: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷನಾದವನಿಗೆ ಮತಸೆಳೆಯುವ ಸಾಮರ್ಥ್ಯವಿರಬೇಕು: ಜಾರಕಿಹೊಳಿ
ಭಾರತಕ್ಕೆ ಅವಮಾನಿಸಿದರಾ ಬಿಲ್ ಗೇಟ್ಸ್?
ಭಾರತಕ್ಕೆ ಅವಮಾನಿಸಿದರಾ ಬಿಲ್ ಗೇಟ್ಸ್?
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗಿನ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗಿನ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವೆ
ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು
ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು
ಉಗ್ರಂ ಮಂಜು-ಗೌತಮಿಯ ತಪ್ಪುಗಳ ಎತ್ತಿ ತೋರಿಸಿದ ಹನುಮಂತು
ಉಗ್ರಂ ಮಂಜು-ಗೌತಮಿಯ ತಪ್ಪುಗಳ ಎತ್ತಿ ತೋರಿಸಿದ ಹನುಮಂತು
ಕಾಂಗ್ರೆಸ್ ತತ್ವ ಸಿದ್ಧಾಂತಗಳು ಬಸನಗೌಡ ಯತ್ನಾಳ್​ಗೆ ಒಗ್ಗಲ್ಲ: ಲಕ್ಷ್ಮಣ್
ಕಾಂಗ್ರೆಸ್ ತತ್ವ ಸಿದ್ಧಾಂತಗಳು ಬಸನಗೌಡ ಯತ್ನಾಳ್​ಗೆ ಒಗ್ಗಲ್ಲ: ಲಕ್ಷ್ಮಣ್