AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಅಪರಾಧ ಹಾಗೂ ವಂಚನೆ ಪ್ರಕರಣಗಳ ತನಿಖೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಡಿಜಿಪಿ ಡಾ. ಎಂ.ಎ. ಸಲೀಂ

ರಾಜ್ಯದಲ್ಲಿ ₹1 ಕೋಟಿವರೆಗಿನ ವಂಚನೆ ಪ್ರಕರಣಗಳಿಗೆ ಪಿಎಸ್‌ಐ ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತದ ಪ್ರಕರಣಗಳಿಗೆ ಇನ್ಸ್‌ಪೆಕ್ಟರ್ ತನಿಖೆ ನಡೆಸಲು ಡಿಜಿಪಿ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಬಿಎನ್‌ಎಸ್ಎಸ್ ಸೆಕ್ಷನ್ 30ರ ಅಡಿಯಲ್ಲಿ ಹೊರಡಿಸಲಾಗಿರುವ ಈ ಸುತ್ತೋಲೆಯ ಪ್ರಕಾರ, ಆರ್ಥಿಕ ಅಪರಾಧಗಳ ಮೊತ್ತದ ಆಧಾರದ ಮೇಲೆ ತನಿಖಾಧಿಕಾರಿಗಳ ಅಧಿಕಾರವನ್ನು ನೀಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಆರ್ಥಿಕ ಅಪರಾಧ ಹಾಗೂ ವಂಚನೆ ಪ್ರಕರಣಗಳ ತನಿಖೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಡಿಜಿಪಿ ಡಾ. ಎಂ.ಎ. ಸಲೀಂ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Nov 14, 2026 | 6:35 PM

Share

ಬೆಂಗಳೂರು, ನ.14: ರಾಜ್ಯದಲ್ಲಿ ವಂಚನೆ , ದುರ್ಬಳಕೆ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಯಾವ ದರ್ಜೆಯ ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂಬ ಬಗ್ಗೆಯಿರುವ ಗೊಂದಲಗಳನ್ನು ನಿವಾರಿಸಲು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಫೆಬ್ರವರಿ 27, 2026ರಂದು ಜಾರಿಗೆ ಬಂದಿದ್ದ ಪರಿಷ್ಕೃತ ಸ್ಥಾಯಿ ಆದೇಶಕ್ಕೆ ಸಂಬಂಧಿಸಿದಂತೆ ಈ ಸ್ಪಷ್ಟನೆ ನೀಡಲಾಗಿದೆ.

ಯಾವ ಮೊತ್ತದ ವಂಚನೆಗೆ ಯಾವ ಅಧಿಕಾರಿ ತನಿಖೆ ನಡೆಸಬೇಕು?:

ಬಿಎನ್‌ಎಸ್ಎಸ್ ಸೆಕ್ಷನ್ 30ರ ಅಡಿಯಲ್ಲಿ ಹೊರಡಿಸಲಾಗಿರುವ ಈ ಸುತ್ತೋಲೆಯ ಪ್ರಕಾರ, ಆರ್ಥಿಕ ಅಪರಾಧಗಳ ಮೊತ್ತದ ಆಧಾರದ ಮೇಲೆ ತನಿಖಾಧಿಕಾರಿಗಳ ಅಧಿಕಾರವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.

₹1 ಕೋಟಿ ವರೆಗಿನ ವಂಚನೆ ಪ್ರಕರಣಗಳು: ₹1 ಕೋಟಿ ವರೆಗಿನ ಮೊತ್ತದ ವಂಚನೆ, ದುರ್ಬಳಕೆ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಮಟ್ಟದ ಅಧಿಕಾರಿಗಳು ನಡೆಸಬಹುದಾಗಿದೆ.

₹1 ಕೋಟಿಗಿಂತ ಹೆಚ್ಚಿನ ವಂಚನೆ ಪ್ರಕರಣಗಳು: ಒಂದು ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ವಂಚನೆ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಕಡ್ಡಾಯವಾಗಿ ಪೊಲೀಸ್ ಇನ್ಸ್‌ಪೆಕ್ಟರ್ ಅಥವಾ ಅದಕ್ಕಿಂತ ಮೇಲ್ಮಟ್ಟದ ಅಧಿಕಾರಿಗಳು ಮಾತ್ರ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ದೇಗುಲ ಪ್ರವೇಶ ನಿರಾಕರಣೆ ವಿಚಾರ: ನಿಖಿಲ್ ಬರಬಾರದು, ಕೈಮುಗಿಬಾರದು ಸ್ಫೋಟಕ ಹೇಳಿಕೆ ನೀಡಿದ ನಿಖಿಲ್ ಕುಮಾರಸ್ವಾಮಿ

ಇಲ್ಲಿದೆ ನೋಡಿ ಆದೇಶ ಪತ್ರ:

Whatsapp Image 2026 11 14 At 5.36.14 Pm

Whatsapp Image 2026 11 14 At 5.36.14 Pm

ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ:

ರಾಜ್ಯದ ಎಲ್ಲಾ ಘಟಕಗಳ ಪೊಲೀಸ್ ಅಧಿಕಾರಿಗಳು ಈ ಆದೇಶದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಲಾಗಿದೆ. ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕರಾದ ಡಾ. ಎಂ.ಎ. ಸಲೀಂ, ಐಪಿಎಸ್ (Dr. M.A. Saleem, IPS) ಅವರ ಅಧಿಕೃತ ಸಹಿಯೊಂದಿಗೆ ಈ ಸುತ್ತೋಲೆ ಹೊರಡಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Sat, 14 November 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More