
ಬೆಂಗಳೂರು, ನ.14: ರಾಜ್ಯದಲ್ಲಿ ವಂಚನೆ , ದುರ್ಬಳಕೆ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಯಾವ ದರ್ಜೆಯ ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂಬ ಬಗ್ಗೆಯಿರುವ ಗೊಂದಲಗಳನ್ನು ನಿವಾರಿಸಲು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಫೆಬ್ರವರಿ 27, 2026ರಂದು ಜಾರಿಗೆ ಬಂದಿದ್ದ ಪರಿಷ್ಕೃತ ಸ್ಥಾಯಿ ಆದೇಶಕ್ಕೆ ಸಂಬಂಧಿಸಿದಂತೆ ಈ ಸ್ಪಷ್ಟನೆ ನೀಡಲಾಗಿದೆ.
ಬಿಎನ್‌ಎಸ್ಎಸ್ ಸೆಕ್ಷನ್ 30ರ ಅಡಿಯಲ್ಲಿ ಹೊರಡಿಸಲಾಗಿರುವ ಈ ಸುತ್ತೋಲೆಯ ಪ್ರಕಾರ, ಆರ್ಥಿಕ ಅಪರಾಧಗಳ ಮೊತ್ತದ ಆಧಾರದ ಮೇಲೆ ತನಿಖಾಧಿಕಾರಿಗಳ ಅಧಿಕಾರವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
₹1 ಕೋಟಿ ವರೆಗಿನ ವಂಚನೆ ಪ್ರಕರಣಗಳು: ₹1 ಕೋಟಿ ವರೆಗಿನ ಮೊತ್ತದ ವಂಚನೆ, ದುರ್ಬಳಕೆ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಮಟ್ಟದ ಅಧಿಕಾರಿಗಳು ನಡೆಸಬಹುದಾಗಿದೆ.
₹1 ಕೋಟಿಗಿಂತ ಹೆಚ್ಚಿನ ವಂಚನೆ ಪ್ರಕರಣಗಳು: ಒಂದು ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ವಂಚನೆ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಕಡ್ಡಾಯವಾಗಿ ಪೊಲೀಸ್ ಇನ್ಸ್‌ಪೆಕ್ಟರ್ ಅಥವಾ ಅದಕ್ಕಿಂತ ಮೇಲ್ಮಟ್ಟದ ಅಧಿಕಾರಿಗಳು ಮಾತ್ರ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ಇದನ್ನೂ ಓದಿ: ದೇಗುಲ ಪ್ರವೇಶ ನಿರಾಕರಣೆ ವಿಚಾರ: ನಿಖಿಲ್ ಬರಬಾರದು, ಕೈಮುಗಿಬಾರದು ಸ್ಫೋಟಕ ಹೇಳಿಕೆ ನೀಡಿದ ನಿಖಿಲ್ ಕುಮಾರಸ್ವಾಮಿ

Whatsapp Image 2026 11 14 At 5.36.14 Pm
ರಾಜ್ಯದ ಎಲ್ಲಾ ಘಟಕಗಳ ಪೊಲೀಸ್ ಅಧಿಕಾರಿಗಳು ಈ ಆದೇಶದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಲಾಗಿದೆ. ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕರಾದ ಡಾ. ಎಂ.ಎ. ಸಲೀಂ, ಐಪಿಎಸ್ (Dr. M.A. Saleem, IPS) ಅವರ ಅಧಿಕೃತ ಸಹಿಯೊಂದಿಗೆ ಈ ಸುತ್ತೋಲೆ ಹೊರಡಿಸಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:34 pm, Sat, 14 November 26