AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದ ವಿದ್ಯುತ್ ಅಭಾವ: 20,000 ಮೆಗಾವ್ಯಾಟ್‌ ಬೇಡಿಕೆ ಬೆನ್ನಲ್ಲೇ ಸಿಎಂ ಡಿ.ಕೆ. ಶಿವಕುಮಾರ್ ಕಳವಳ

ಕರ್ನಾಟಕದಲ್ಲಿ ಭೀಕರ ಬರಗಾಲ, ಕುಡಿಯುವ ನೀರು ಮತ್ತು ಬೆಳೆ ನಷ್ಟದಿಂದ ಜನತೆ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ಗರಿಷ್ಠ (20,094 MW) ತಲುಪಿದ್ದು, ಸಿಎಂ ಡಿ.ಕೆ. ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಅಭಾವ ನಿಭಾಯಿಸಲು ಸಕ್ಕರೆ ಕಾರ್ಖಾನೆಗಳಿಂದ ಪೂರೈಕೆ ಕಡ್ಡಾಯಗೊಳಿಸಿದ್ದಾರೆ. ಕಲ್ಲಿದ್ದಲು ಕೊರತೆಯಿಂದ ಥರ್ಮಲ್ ಸ್ಥಾವರಗಳು ಅಪಾಯದಲ್ಲಿವೆ. ಬರ ಪರಿಹಾರಕ್ಕಾಗಿ ಸಿಎಂ ಶೀಘ್ರದಲ್ಲೇ ಪ್ರಧಾನಿ ಮೋದಿ ಭೇಟಿಗೆ ದೆಹಲಿಗೆ ತೆರಳಲಿದ್ದಾರೆ.

ರಾಜ್ಯದಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದ ವಿದ್ಯುತ್ ಅಭಾವ: 20,000 ಮೆಗಾವ್ಯಾಟ್‌ ಬೇಡಿಕೆ ಬೆನ್ನಲ್ಲೇ ಸಿಎಂ ಡಿ.ಕೆ. ಶಿವಕುಮಾರ್ ಕಳವಳ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Sep 25, 2026 | 10:34 AM

Share

ಬೆಂಗಳೂರು, ಸೆ.25: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ಗರಿಷ್ಠ 20,000 ಮೆಗಾವ್ಯಾಟ್‌ಗೆ (MW) ತಲುಪಿದ್ದು, ಭೀಕರ ಬರಗಾಲದಿಂದಾಗಿ ಜನಸಾಮಾನ್ಯರು ಹಾಗೂ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಗುರುವಾರ (ಸೆ.24) ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಬೆಳೆ ನಷ್ಟ, ಕುಡಿಯುವ ನೀರು ಮತ್ತು ವಿದ್ಯುತ್ ಅಭಾವದಿಂದ ಜನತೆ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಶ್ರಮಿಸುತ್ತಿದೆ ಎಂದಿದ್ದಾರೆ.

ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿದ್ಯುತ್ ಅಭಾವವನ್ನು ನಿಭಾಯಿಸಲು ಸಿಎಂ ಡಿ.ಕೆ. ಶಿವಕುಮಾರ್ ಕೆಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ರಾಜ್ಯದ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿರುವ ಸಿಎಂ, ಸ್ವಂತವಾಗಿ ಉತ್ಪಾದಿಸುವ ವಿದ್ಯುತ್ ಅನ್ನು ಹೊರಗೆ ಎಲ್ಲೂ ಮಾರಾಟ ಮಾಡುವಂತಿಲ್ಲ. ಅದನ್ನು ಕಡ್ಡಾಯವಾಗಿ ಸರ್ಕಾರಕ್ಕೇ ಪೂರೈಸಬೇಕು ಎಂದು ಗಡುವು ನೀಡಿದ್ದಾರೆ. ರಾಜ್ಯದ ಶಾಖೋತ್ಪನ್ನ (ಥರ್ಮಲ್) ವಿದ್ಯುತ್ ಸ್ಥಾವರಗಳಲ್ಲಿ ಕೇವಲ ಒಂದೆರಡು ದಿನಗಳಿಗೆ ಸಾಕಾಗುವಷ್ಟು ಕಲ್ಲಿದ್ದಲು ದಾಸ್ತಾನಿದ್ದು, ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿದೆ. ಇಂಧನ ಇಲಾಖೆಗೆ ನಿರಂತರ ನಿಗಾ ವಹಿಸಲು ಸೂಚಿಸಲಾಗಿದೆ. ಹೊರರಾಜ್ಯಗಳಲ್ಲಿ ಯೂನಿಟ್‌ಗೆ 20 ರಿಂದ 22 ರೂಪಾಯಿ ನೀಡಿದರೂ ವಿದ್ಯುತ್ ಲಭ್ಯವಾಗುತ್ತಿಲ್ಲ. ಈ ಹಿಂದೆ ಇಂಧನ ಸಚಿವನಾಗಿ ಕೆಲಸ ಮಾಡಿದ ಅನುಭವದಿಂದ ದೇಶಾದ್ಯಂತ ವಿದ್ಯುತ್ ಲಭ್ಯತೆಯ ಮೇಲ್ವಿಚಾರಣೆ ನಡೆಸುತ್ತಿದ್ದೇನೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಸಾರ್ವಕಾಲಿಕ ದಾಖಲೆಯ ವಿದ್ಯುತ್ ಬೇಡಿಕೆ: 20,094 ಮೆಗಾವ್ಯಾಟ್‌ಗೆ ಜಂಪ್‌:

ರಾಜ್ಯದಲ್ಲಿ ದಿನಂಪ್ರತಿ ವಿದ್ಯುತ್ ಬಳಕೆ ತೀವ್ರವಾಗಿ ಏರಿಕೆಯಾಗುತ್ತಿದ್ದು, ಪ್ರತಿದಿನ ಸುಮಾರು 2,000 ದಿಂದ 3,000 ಮೆಗಾವ್ಯಾಟ್ (MW) ಹೆಚ್ಚುವರಿ ಬೇಡಿಕೆ ಸೃಷ್ಟಿಯಾಗುತ್ತಿದೆ. ಇದರ ಬೆನ್ನಲ್ಲೇ ಸೆಪ್ಟೆಂಬರ್ 11, 2026 ರಂದು ರಾಜ್ಯದ ಇತಿಹಾಸದಲ್ಲೇ ಸಾರ್ವಕಾಲಿಕ ಗರಿಷ್ಠ ಮಟ್ಟದ 20,094 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ದಾಖಲಾಗಿದೆ. ಈ ಹಿಂದೆ ಮಾರ್ಚ್ 13 ರಂದು 18,655 ಮೆಗಾವ್ಯಾಟ್‌ ಗರಿಷ್ಠ ಬೇಡಿಕೆ ದಾಖಲಾಗಿತ್ತು. ಇತ್ತೀಚೆಗೆ ಸೆಪ್ಟೆಂಬರ್ 21 ರಂದು ಬೆಳಿಗ್ಗೆ 11 ಗಂಟೆಯ ವೇಳೆಗೆ 16,719 ಮೆಗಾವ್ಯಾಟ್ ಬೇಡಿಕೆ ಕಂಡುಬಂದಿತ್ತು. ರಾಜಧಾನಿ ಬೆಂಗಳೂರು ಒಂದೇ ಅಲ್ಲದೆ ಮಂಗಳೂರು, ಕಲಬುರಗಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಕೃಷಿ, ವಾಣಿಜ್ಯ ಹಾಗೂ ಗೃಹಬಳಕೆಯ ವಿದ್ಯುತ್ ಬೇಡಿಕೆಯಲ್ಲಿ 3,000 ಮೆಗಾವ್ಯಾಟ್‌ನಷ್ಟು ಭಾರಿ ಹೆಚ್ಚಳವಾಗಿದೆ.

ಇದನ್ನೂ ಓದಿ: ಪವರ್​​ ಕಟ್​​ ನಡುವೆಯೂ ಕರ್ನಾಟಕದಲ್ಲಿ ವಿದ್ಯುತ್​​ ಬೇಡಿಕೆ ದಿನಕ್ಕೆ 2,000–3,000 ಮೆಗಾವ್ಯಾಟ್‌ಗಳಷ್ಟು ಹೆಚ್ಚಳ

ಬರ ಪರಿಹಾರಕ್ಕಾಗಿ ದೆಹಲಿ ಪ್ರವಾಸ – ಪ್ರಧಾನಿ ಮೋದಿ ಭೇಟಿಗೆ ಮನವಿ:

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ತೀವ್ರ ಬರ ಆವರಿಸಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದಿಂದ ತಕ್ಷಣವೇ ಬರ ಪರಿಹಾರ ಅನುದಾನ ಬಿಡುಗಡೆ ಮಾಡುವಂತೆ ಕೋರಲು ಸಿಎಂ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. “ಕರ್ನಾಟಕದ ಜನತೆಗೆ ನೆರವಾಗುವುದು ಮಾನ್ಯ ಪ್ರಧಾನಮಂತ್ರಿಯವರ ನೈತಿಕ ಕರ್ತವ್ಯವಾಗಿದೆ. ನಾನು ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ಕೋರಿ ದೆಹಲಿಗೆ ತೆರಳಲಿದ್ದೇನೆ” ಎಂದು ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದಾರೆ.

ಇನ್ನು ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಹಣಕಾಸು ಇಲಾಖೆ ನೀಡಿರುವ ಎಚ್ಚರಿಕೆ/ಸಲಹೆಯನ್ನು ಇಟ್ಟುಕೊಂಡು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಸಿಎಂ ಕಠಿಣ ತಿರುಗೇಟು ನೀಡಿದರು. ಹಣಕಾಸು ಇಲಾಖೆ ಇಂತಹ ಸಲಹೆ ನೀಡುವುದು ನಿತ್ಯದ ಆಡಳಿತಾತ್ಮಕ ಕರ್ತವ್ಯ. ಬಿ.ಎಸ್. ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಹಣಕಾಸು ಇಲಾಖೆ ಇಂತಹ ಮುನ್ನೆಚ್ಚರಿಕೆಗಳನ್ನು ನೀಡಿತ್ತು. ರಾಜ್ಯ ಮತ್ತು ದೇಶದಲ್ಲಿ ಬರ ಪರಿಸ್ಥಿತಿ ಬಂದಾಗ ಆರ್ಥಿಕ ಮುಗ್ಗಟ್ಟು ಎದುರಾಗುವುದು ಸಹಜ. ಇದನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 am, Fri, 25 September 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ವೀಕೆಂಡ್ ಎಪಿಸೋಡ್​ನಲ್ಲಿ ಮತ್ತಿಬ್ಬರು ಹೊರ ಹೋಗ್ತಾರೆ; ಬಿಗ್ ಬಾಸ್ ಸೂಚನೆ
ವೀಕೆಂಡ್ ಎಪಿಸೋಡ್​ನಲ್ಲಿ ಮತ್ತಿಬ್ಬರು ಹೊರ ಹೋಗ್ತಾರೆ; ಬಿಗ್ ಬಾಸ್ ಸೂಚನೆ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಟ್ರಂಪ್ ದಂಪತಿಯಿಂದ ಅದ್ದೂರಿ ಸ್ವಾಗತ
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಟ್ರಂಪ್ ದಂಪತಿಯಿಂದ ಅದ್ದೂರಿ ಸ್ವಾಗತ