ಕರ್ನಾಟಕದ 9 ತಾಲೂಕುಗಳು ಬರಪಟ್ಟಿಗೆ ಸೇರ್ಪಡೆ: ಸಕಲೇಶಪುರ ತೀವ್ರ ಬರಪೀಡಿತ ಎಂದು ಘೋಷಣೆ
ಕರ್ನಾಟಕದ ಬರಪೀಡಿತ ತಾಲೂಕುಗಳ ಪಟ್ಟಿಗೆ ಹೊಸದಾಗಿ 9 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಒಟ್ಟು ಸಂಖ್ಯೆ 226ಕ್ಕೆ ಏರಿಕೆಯಾಗಿದೆ. ಬರದಿಂದ ರೈತರ ಜೀವನೋಪಾಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು, ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸುವುದು ಹಾಗೂ ಗ್ರಾಮೀಣ ಜನರ ಹಿತ ಕಾಯುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್ 14: ಕರ್ನಾಟಕದ ಬರಪಟ್ಟಿಗೆ ಹೊಸದಾಗಿ ಮತ್ತೆ 9 ತಾಲೂಕುಗಳ ಸೇರ್ಪಡೆ ಮಾಡಿ ರಾಜ್ಯ ಸರ್ಕಾರ ಘೋಷಿಸಿದೆ. ಆ ಮೂಲಕ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದೆ. ಈ ಹಿಂದೆ 217 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿತ್ತು. ವೈಜ್ಞಾನಿಕ ಮೌಲ್ಯಮಾಪನ, ಸ್ಥಳ ಪರಿಶೀಲನೆ ಆಧರಿಸಿ ಹೊಸ ಆದೇಶ ಮಾಡಲಾಗಿದೆ. ಆ ಪೈಕಿ ಹಾಸನ ಜಿಲ್ಲೆ ಸಕಲೇಶಪುರವನ್ನು ತೀವ್ರ ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ.
8 ತಾಲೂಕುಗಳು ಮಧ್ಯಮ ಬರಪೀಡಿತ
ಬೆಳಗಾವಿ ಜಿಲ್ಲೆಯ ಖಾನಾಪುರ, ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ, ದಕ್ಷಿಣ ಕನ್ನಡದ ಪುತ್ತೂರು, ಮೂಡುಬಿದಿರೆ, ಮೂಲ್ಕಿ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ದಾಂಡೇಲಿ ಸೇರಿದಂತೆ 8 ತಾಲೂಕುಗಳು ಮಧ್ಯಮ ಬರಪೀಡಿತ ಎಂದು ಸರ್ಕಾರ ಘೋಷಿಸಿದೆ. ಉಳಿದ ತಾಲೂಕುಗಳಲ್ಲೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿದಿದ್ದು, ಮಾನದಂಡಗಳ ಆಧಾರದಲ್ಲಿ ಮತ್ತಷ್ಟು ತಾಲೂಕುಗಳು ಬರಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಮಳೆ ಕೊರತೆಯಿಂದ ಹಿಂಗಾರು ಬಿತ್ತನೆಗೆ ಆತಂಕ: ಬೆಳಗಾವಿಯಲ್ಲಿ ಬೆಳೆ ಆಯ್ಕೆ ಬಗ್ಗೆ ರೈತರಲ್ಲಿ ಗೊಂದಲ
‘ರೈತರ ಹಿತ ಕಾಪಾಡಲು ಅಗತ್ಯ ಕ್ರಮ’
ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಸಂಕಷ್ಟದಲ್ಲಿರುವ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಈಗಾಗಲೇ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ವೈಜ್ಞಾನಿಕ ಮೌಲ್ಯಮಾಪನ ಹಾಗೂ ಸ್ಥಳ ಪರಿಶೀಲನೆಯ ಆಧಾರದಲ್ಲಿ ಹೊಸದಾಗಿ 9 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದೆ.
ಹೊಸದಾಗಿ ಘೋಷಿಸಲಾದ ತಾಲ್ಲೂಕುಗಳಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತೀವ್ರ ಬರಪೀಡಿತವಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಮತ್ತು ಮೂಲ್ಕಿ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಮತ್ತು ದಾಂಡೇಲಿ ಸೇರಿದಂತೆ 8 ತಾಲ್ಲೂಕುಗಳು ಮಧ್ಯಮ ಬರಪೀಡಿತವಾಗಿವೆ.
ಇನ್ನುಳಿದ ತಾಲೂಕುಗಳಲ್ಲೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದ್ದು, ಮಾನದಂಡಗಳಿಗೆ ಒಳಪಟ್ಟಲ್ಲಿ ಮುಂದಿನ ಹಂತದಲ್ಲಿ ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುವುದು.
ಬರದಿಂದ ರೈತರ ಜೀವನೋಪಾಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು, ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸುವುದು ಹಾಗೂ ಗ್ರಾಮೀಣ ಜನರ ಹಿತ ಕಾಯುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ.
Our Government is taking necessary measures to effectively manage the drought situation across the State and protect the interests of farmers facing distress.
We had already declared 217 taluks drought-affected. Based on scientific assessment and field verification, 9 more taluks have now been declared drought-affected, taking the total to 226.
Among the newly declared taluks, Sakleshpur in Hassan district has been classified as severely drought-affected, while Khanapur in Belagavi, Hosanagara and Sagara in Shivamogga, Puttur, Moodbidri and Mulki in Dakshina Kannada, and Joida and Dandeli in Uttara Kannada have been classified as moderately drought-affected.
Monitoring will continue in the remaining taluks, and those meeting the prescribed criteria will be added to the drought-affected list in the next phase.
Protecting farmers’ livelihoods, providing appropriate relief for crop loss and safeguarding rural communities remain priorities for our Government.
— Dr. G Parameshwara (@DrParameshwara) October 14, 2026
ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಸಂಕಷ್ಟದಲ್ಲಿರುವ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಡಿಸಿಎಂ ಮತ್ತು ಕಂದಾಯ ಸಚಿವರೂ ಆಗಿರುವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈಗಾಗಲೇ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ಹೊಸದಾಗಿ 9 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದೆ. ಬರದಿಂದ ರೈತರ ಜೀವನೋಪಾಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು, ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸುವುದು ಹಾಗೂ ಗ್ರಾಮೀಣ ಜನರ ಹಿತ ಕಾಯುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




