AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಪರಿಹಾರದಲ್ಲಿ ಗೊಂದಲ ಬೇಡ, ಕನಿಷ್ಠ 5 ಸಾವಿರ ರೂ. ನೀಡುವುದು ಖಂಡಿತ: ಸಿಎಂ ಡಿಕೆ ಶಿವಕುಮಾರ್

ಕರ್ನಾಟಕ ಸರ್ಕಾರವು ರೈತರ ಬರ ಪರಿಹಾರದ ಕುರಿತ ವದಂತಿಗಳಿಗೆ ಸ್ಪಷ್ಟನೆ ನೀಡಿದೆ. ಅರ್ಹ ರೈತರಿಗೆ ಕನಿಷ್ಠ 5,000 ರೂ. ಪರಿಹಾರ ಖಚಿತಪಡಿಸಿದ್ದು, ಕೇಂದ್ರದ ನಿಯಮಕ್ಕಿಂತ ಹೆಚ್ಚುವರಿ ವೆಚ್ಚವನ್ನು ರಾಜ್ಯವೇ ಭರಿಸಲಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದಂತೆ ರೈತರಲ್ಲಿ ಮನವಿ ಮಾಡಿದ್ದಾರೆ. ಮೊದಲ ಕಂತಿನ ನಂತರವೂ ಬಾಕಿ ಹಣ ಪಾವತಿಯಾಗಲಿದೆ.

ಬರ ಪರಿಹಾರದಲ್ಲಿ ಗೊಂದಲ ಬೇಡ, ಕನಿಷ್ಠ 5 ಸಾವಿರ ರೂ. ನೀಡುವುದು ಖಂಡಿತ: ಸಿಎಂ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ Image Credit source: Tv9 kannada
ಈರಣ್ಣಾ ಬಸವಾ
| Edited By: |

Updated on: Nov 10, 2026 | 8:47 PM

Share

ಬೆಂಗಳೂರು, ನ.10: ರಾಜ್ಯದಲ್ಲಿ ಬರ ಪರಿಹಾರ ವಿತರಣೆ ಕುರಿತಂತೆ ಹರಡುತ್ತಿರುವ ಅಪಪ್ರಚಾರ ಹಾಗೂ ವದಂತಿಗಳಿಗೆ ಕರ್ನಾಟಕ ಸರ್ಕಾರ ತೆರೆ ಎಳೆದಿದೆ. “ರಾಜ್ಯದ ರೈತ ಬಾಂಧವರಲ್ಲಿ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ ಬೇಡ. ಪ್ರತಿಯೊಬ್ಬ ಅರ್ಹ ರೈತನಿಗೂ ಸರ್ಕಾರ ಕನಿಷ್ಠ 5,000 ರೂಪಾಯಿ ಪರಿಹಾರ ನೀಡುವುದು ನಿಶ್ಚಿತ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟ ಭರವಸೆ ನೀಡಿದ್ದಾರೆ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ ಎಂದಿರುವ ಅವರು, ರೈತರಿಗೆ ಪೂರ್ಣಪ್ರಮಾಣದ ಪರಿಹಾರ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ನಿಯಮಾವಳಿಗಳಿಗಿಂತ ಹೆಚ್ಚಾಗಿ ರಾಜ್ಯ ಸರ್ಕಾರವೇ ತನ್ನ ಸ್ವಂತ ನಿಧಿಯಿಂದ ಹಣ ಭರಿಸಿ ರೈತರ ನೆರವಿಗೆ ಧಾವಿಸಿದೆ ಎಂದು ಡಿಸಿಎಂ ವಿವರಣೆ ನೀಡಿದ್ದಾರೆ. ಕೇಂದ್ರದ SDRF ಮತ್ತು NDRF ಮಾರ್ಗಸೂಚಿಗಳ ಪ್ರಕಾರ ಮಳೆಯಾಶ್ರಿತ ಬೆಳೆಗೆ 1,500 ರೂ. ನೀರಾವರಿ ಬೆಳೆಗೆ 2,600 ರೂ. ಹಾಗೂ ಬಹುವಾರ್ಷಿಕ ಬೆಳೆಗಳಿಗೆ 3,200 ರೂ. ಕನಿಷ್ಠ ಪರಿಹಾರ ನಿಗದಿಯಾಗಿದೆ. ಆದರೆ, ರಾಜ್ಯ ಸರ್ಕಾರವು ಈ ಮೂರೂ ವರ್ಗದ ಬೆಳೆಗಳಿಗೂ ಕನಿಷ್ಠ 5,000 ರೂಪಾಯಿ ಬರ ಪರಿಹಾರವನ್ನು ನೀಡಲು ತೀರ್ಮಾನಿಸಿದೆ. ನಿಗದಿತ ನಿಯಮಕ್ಕಿಂತ ಹೆಚ್ಚಾಗುವ ಈ ಪೂರ್ಣ ಹೆಚ್ಚುವರಿ ವೆಚ್ಚವನ್ನು ರಾಜ್ಯ ಸರ್ಕಾರವೇ ವಹಿಸಿಕೊಳ್ಳಲಿದೆ.

ಮೊದಲ ಕಂತಿನಲ್ಲಿ 2,000 ರೂ. ಅಥವಾ 2,500 ರೂ. ಪಡೆದಿರುವ ರೈತರಿಗೆ ಬಾಕಿ ಉಳಿದಿರುವ ಹಣವನ್ನು ಮುಂದಿನ ಕಂತುಗಳಲ್ಲಿ ತಕ್ಷಣವೇ ಖಾತೆಗಳಿಗೆ ಪಾವತಿಸಲಾಗುತ್ತದೆ. ಬೆಳೆ ನಷ್ಟದ ಪ್ರಮಾಣವನ್ನು ಆಧರಿಸಿ ಅರ್ಹ ರೈತರು 60,000 ರೂ. ದವರೆಗೆ ಇನ್‌ಪುಟ್ ಸಬ್ಸಿಡಿ ನೆರವನ್ನು ಪಡೆದುಕೊಳ್ಳಲು ಅವಕಾಶವಿದೆ. ಬರ ಪರಿಹಾರದ ವಿಚಾರದಲ್ಲಿ ವಿಪಕ್ಷಗಳು ಹಾಗೂ ಕೆಲವು ಹಿತಾಸಕ್ತಿಗಳು ಹರಡುತ್ತಿರುವ ತಪ್ಪು ಮಾಹಿತಿ ಮತ್ತು ವದಂತಿಗಳಿಗೆ ರೈತರು ಯಾವುದೇ ಕಾರಣಕ್ಕೂ ಕಿವಿಗೊಡಬಾರದು ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಡಿಸಿಎಂ ಹೇಳಿದ್ದೇನು?

ರಾಜ್ಯದಲ್ಲಿ ಬರ ಪರಿಹಾರ ವಿತರಣೆ ವಿಚಾರವಾಗಿ ವಿಪಕ್ಷಗಳು ಮಾಡುತ್ತಿರುವ ಸರಣಿ ಆರೋಪಗಳ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡುವ ಮೂಲಕ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. “ಮೊದಲ ಕಂತಿನಲ್ಲಿ ನೀಡಲಾದ ಹಣವೇ ಅಂತಿಮ ಪರಿಹಾರವಲ್ಲ. ರಾಜ್ಯದ ಪ್ರತಿಯೊಬ್ಬ ಅರ್ಹ ರೈತನಿಗೂ ಕನಿಷ್ಠ 5,000 ರೂಪಾಯಿ ಬರ ಪರಿಹಾರ ಸಿಗುವುದನ್ನು ಸರ್ಕಾರ ಖಚಿತಪಡಿಸಲಿದೆ” ಎಂದು ಡಿಸಿಎಂ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಬರ ಪರಿಹಾರದಲ್ಲಿ ಯಾವುದೇ ಮೋಸವಿಲ್ಲ, ರೈತರಿಗೆ ಸಿಗಲಿದೆ ಕನಿಷ್ಠ 5 ಸಾವಿರ ರೂ.: ವಿಪಕ್ಷಗಳ ಆರೋಪಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಖಡಕ್ ಸ್ಪಷ್ಟನೆ

ವಿರೋಧ ಪಕ್ಷದ ಆರೋಪವೇನು?

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲದ ನಡುವೆ ರೈತರಿಗೆ ನೀಡಲಾಗುತ್ತಿರುವ ಬರ ಪರಿಹಾರದಲ್ಲಿ ಕಡಿತ ಉಂಟಾಗಿದೆ ಎಂಬ ಆರೋಪಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಎಂದು ಆರೋಪ ಮಾಡಿದೆ. ಭರವಸೆ ನೀಡಿದಂತೆ ₹2,500 ಪರಿಹಾರವನ್ನು ಪೂರ್ಣವಾಗಿ ನೀಡದೆ ಕೇವಲ ₹1,500 ರಿಂದ ₹2,000 ಹಣ ಜಮೆ ಮಾಡುವ ಮೂಲಕ ಅನ್ನದಾತ್ರಗೆ ವಂಚಿಸಲಾಗಿದೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಈರಣ್ಣಾ ಬಸವಾ
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ
ಮಾದಪ್ಪನ ಬೆಟ್ಟದಲ್ಲಿ ಇಂದು ದೀಪಾವಳಿ ಜಾತ್ರಾ ಮಹೋತ್ಸವ; ಬೆಳಗಿದವು ಲಕ್ಷದೀಪ
ಮಾದಪ್ಪನ ಬೆಟ್ಟದಲ್ಲಿ ಇಂದು ದೀಪಾವಳಿ ಜಾತ್ರಾ ಮಹೋತ್ಸವ; ಬೆಳಗಿದವು ಲಕ್ಷದೀಪ
ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆಯ ದಿನ
ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆಯ ದಿನ
ಅಣ್ಣಾವ್ರ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ; ಕಿಟಕಿ ಗಾಜುಗಳು ಪುಡಿಪುಡಿ!
ಅಣ್ಣಾವ್ರ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ; ಕಿಟಕಿ ಗಾಜುಗಳು ಪುಡಿಪುಡಿ!
ಬೆಂಗಳೂರಿನ ಅಮೃತಹಳ್ಳಿ ಬಳಿ ಭಾರಿ ಅಗ್ನಿ ಅವಘಡ
ಬೆಂಗಳೂರಿನ ಅಮೃತಹಳ್ಳಿ ಬಳಿ ಭಾರಿ ಅಗ್ನಿ ಅವಘಡ