ಡಿಸಿಎಂ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಡಾ.ಜಿ. ಪರಮೇಶ್ವರ್ ದಾಖಲು
ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸಿಎಂ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರದಂತೆ ಸಚಿವರು ಮತ್ತು ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಡಿಸಿಎಂ ಆರೋಗ್ಯ ವಿಚಾರಿಸುತ್ತಿದ್ದಾರೆ.

ಬೆಂಗಳೂರು, ಅಕ್ಟೋಬರ್ 27: ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ಯು.ಟಿ. ಖಾದರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರದಂತೆ ಸಚಿವರು, ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಪರಮೇಶ್ವರ್ ಆರೋಗ್ಯ ವಿಚಾರಿಸಿದ್ದಾರೆ. ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಗೆ ಬೇಟಿ ಬಳಿಕ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.
ಡಿಸಿಎಂಗೆ ಹೃದಯ ಸಂಬಂಧಿ ಸಮಸ್ಯೆ ಎಂಬ ಮಾಹಿತಿ
ವಸಂತನಗರದ ಬ್ಯಾಡ್ಮಿಂಟನ್ ಅಸೋಸಿಯೇಷನ್ನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ ಉದ್ಘಾಟನಾ ಸಮಾರಂಭದಲ್ಲಿ ಪರಮೇಶ್ವರ್ ಭಾಗಿಯಾಗಿದ್ದರು. ಆಟಗಾರರಿಗೆ ಶುಭಾಷಯವನ್ನೂ ಹೇಳಿದ್ದರು. ಈ ವೇಳೆಯೇ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ಬರುವ ಮುಂಚೆಯೇ ಅವರು ಅಲ್ಲಿಂದ ತೆರಳಿದ್ದರು. ಬೆಳಿಗ್ಗೆಯಿಂದಲೇ ಅವರಿಗೆ ಸುಸ್ತಿನ ಅನುಭವವಾಗಿತ್ತು. ಡಿಸಿಎಂಗೆ ಹೃದಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಆಗಿದೆ ಎಂಬ ಮಾಹಿತಿ ಇದ್ದು, ಅವರನ್ನು ಎಲ್ಲ ರೀತಿಯಿಂದಲೂ ವೈದ್ಯರು ಪರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ.
‘ಇಂದೇ ಡಾ.ಜಿ.ಪರಮೇಶ್ವರ್ ಡಿಸ್ಚಾರ್ಜ್’
ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಸ್ಥಿರವಾಗಿದೆ. ಅವರು ಆಸ್ಪತ್ರೆಗೆ ನಡೆದುಕೊಂಡೇ ಬಂದಿದ್ದಾರೆ. ಪರಮೇಶ್ವರ್ ಬಂದಾಗ ಹಾರ್ಟ್ರೇಟ್ ಸ್ವಲ್ಪ ಜಾಸ್ತಿ ಆಗಿತ್ತು. ನಾವು ಎಲ್ಲವನ್ನೂ ಕಂಟ್ರೋಲ್ ಮಾಡಿದ್ದೇವೆ. ಸದ್ಯ ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಸ್ಥಿರವಾಗಿದೆ. ಇಂದೇ ಡಿಸಿಎಂರನ್ನು ಡಿಸ್ಚಾರ್ಜ್ ಮಾಡುತ್ತೇವೆ ಎಂದು ಬೆಂಗಳೂರಿನ ವೈದೇಹಿ ಆಸ್ಪತ್ರೆ ವೈದ್ಯ ಶ್ರೀನಿವಾಸ್ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:11 pm, Tue, 27 October 26




