ಡಿಸಿಎಂ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಡಾ.ಜಿ. ಪರಮೇಶ್ವರ್​​ ದಾಖಲು

ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸಿಎಂ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್​​, ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಸೇರದಂತೆ ಸಚಿವರು ಮತ್ತು ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಡಿಸಿಎಂ ಆರೋಗ್ಯ ವಿಚಾರಿಸುತ್ತಿದ್ದಾರೆ.

ಡಿಸಿಎಂ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಡಾ.ಜಿ. ಪರಮೇಶ್ವರ್​​ ದಾಖಲು
Edited By:

Updated on: Oct 27, 2026 | 2:51 PM

ಬೆಂಗಳೂರು, ಅಕ್ಟೋಬರ್​​ 27: ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್​​, ಆರೋಗ್ಯ ಸಚಿವ ಯು.ಟಿ. ಖಾದರ್​​, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರದಂತೆ ಸಚಿವರು, ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಪರಮೇಶ್ವರ್​​ ಆರೋಗ್ಯ ವಿಚಾರಿಸಿದ್ದಾರೆ. ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಗೆ ಬೇಟಿ ಬಳಿಕ ಸಚಿವ ಯು.ಟಿ. ಖಾದರ್​​ ಮಾಹಿತಿ ನೀಡಿದ್ದಾರೆ.

ಡಿಸಿಎಂಗೆ ಹೃದಯ ಸಂಬಂಧಿ ಸಮಸ್ಯೆ ಎಂಬ ಮಾಹಿತಿ

G Parameshwara Health Upset: ಆಸ್ಪತ್ರೆಗೆ ದಾಖಲಾದ ಪರಮೇಶ್ವರ್.. ಆರೋಗ್ಯ ವಿಚಾರಿಸಿ ತೆರಳಿದ ಸಿಎಂ ಡಿಕೆಶಿ| #TV9D

ವಸಂತನಗರದ ಬ್ಯಾಡ್ಮಿಂಟನ್ ಅಸೋಸಿಯೇಷನ್​​​ನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಇಂಟರ್​​ನ್ಯಾಷನಲ್​​ ಚಾಲೆಂಜ್ ಉದ್ಘಾಟನಾ ಸಮಾರಂಭದಲ್ಲಿ ಪರಮೇಶ್ವರ್​​ ಭಾಗಿಯಾಗಿದ್ದರು. ಆಟಗಾರರಿಗೆ ಶುಭಾಷಯವನ್ನೂ ಹೇಳಿದ್ದರು. ಈ ವೇಳೆಯೇ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್​​ ಅವರು ಬರುವ ಮುಂಚೆಯೇ ಅವರು ಅಲ್ಲಿಂದ ತೆರಳಿದ್ದರು. ಬೆಳಿಗ್ಗೆಯಿಂದಲೇ ಅವರಿಗೆ ಸುಸ್ತಿನ ಅನುಭವವಾಗಿತ್ತು. ಡಿಸಿಎಂಗೆ ಹೃದಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಆಗಿದೆ ಎಂಬ ಮಾಹಿತಿ ಇದ್ದು,  ಅವರನ್ನು ಎಲ್ಲ ರೀತಿಯಿಂದಲೂ ವೈದ್ಯರು ಪರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ.

‘ಇಂದೇ ಡಾ.ಜಿ.ಪರಮೇಶ್ವರ್ ಡಿಸ್ಚಾರ್ಜ್’

ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಸ್ಥಿರವಾಗಿದೆ. ಅವರು ಆಸ್ಪತ್ರೆಗೆ ನಡೆದುಕೊಂಡೇ ಬಂದಿದ್ದಾರೆ.
ಪರಮೇಶ್ವರ್ ಬಂದಾಗ ಹಾರ್ಟ್​ರೇಟ್ ಸ್ವಲ್ಪ ಜಾಸ್ತಿ ಆಗಿತ್ತು. ನಾವು ಎಲ್ಲವನ್ನೂ ಕಂಟ್ರೋಲ್​ ಮಾಡಿದ್ದೇವೆ. ಸದ್ಯ ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಸ್ಥಿರವಾಗಿದೆ. ಇಂದೇ ಡಿಸಿಎಂರನ್ನು ಡಿಸ್ಚಾರ್ಜ್ ಮಾಡುತ್ತೇವೆ ಎಂದು ಬೆಂಗಳೂರಿನ ವೈದೇಹಿ ಆಸ್ಪತ್ರೆ ವೈದ್ಯ ಶ್ರೀನಿವಾಸ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:11 pm, Tue, 27 October 26

ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More
Loading...
Unable to load recommendations.
Follow Us