ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರ

44 ಉಪನ್ಯಾಸಕರು ಕಾರ್ಯಭಾರದ ಕೊರತೆ ಎದುರಿಸುತ್ತಿದ್ದಾರೆ. ಹೀಗಾಗಿ ಕಾರ್ಯಭಾರ ಇರುವ ಕಾಲೇಜಿಗೆ ವರ್ಗಾಯಿಸಲು ತೀರ್ಮಾನ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 05, 2022 | 3:32 PM

ಬೆಂಗಳೂರು: ಕಾರ್ಯಭಾರ ಇಲ್ಲದ ಉಪನ್ಯಾಸಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರ ತೆಗೆದುಕೊಂಡಿದೆ. 44 ಉಪನ್ಯಾಸಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಏಪ್ರಿಲ್ 8 ರಂದು ಕೌನ್ಸೆಲಿಂಗ್ ನಡೆಸುವ ಶಿಕ್ಷಣ ಇಲಾಖೆ 44 ಉಪನ್ಯಾಸಕರ ವರ್ಗಾವಣೆಗೆ ನಿರ್ಧರಿಸಿದೆ. ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯಭಾರದ ಕೊರತೆ ಇದೆ. 44 ಉಪನ್ಯಾಸಕರು ಕಾರ್ಯಭಾರದ ಕೊರತೆ ಎದುರಿಸುತ್ತಿದ್ದಾರೆ. ಹೀಗಾಗಿ ಕಾರ್ಯಭಾರ ಇರುವ ಕಾಲೇಜಿಗೆ ವರ್ಗಾಯಿಸಲು ತೀರ್ಮಾನ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಇಲಾಖೆಯಿಂದ ಸುತ್ತೋಲೆ ಮೂಲಕ ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರು ಪ್ರಕಟ ಮಾಡಲಾಗಿದೆ. ಇಲಾಖೆಯ ಇಎಂಐಎಸ್ ತಂತ್ರಾಂಶದಲ್ಲಿ ಲಭ್ಯವಿರುವ ಅಭ್ಯರ್ಥಿಗಳ ಸೇವಾ ವಿವರ ಪರಿಗಣಿಸಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ಬದಲಾವಣೆ/ ಆಕ್ಷೇಪಣೆ ಇದ್ದಲ್ಲಿ ಏಪ್ರಿಲ್ 6 ರ ಒಳಗೆ ಇಲಾಖೆಯ ಇ-ಮೇಲ್ dce.postshifting2022@gmail.com ಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಏಪ್ರಿಲ್ 7 ರಂದು ಹುದ್ದೆ ಸ್ಥಳಾಂತರ ಮತ್ತು ಹೆಚ್ಚುವರಿ ಕಾರ್ಯಭಾರ ಲಭ್ಯವಿರುವ ಕಾಲೇಜುಗಳ ಅಂತಿಮ ಪಟ್ಟಿ ಪ್ರಕಟ ಮಾಡಲಾಗುತ್ತದೆ. ಏಪ್ರಿಲ್ 8 ರಂದು ವರ್ಗಾವಣೆಗೆ ಕೌನ್ಸೆಲಿಂಗ್ ನಡೆಸಲಾಗುತ್ತದೆ. ನಿಯಮಗಳ ಪ್ರಕಾರ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲೆ, ವಾಣಿಜ್ಯ ಮತ್ತು ಭಾಷಾ ವಿಷಯಗಳ ಬೋಧಕರಿಗೆ ವಾರಕ್ಕೆ 16 ಗಂಟೆ ಮತ್ತು ಪ್ರಾಯೋಗಿಕ ತರಗತಿಗಳಿರುವ ವಿಷಯಗಳ ಬೋಧಕರಿಗೆ ಇರಬೇಕಿರುವ 20 ಗಂಟೆಗಳ ಕಾರ್ಯಭಾರ ಇರಲಿದೆ. ವರ್ಗಾವಣೆ ಪ್ರಕ್ರಿಯೆಯಲ್ಲಿ ಸಾಧ್ಯವಾದಷ್ಟೂ ಮಟ್ಟಿಗೆ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿರುವ ವಲಯದೊಳಗೇ ವರ್ಗಾವಣೆ ಮಾಡಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ: ತಹಶೀಲ್ದಾರ್ ವರ್ಗಾವಣೆ ವಿಚಾರ; ಆರ್ ಅಶೋಕ್ ಮತ್ತು ಅಶ್ವತ್ಥ್ ನಾರಾಯಣ ಮಧ್ಯೆ ಶೀತಲಸಮರ

ಇದನ್ನೂ ಓದಿ: SSLC ಪರೀಕ್ಷೆಗೆ ನೇಮಕಗೊಂಡಿದ್ದ ಮುಖ್ಯ ಶಿಕ್ಷಕ ಹೃದಯಾಘಾತದಿಂದ ಸಾವು

Published On - 3:29 pm, Tue, 5 April 22