ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ
ಮಹಾಮಾರಿ ಕೊರೊನಾ ಹಿನ್ನೆಲೆ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಚಟುವಟಿಕೆಗಳೇ ನಡೆದಿಲ್ಲ. ಆದರೂ ಕ್ರೀಡಾ ನಿಧಿ ಶುಲ್ಕ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯಲಾಗುತ್ತಿದೆ.
ಬೆಂಗಳೂರು: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ವಿದ್ಯಾರ್ಥಿಗಳಿಂದ ಕ್ರೀಡಾ ನಿಧಿ ಶುಲ್ಕ ವಸೂಲಿ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಮಹಾಮಾರಿ ಕೊರೊನಾ ಹಿನ್ನೆಲೆ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಚಟುವಟಿಕೆಗಳೇ ನಡೆದಿಲ್ಲ. ಆದರೂ ಕ್ರೀಡಾ ನಿಧಿ ಶುಲ್ಕ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯಲಾಗುತ್ತಿದೆ. 6,7 ನೇ ತರಗತಿ ವಿದ್ಯಾರ್ಥಿಗಳಿಂದ 5 ರೂ ಹಾಗೂ 8,9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಂದ 15ರೂ ಕ್ರೀಡಾ ನಿಧಿ ಸಂಗ್ರಹಿಸುವಂತೆ ಸುತ್ತೊಲೆಯಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಕ್ರೀಡಾ ಚಟುವಟಿಕೆಗಳು ನಡೆಯದೆ ಇದ್ರೂ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹ ಮಾಡುತ್ತಿರುವ ಬಗ್ಗೆ ಪೋಷಕರು ಮತ್ತು ಖಾಸಗಿ ಶಾಲಾ ಒಕ್ಕೂಟ ಆಕ್ರೋಶ ಹೊರ ಹಾಕಿದೆ.
2021-22ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ನಿಧಿ ಶುಲ್ಕವನ್ನು ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಸಹ ವಸೂಲಿ ಮಾಡುವಂತೆ ತೀರ್ಮಾನಿಸಲಾಗಿದೆ. ಅದರನ್ವಯ ರಾಜ್ಯದ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಡಶಾಲೆಗಳಲ್ಲಿನ 6ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ 6 ಮತ್ತು 7ನೇ ತರಗತಿ ಮಕ್ಕಳಿಂದ ತಲಾ ರೂ.5ರಂತೆ 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಂದ ತಲಾ ರೂ, 15ರಂತೆ ವಸೂಲಿ ಮಾಡಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Ola electric scooter: ಓಲಾ ಎಲೆಕ್ಟ್ರಿಕ್ ಸ್ಕೂಟರ್ಗಳ ಡೆಲಿವರಿ ಇಂದಿನಿಂದ ಶುರು