ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ ಭೋದನೆಗೆ ಸರ್ಕಾರ ಚಿಂತನೆ

| Updated By: ಆಯೇಷಾ ಬಾನು

Updated on: May 05, 2022 | 11:01 AM

ಸರ್ಕಾರ ಈಗಾಗಲೇ ಭಗವದ್ಗೀತೆಯ ಭೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಅಂತಾ ಸಮಿತಿ ಮಾಹಿತಿ ನೀಡಲಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ ಭೋದನೆಗೆ ಸರ್ಕಾರ ಚಿಂತನೆ
ಭಗವದ್ಗೀತೆ
Follow us on

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು ಎಂಬ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಭಗವದ್ಗೀತೆಯ ಜೊತೆಗೆ ರಾಮಾಯಣ ಮಹಾಭಾರತ ಭೋದನೆಗೂ ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದೆ. ಗುಜರಾತ್ ಮಾದರಿ ಫಾಲೋ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಸರ್ಕಾರ ಈಗಾಗಲೇ ಭಗವದ್ಗೀತೆಯ ಭೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಅಂತಾ ಸಮಿತಿ ಮಾಹಿತಿ ನೀಡಲಿದೆ. ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಮಕ್ಕಳಿಗೆ ಗೀತೆ ಭೋದನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಗುಜರಾತ್ ಹಾಗೂ ಬನಾರಸ್ ವಿವಿ ಮಾಡಲ್ ಫಾಲೋ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಗುಜರಾತ್ ಸರ್ಕಾರ ಪಠ್ಯದಲ್ಲಿ ತಂದಿರುವ ಭಗ್ವತಗೀತಾ ಮಾದರಿಯಲ್ಲಿಯೇ rಆಜ್ಯದಲ್ಲೂ ಫಾಲೊ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. Sanatana Dharma Hindu Religion and Ethics ಬುಕ್ ಮಾಡಲ್ ಅಧ್ಯಯನಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳೂತ್ತಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಭೋದನೆಗೆ ಶಿಕ್ಷಣ ಇಲಾಖೆ ಚಿಂತಿಸಿದ್ದು ಪ್ರಾಥಮಿಕ ಹಂತದಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 6-12 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಭೋದನೆಗೆ ಪ್ಲಾನ್ ಮಾಡಿದೆ. ಭಗವದ್ಗೀತೆ, ರಾಮಾಯಣ ಮಹಾಭಾರತದ ತತ್ವಗಳು ಮತ್ತು ಮೌಲ್ಯಗಳನ್ನು ಕಲಿಸಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿತ್ತಿದೆ.

ಇದನ್ನೂ ಓದಿ: ಕುರಾನ್, ಬೈಬಲ್ ರೀತಿ ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ; ಸಚಿವ ಬಿ.ಸಿ. ನಾಗೇಶ್