Karnataka Election 2023: ಮತದಾನದ ವೇಳೆ ಸರದಿ ಸಾಲಿನ ಬಗ್ಗೆ ಚಿಂತಿಸಬೇಕಿಲ್ಲ, ಬರಲಿದೆ ಹೊಸ ಮೊಬೈಲ್ ಅಪ್ಲಿಕೇಶನ್

ಸದ್ಯದಲ್ಲೇ ಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾರರನ್ನು ಸೆಳೆಯಲು ಬಿಬಿಎಂಪಿ ಹೊಸ ಪ್ಲಾನ್ ಹಾಕಿಕೊಂಡಿದೆ. ಅದರಂತೆ ಇನ್ನುಮುಂದೆ ಮತದಾರರು ಉದ್ದನೆಯ ಸರತಿ ಸಾಲುಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಏಕೆಂದರೆ ಎಷ್ಟುದ್ದ ಸಾಲು ಇದೆ ಎಂದು ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶ್ ನೀಡಲಿದೆ.

Karnataka Election 2023: ಮತದಾನದ ವೇಳೆ ಸರದಿ ಸಾಲಿನ ಬಗ್ಗೆ ಚಿಂತಿಸಬೇಕಿಲ್ಲ, ಬರಲಿದೆ ಹೊಸ ಮೊಬೈಲ್ ಅಪ್ಲಿಕೇಶನ್
ಬೆಂಗಳೂರಿನಲ್ಲಿ ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಲು ಹೊಸ ಅಪ್ಲಿಕೇಶನ್ (ಸಾಂದರ್ಭಿಕ ಚಿತ್ರ)
Follow us
Rakesh Nayak Manchi
|

Updated on:Mar 31, 2023 | 11:38 AM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ (Karnataka Assembly Election 2023) ಘೋಷಣೆಯಾಗಿದೆ. ರಾಜಕೀಯ ಪಕ್ಷಗಳು ಹೇಗಪ್ಪಾ ಗೆಲ್ಲೋದು ಅಂತ ರಣತಂತ್ರ ರೂಪಿಸುತ್ತಿದ್ದಾರೆ. ಇತ್ತ ಮತದಾರರು ತಮ್ಮ ಮತ ಚಲಾಯಿಸಲು ಅಯ್ಯಯ್ಯೋ ಈ ಸುಡು ಬಿಸಿಲಿನಲ್ಲಿ ಉದ್ದನೆಯ ಸರದಿ ಸಾಲಿನಲ್ಲಿ ಹೇಗಪ್ಪಾ ನಿಲ್ಲೋದು ಅಂತ ಚಿಂತಿಸುತ್ತಿದ್ದಾರೆ. ಇನ್ನು ಮುಂದೆ ಈ ಬಗ್ಗೆ ಬೆಂಗಳೂರಿನ (Bengaluru) ಮತದಾರರು ಚಿಂತಿಸುವ ಅವಶ್ಯಕತೆ ಇಲ್ಲ. ಏಕೆಂದರೆ ಮತಗಟ್ಟಿಯಲ್ಲಿ ಸರದಿ ಸಾಲಿನ ಬಗ್ಗೆ ಸಂಪೂರ್ಣ ಮಾಹಿತಿ ನಿಮ್ಮ ಮೊಬೈಲ್ ಮೂಲಕ ತಿಳಿದುಕೊಳ್ಳಬಹುದು. ಅದರಲ್ಲಿ ನೀಡಲಾಗುವು ಮಾಹಿತಿ ಆಧರಿಸಿ ಮತದಾರರ ಸಂಖ್ಯೆ ಕಡಿಮೆ ಇದ್ದಾಗ ಮತಗಟ್ಟೆಗೆ ತೆರಳಿ ಮತ ಚಲಾಯಿಸಿ ತಮ್ಮ ವೈಯಕ್ತಿಕ ಕೆಲಸದಲ್ಲಿ ತೊಡಗಿಕೊಳ್ಳಬಹುದಾಗಿದೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಕೇವಲ 55.04 ಶೇಕಡಾ ಮತಗಳು ದಾಖಲಾಗಿದ್ದವು. ಹೀಗಾಗಿ ನಗರದಲ್ಲಿ ಮತದಾರರ ನಿರಾಸಕ್ತಿ ದೊಡ್ಡ ಸವಾಲಾಗಿ ಉಳಿದಿದೆ. ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಜಿಲ್ಲಾ ಚುನಾವಣಾ ಕಚೇರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಜಂಟಿಯಾಗಿ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. “ಮತಗಟ್ಟೆಗಳಲ್ಲಿ ಕಾಯುವ ಸಮಯ ಮತ್ತು ಪಾರ್ಕಿಂಗ್ ಸ್ಥಳದ ಕೊರತೆಯ ಬಗ್ಗೆ ಕಳವಳವಿದೆ. ಈ ಅಪ್ಲಿಕೇಶನ್ ಮತಗಟ್ಟೆಗಳಲ್ಲಿನ ಪರಿಸ್ಥಿತಿಯ ನೈಜ ಸಮಯದ ಅಪ್​ಡೇಟ್ಸ್​ ನೀಡುತ್ತದೆ. ನಾವು ಮತಗಟ್ಟೆಗಳ ಸಮೀಪ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸುತ್ತಿದ್ದೇವೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮತ್ತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.

ಇದನ್ನೂ ಓದಿ: Karnataka Rain: ರಾಜ್ಯದ ಹಲವೆಡೆ ವರ್ಷಧಾರೆ, ಮುಂದಿನ 2 ದಿನ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ

ಮತಗಟ್ಟೆ ಸಿಬ್ಬಂದಿ ಪ್ರತಿ ಗಂಟೆಗೆ ಆ್ಯಪ್ ಅಪ್‌ಡೇಟ್ ಮಾಡುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ್ಯಪ್ ಸರದಿಯಲ್ಲಿರುವ ಮತದಾರರ ಸಂಖ್ಯೆ ಮತ್ತು ಮತ ಚಲಾಯಿಸಲು ತೆಗೆದುಕೊಳ್ಳುವ ಸಮಯವನ್ನು ನಮೂದಿಸುತ್ತದೆ. ಅಧಿಕಾರಿಗಳು ತಮ್ಮ ಹಕ್ಕನ್ನು ಚಲಾಯಿಸಲು ಜನರನ್ನು ಪ್ರೋತ್ಸಾಹಿಸಲು ನಿವಾಸಿಗಳ ಕಲ್ಯಾಣ ಸಂಘಗಳು (RWAs) ಮತ್ತು ನಾಗರಿಕ ಗುಂಪುಗಳೊಂದಿಗೆ ಒಪ್ಪಂದಗಳನ್ನು ನಡೆಸುತ್ತಿದ್ದಾರೆ.

19 ಕ್ಷೇತ್ರಗಳು ವೆಚ್ಚ-ಸೂಕ್ಷ್ಮ; 25 ರಷ್ಟು ಮತಗಟ್ಟೆಗಳು ನಿರ್ಣಾಯಕ

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ವೆಚ್ಚ-ಸೂಕ್ಷ್ಮ ಎಂದು ಗುರುತಿಸಲಾಗಿದ್ದು, ಇನ್ನೆರಡು ಮತಗಟ್ಟೆಗಳನ್ನು ಮುಂದಿನ ದಿನಗಳಲ್ಲಿ ಪಟ್ಟಿಗೆ ಸೇರಿಸಲು ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ. “ಸೂಕ್ಷ್ಮ ಕ್ಷೇತ್ರಗಳಲ್ಲಿ, ಅಭ್ಯರ್ಥಿಗಳಿಂದ ಹೆಚ್ಚು ಖರ್ಚು ಮಾಡುವುದನ್ನು ತಡೆಯಲು ಇಬ್ಬರು ಹೆಚ್ಚುವರಿ ಸಹಾಯಕ ವೆಚ್ಚ ವೀಕ್ಷಕರನ್ನು ನೇಮಿಸಲಾಗುವುದು” ಎಂದು ಗಿರಿನಾಥ್ ಹೇಳಿದರು.

8,615 ಮತಗಟ್ಟೆಗಳಲ್ಲಿ 2,217 ಮತಗಟ್ಟೆ ಹಿಂಸಾಚಾರದ ಇತಿಹಾಸ, ಹೆಚ್ಚಿನ ಸಂಖ್ಯೆಯ EPIC ಅಲ್ಲದ ಮತದಾರರ ಮತದಾನ ಮತ್ತು ಇತರ ಕಾರಣಗಳಿಂದಾಗಿ ನಿರ್ಣಾಯಕವೆಂದು ಘೋಷಿಸಲಾಗಿದೆ. ಮತದಾರರು ತಮ್ಮ ಸಾಮಾಜಿಕ ಮತ್ತು ಆರ್ಥಿಕ ಸ್ತರಗಳಿಂದ ಸುಲಭವಾಗಿ ಪ್ರಭಾವಿತರಾಗಬಹುದಾದ್ದರಿಂದ ಕೆಲವು ಬೂತ್‌ಗಳನ್ನು ದುರ್ಬಲ ಎಂದು ಗುರುತಿಸಲಾಗಿದೆ. ಮತದಾನದ ದಿನವಾದ ಮೇ 10 ರಂದು ನಗರದಾದ್ಯಂತ ಕನಿಷ್ಠ 38,000 ಸಿಬ್ಬಂದಿ ಕರ್ತವ್ಯದಲ್ಲಿರುತ್ತಾರೆ.

ವಿಧಾನಸಭೆ ಚುನಾವಣೆಯ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:37 am, Fri, 31 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ