AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಿಕ್ ವಾಹನ ಸವಾರರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ 1,250 ಸರಕಾರಿ ಜಾಗಗಳಲ್ಲಿ ಇವಿ ಚಾರ್ಜಿಂಗ್ ಹಬ್!

ಕರ್ನಾಟಕದಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಸರಕಾರಿ ಜಾಗಗಳಲ್ಲಿ 1,250 ನೂತನ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. 'ಪಿಎಂ ಇ-ಡ್ರೈವ್' ಯೋಜನೆಯಡಿ ಮೆಟ್ರೋ, ಆಸ್ಪತ್ರೆ ಹಾಗೂ ಸರಕಾರಿ ಕಚೇರಿಗಳಲ್ಲಿ 24 ಗಂಟೆಯೂ ಲಭ್ಯವಾಗಲಿರುವ ಈ ಚಾರ್ಜಿಂಗ್ ಹಬ್‌ಗಳ ಸ್ಥಾಪನೆಯ ಸಂಪೂರ್ಣ ಮಾಹಿತಿ ಮತ್ತು ಬೆಸ್ಕಾಂ ಯೋಜನೆಯ ವಿವರ ಇಲ್ಲಿದೆ.

ಎಲೆಕ್ಟ್ರಿಕ್ ವಾಹನ ಸವಾರರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ 1,250 ಸರಕಾರಿ ಜಾಗಗಳಲ್ಲಿ ಇವಿ ಚಾರ್ಜಿಂಗ್ ಹಬ್!
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on: Aug 30, 2026 | 11:34 AM

Share

ಮುಖ್ಯಾಂಶಗಳು

  • ರಾಜ್ಯದಾದ್ಯಂತ ಸರಕಾರಿ ಜಾಗಗಳಲ್ಲಿ 1,250 ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ.
  • 'ಪಿಎಂ ಇ-ಡ್ರೈವ್' ಯೋಜನೆಯಡಿ 24 ಗಂಟೆಯೂ ಸಾರ್ವಜನಿಕರಿಗೆ ಸೇವೆಯು ಲಭ್ಯವಿರಲಿದೆ.
  • ಬೆಸ್ಕಾಂ ಸಂಸ್ಥೆಯು ಇವಿ ಕೇಂದ್ರಗಳ ಸ್ಥಾಪನೆ ಮತ್ತು ನಿರ್ವಹಣೆ ಜವಾಬ್ದಾರಿ ವಹಿಸಲಿದೆ.

ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬಳಕೆಯನ್ನು ಉತ್ತೇಜಿಸಲು ಹಾಗೂ ಚಾರ್ಜಿಂಗ್ ಮೂಲಸೌಕರ್ಯವನ್ನು ಬಲಪಡಿಸಲು ಕರ್ನಾಟಕ ಸರ್ಕಾರ ಬೃಹತ್ ಹೆಜ್ಜೆ ಇಟ್ಟಿದೆ. ಕೇಂದ್ರ ಸರ್ಕಾರದ ‘ಪಿಎಂ ಇ-ಡ್ರೈವ್’ (PM E-DRIVE) ಯೋಜನೆಯಡಿ ರಾಜ್ಯದ ವಿವಿಧ ಸರ್ಕಾರಿ ಆಸ್ತಿ ಹಾಗೂ ಜಾಗಗಳಲ್ಲಿ ಒಟ್ಟು 1,250 ಸಾರ್ವಜನಿಕ ಇವಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಚಟುವಟಿಕೆಗಳನ್ನು ಚುರುಕುಗೊಳಿಸಲಾಗಿದೆ.

ಎಲ್ಲೆಲ್ಲಿ ಚಾರ್ಜಿಂಗ್ ಕೇಂದ್ರ

ಈ ಯೋಜನೆಗೆ ಸಂಬಂಧಿಸಿದಂತೆ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಬೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಗುರುತಿಸಲಾದ ಜಾಗಗಳನ್ನು ತಕ್ಷಣವೇ ಹಸ್ತಾಂತರಿಸಲು ಸೂಚಿಸಿದ್ದಾರೆ. ಈ ಯೋಜನೆಯಡಿ ಎರಡು ಪ್ರಮುಖ ವಿಭಾಗಗಳಲ್ಲಿ ಚಾರ್ಜಿಂಗ್ ಕೇಂದ್ರಗಳು ಬರಲಿವೆ ಎಂದು ದಿ ಹಿಂದು ವರದಿ ಮಾಡಿದೆ.

  • ವಿಭಾಗ ‘ಎ’: ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು, ಶಾಲೆಗಳು ಮತ್ತು ಕಾಲೇಜು ಆವರಣಗಳು.
  • ವಿಭಾಗ ‘ಬಿ’: ರೈಲ್ವೆ ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಮೆಟ್ರೋ ಹಾಗೂ ಬಸ್ ನಿಲ್ದಾಣಗಳು.

ಮೊದಲ ಹಂತದಲ್ಲಿ ಕೇಂದ್ರ ಭಾರಿ ಕೈಗಾರಿಕೆಗಳ ಸಚಿವಾಲಯವು ಸಮೀಕ್ಷೆ ನಡೆಸಿದ 687 ಜಾಗಗಳ ಪೈಕಿ 515 ತಾಣಗಳಿಗೆ ಈಗಾಗಲೇ ಅನುಮೋದನೆ ದೊರೆತಿದೆ. 33ಕ್ಕೂ ಹೆಚ್ಚು ಸರ್ಕಾರಿ ಇಲಾಖೆಗಳ ಜಾಗವನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

24×7 ಲಭ್ಯತೆ

ಈ ಸಾರ್ವಜನಿಕ ಇವಿ ಚಾರ್ಜಿಂಗ್ ಕೇಂದ್ರಗಳು ಸಾರ್ವಜನಿಕರಿಗೆ ದಿನದ 24 ಗಂಟೆಯೂ ಲಭ್ಯವಿರಲಿವೆ. ವಾಹನಗಳ ಸುಲಭ ಸಂಚಾರಕ್ಕಾಗಿ ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಇಂಧನ ಸಚಿವಾಲಯದ ಮಾರ್ಗದರ್ಶಿ ಸೂತ್ರಗಳ ಪ್ರಕಾರ, ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪಿಸಲು ಜಾಗ ನೀಡುವ ಸರ್ಕಾರಿ ಇಲಾಖೆಗಳಿಗೆ ಬಳಕೆಯಾಗುವ ಪ್ರತಿಯೊಂದು ಯೂನಿಟ್ (kWh) ವಿದ್ಯುತ್‌ಗೆ 1 ರೂಪಾಯಿಯಂತೆ ಆದಾಯದ ಪಾಲು (Revenue share) ಸಿಗಲಿದೆ.

ಈ ಯೋಜನೆಗಾಗಿ ಬೆಸ್ಕಾಂ ಮತ್ತು ಸಂಬಂಧಿತ ಇಲಾಖೆಗಳ ನಡುವೆ 10 ವರ್ಷಗಳ ಒಪ್ಪಂದ ಏರ್ಪಡಲಿದ್ದು, ಬೆಸ್ಕಾಂ ಸಂಸ್ಥೆಯು ಈ ಕೇಂದ್ರಗಳ ಸ್ಥಾಪನೆ, ನಿರ್ವಹಣೆ ಮತ್ತು ಕಾರ್ಯಾಚರಣೆಯ ಜವಾಬ್ದಾರಿಯನ್ನು ಹೊರಲಿದೆ. ಸಾರ್ವಜನಿಕರು ಸುಲಭವಾಗಿ ಚಾರ್ಜಿಂಗ್ ಸ್ಪಾಟ್‌ಗಳನ್ನು ಹುಡುಕಲು ಹಾಗೂ ಪಾವತಿ ಮಾಡಲು ಬೆಸ್ಕಾಂನ ‘EV Mitra’ (ಇವಿ ಮಿತ್ರ) ಆ್ಯಪ್‌ನೊಂದಿಗೆ ಇವುಗಳನ್ನು ಸಂಯೋಜಿಸಲಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಬಿಗ್ ಬಾಸ್ ಮನೆಯಲ್ಲಿ ಟಫ್ ಟಾಸ್ಕ್; ಹೈರಾಣಾದ ಸ್ಪರ್ಧಿಗಳು
ಬಿಗ್ ಬಾಸ್ ಮನೆಯಲ್ಲಿ ಟಫ್ ಟಾಸ್ಕ್; ಹೈರಾಣಾದ ಸ್ಪರ್ಧಿಗಳು
ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಅಡುಗೆ, ಊಟ-ನಿದ್ದೆ!
ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಅಡುಗೆ, ಊಟ-ನಿದ್ದೆ!
ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ
ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ