AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಂ ಪ್ರಕಾಶ್​ ಕೊಲೆ ಪ್ರಕರಣ: ನಿವೃತ್ತ ಪೊಲೀಸ್‌ ಮಹಾನಿರ್ದೇಶಕರ ಪತ್ನಿ ಪಲ್ಲವಿ ಬಂಧನ

ಕರ್ನಾಟಕದಲ್ಲಿ ಸದ್ಯ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್​ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ, ಬಳಿಕ ಸಾಂತ್ವಾನ ಕೇಂದ್ರದಲ್ಲಿ ಇರಿಸಲಾಗಿತ್ತು. ಇದೀಗ ಪೊಲೀಸರು ಪಲ್ಲವಿಯವರನ್ನು ಬಂಧಿಸಿದ್ದಾರೆ.

ಓಂ ಪ್ರಕಾಶ್​ ಕೊಲೆ ಪ್ರಕರಣ: ನಿವೃತ್ತ ಪೊಲೀಸ್‌ ಮಹಾನಿರ್ದೇಶಕರ ಪತ್ನಿ ಪಲ್ಲವಿ ಬಂಧನ
ಓಂ ಪ್ರಕಾಶ್, ಪತ್ನಿ ಪಲ್ಲವಿ
Follow us
Jagadisha B
| Updated By: ಗಂಗಾಧರ​ ಬ. ಸಾಬೋಜಿ

Updated on:Apr 21, 2025 | 12:41 PM

ಬೆಂಗಳೂರು, ಏಪ್ರಿಲ್​ 21: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) ಕೊಲೆ ಕೇಸ್​ ಸದ್ಯ ಕರ್ನಾಟಕದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ ಪಲ್ಲವಿಯನ್ನ (Pallavi) ಹೆಚ್​ಎಸ್​ಆರ್​​ ಲೇಔಟ್​​ ಪೊಲೀಸರು ಬಂಧಿಸಿದ್ದಾರೆ. ನಗರದ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲೇ ಓಂ ಪ್ರಕಾಶ್ ನಿನ್ನೆ ಹತ್ಯೆಯಾಗಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಓಂ ಪ್ರಕಾಶ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರ ದೂರು ನೀಡಿದ್ದರು. ಮೊದಲಿಗೆ ಯಾರನ್ನು ಬಂಧಿಸಿರಲಿಲ್ಲ. ಅವರ ಪತ್ನಿ, ಮಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಇದೀಗ ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನು ಬಂಧಿಸಿಲಾಗಿದೆ.

ಇದನ್ನೂ ಓದಿ: ಓಂ ಪ್ರಕಾಶ್​ ಕೊಲೆ ಪ್ರಕರಣ: ತನಿಖಾಧಿಕಾರಿಗಳ ಎದುರು ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಪತ್ನಿ ಪಲ್ಲವಿ

ಇದನ್ನೂ ಓದಿ
Image
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
Image
ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್
Image
ಓಂ ಪ್ರಕಾಶ್​ ಕೊಲೆ: ಪತಿಯನ್ನು 8-10 ಬಾರಿ ಇರಿದು ಕೊಂದ ಪತ್ನಿ?
Image
ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ 

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ, ಪುತ್ರಿ ಕೃತಿ, ಪುತ್ರ ಕಾರ್ತಿಕೇಶ್​ ಸೇರಿದಂತೆ ಕುಟುಂಬಸ್ಥರು ಮತ್ತು ಸಂಬಂಧಿಕರ ಹೇಳಿಕೆಯನ್ನು HSR ಲೇಔಟ್​​ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಜೊತೆಗೆ ಒಟ್ಟು ಮೂರು ಮೊಬೈಲ್ ಸೀಜ್ ಮಾಡಿದ್ದಾರೆ. ಪ್ರಾಥಮಿಕ ವಿಚಾರಣೆ ವೇಳೆ ಆತ್ಮ ರಕ್ಷಣೆಗಾಗಿ ಕೊಲೆ ಮಾಡಿರುವುದಾಗಿ ಪತ್ನಿ ಪಲ್ಲವಿ, ಮಡಿವಾಳ ಎಸಿಪಿ ವಾಸುದೇವ್ ಮುಂದೆ ಹೇಳಿದ್ದಾರೆ.

ಕೊಲೆಯ ರಹಸ್ಯ ಬಿಚ್ಚಿಟ್ಟ ಪಲ್ಲವಿ

ಪಲ್ಲವಿ ಕೊಲೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಮೊದಲು ಓಂ ಪ್ರಕಾಶ್ ಮೇಲೆ ಖಾರದ ಪುಡಿ ಎರಚಿ, ಬಳಿಕ ಅಡುಗೆ ಎಣ್ಣೆಯನ್ನೂ ಸುರಿದಿದ್ದಾರೆ. ಕೈ ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದ್ದಾಗಿ ಪಲ್ಲವಿ ಮಾಹಿತಿ ನೀಡಿದ್ದಾರೆ. ಓಂ ಪ್ರಕಾಶ್‌ಗೆ 8-10 ಬಾರಿ ಇರಿಯಲಾಗಿದ್ದು, ಎದೆ, ಹೊಟ್ಟೆ, ಕೈಗೆ ಚಾಕುವಿನಿಂದ ಇರಿಯಲಾಗಿದೆ. ಹೊಟ್ಟೆ ಭಾಗಕ್ಕೆ 4-5 ಬಾರಿ ಇರಿದು ಹತ್ಯೆಗೈಯಲಾಗಿದೆ.

15 ರಿಂದ 20 ನಿಮಿಷ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಒದ್ದಾಟ

ಪತ್ನಿಯಿಂದ ಭೀಕರ ದಾಳಿಗೆ ಒಳಗಾದ ಓಂ ಪ್ರಕಾಶ್ ರಕ್ತ ಸಿಕ್ತರಾಗಿದ್ದರು. ಬರೋಬ್ಬರಿ 15 ರಿಂದ 20 ನಿಮಿಷಗಳ ಕಾಲ ರಕ್ತದ ಮಡುವಿನಲ್ಲೇ ಬಿದ್ದು ಒದ್ದಾಡಿದ್ದಾರೆ. ಆಘಾತಕಾರಿ ವಿಚಾರ ಏನಂದರೆ, ಗಂಡ ನೆಲಕ್ಕೆ ಬಿದ್ದು ನರಳಾಡೋದನ್ನ ಪತ್ನಿ ಪಲ್ಲವಿ ನೋಡುತ್ತಾ ನಿಂತಿದ್ರಂತೆ. ಓಂ ಪ್ರಕಾಶ್ ಕೊನೆ ಉಸಿರು ಬಿಡೋವರೆಗೂ ಕಾಯುತ್ತಿದ್ದರಂತೆ. ಕೊನೆಗೆ ಪತಿ ಸತ್ತ ಬಳಿಕ ಐಪಿಎಸ್ ಅಧಿಕಾರಿಯೊಬ್ಬರ ಪತ್ನಿ ಹಾಗೂ HSR ಲೇಔಟ್ ಠಾಣೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ

ಬೆಂಗಳೂರಿನ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿರು ತಮ್ಮದೇ ನಿವಾಸದಲ್ಲಿ ಓಂ ಪ್ರಕಾಶ್‌ ನಿನ್ನೆ ಬರ್ಬರವಾಗಿ ಕೊಲೆ ಆಗಿದ್ದರು. ಮೊದಲಿಗೆ ಓಂ ಪ್ರಕಾಶ್ ಅವರನ್ನು​ ಹೆಂಡತಿಯೇ ಈ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿತ್ತು. ರಾಜ್ಯದ ಪೊಲೀಸ್ ಇಲಾಖೆಯನ್ನೇ ಮುನ್ನಡೆಸಿದ್ದವರು ಕೊಲೆ ಆಗಿದ್ದಾರೆ ಅನ್ನೋದು ಗೊತ್ತಾಗ್ತಿದ್ದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಆದಿಯಾಗಿ ಇಡೀ ಪೊಲೀಸ್ ಅಧಿಕಾರಿಗಳು ಓಂ ಪ್ರಕಾಶ್‌ ನಿವಾಸಕ್ಕೆ ದೌಡಾಯಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:41 am, Mon, 21 April 25