KEA ನಿಗಮ- ಮಂಡಳಿಗಳ ಹುದ್ದೆ ಭರ್ತಿಗೆ ಇಂದು-ನಾಳೆ ಪರೀಕ್ಷೆ, ಹಿಜಾಬ್‌ಗೆ ಅವಕಾಶ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಕಿಯೋನಿಕ್ಸ್, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಇಂದು (ಅ.28) ಮತ್ತು ನಾಳೆ (ಅ.29) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಯಲಿದೆ.
ಬೆಂಗಳೂರು, ಅ.28: ಹಿಜಾಬ್ (Hijab) ಗದ್ದಲದ ನಡುವೆಯೇ ಇಂದು ನೇಮಕಾತಿ ಪರೀಕ್ಷೆ ನಡೆಸಲು ಪ್ರಾಧಿಕಾರ ಮುಂದಾಗಿದೆ. ಕಿಯೋನಿಕ್ಸ್, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಇಂದು (ಅ.28) ಮತ್ತು ನಾಳೆ (ಅ.29) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಯಲಿದೆ (Karnataka Examination Authority). ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಹಿಂದೂಪರ ಸಂಘಟನೆಗಳು ಹಿಜಾಬ್‌ಗೆ ವಿರೋಧ ವ್ಯಕ್ತಪಡಿಸಿದ್ದವು. ವಿರೋಧದ ನಡುವೆಯೇ ಇಂದು ಪರೀಕ್ಷೆ ನಡೆಸಲು ಪ್ರಾಧಿಕಾರ ಮುಂದಾಗಿದ್ದು ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸೂಚಿಸಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಮಹಿಳಾ ಸಿಬ್ಬಂದಿಯಿಂದ ಅಭ್ಯರ್ಥಿಗಳ ತಪಾಸಣೆ ಮಾಡಲಾಗುತ್ತೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಈ ಎರಡು ದಿನಗಳ ಪರೀಕ್ಷೆಗೆ ಸಂಬಂಧಿಸಿದ ಹಾಗೆ ಆಯಾ ಜಿಲ್ಲಾಧಿಕಾರಿಗಳ ಹೆಗಲಿಗೆ ಜವಾಬ್ದಾರಿ ನೀಡಲಾಗಿದೆ. ಇಂದು ಬೆಂಗಳೂರಿನ 72 ಕೇಂದ್ರ ಸೇರಿ ರಾಜ್ಯದ ಒಟ್ಟು 350 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು ಎಲ್ಲಾ ಕೇಂದ್ರಗಳಲ್ಲಿ 1.75 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನಾಳೆ 870 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಬೆಂಗಳೂರಿನಲ್ಲಿ 95 ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಯಾವ್ಯಾವ ಹುದ್ದೆಗೆ ಪರೀಕ್ಷೆ
-ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ -ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್, ಆಹಾರ ನಿಗಮ -ಸೈನಿಕ ಕಲ್ಯಾಣ ಮತ್ತು ಪುನರ್ ವಸತಿ ಇಲಾಖೆ, ಒಟ್ಟು 720 ಖಾಲಿ ಹುದ್ದೆಗೆ KEA ಪರೀಕ್ಷೆ ನಡೆಸುತ್ತಿದೆ.
ಇದನ್ನೂ ಓದಿ: ‘ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ: ಹಿಂದೂಪರ ಸಂಘಟನೆಗಳ ಆಕ್ರೋಶ
ಹಿಜಾಬ್ ಧರಿಸಿ ಪರೀಕ್ಷೆಗೆ ಅವಕಾಶ ನೀಡಿರುವ ಕೆಇಎ ಕೆಲವು ಷರತ್ತು ಹಾಕಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಅಂತಾ ತಿಳಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಗಲಾಟೆ ತಪ್ಪಿಸಲು ಈ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿಯಾದ ರಮ್ಯಾ ತಿಳಿಸಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ