AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ, ಹೈದರಾಬಾದ್ ಮುಸ್ಲಿಮರಿಂದ ಕರ್ನಾಟಕ ರೈತರಿಗೆ ಚಿತ್ರಹಿಂಸೆಯಾಗುತ್ತಿದೆ; ಹಿಂದೂ ಸಂಘಟನೆಯ ಮುಖಂಡ ಭರತ್ ಶೆಟ್ಟಿ

ಕೇರಳ ಮುಸ್ಲಿಮರು ಧರ್ಮ ಸಂಘರ್ಷಕ್ಕೆ ಕಾರಣವಾಗಿದ್ದಾರೆ. ರಾಜ್ಯದ ಮುಸ್ಲಿಮರು ರಾಜ್ಯದ ಜನರ ಪರವಾಗಿ ನಿಲ್ಲಬೇಕು. ಮಾವಿನ ವಿಚಾರವಲ್ಲದೆ, ಇತರೆ ಬೆಳೆಗಾರರ ನೋವು ಗೊತ್ತು.

ಕೇರಳ, ಹೈದರಾಬಾದ್ ಮುಸ್ಲಿಮರಿಂದ ಕರ್ನಾಟಕ ರೈತರಿಗೆ ಚಿತ್ರಹಿಂಸೆಯಾಗುತ್ತಿದೆ; ಹಿಂದೂ ಸಂಘಟನೆಯ ಮುಖಂಡ ಭರತ್ ಶೆಟ್ಟಿ
ಹಿಂದೂ ಸಂಘಟನೆಯ ಮುಖಂಡ ಭರತ್ ಶೆಟ್ಟಿ
TV9 Web
| Updated By: sandhya thejappa|

Updated on:Apr 06, 2022 | 9:10 AM

Share

ಬೆಂಗಳೂರು: ಕೇರಳ, ಹೈದರಾಬಾದ್ ಮುಸ್ಲಿಮರಿಂದ (Muslims) ನಮ್ಮ ರಾಜ್ಯದ ರೈತರಿಗೆ (Farmers) ಚಿತ್ರಹಿಂಸೆಯಾಗುತ್ತಿದೆ ಎಂದು ಹಿಂದೂ ಸಂಘಟನೆಯ ಮುಖಂಡ ಭರತ್ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಹೊರ ರಾಜ್ಯದ ಮುಸ್ಲಿಮರಿಂದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಆರೋಪ ಮಾಡಿರುವ ಭರತ್ ಶೆಟ್ಟಿ, ಮಧ್ಯವರ್ತಿಗಳಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಬಗ್ಗೆ ಧ್ವನಿ ಎತ್ತಿದ್ರೆ ಧರ್ಮ ವಿರೋಧಿಗಳು ಅಂತ ಪಟ್ಟ ಕಟ್ಟುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಹಿಂದೂ, ಮುಸ್ಲಿಮರಲ್ಲಿ ಸೌಹಾರ್ದತೆ ಇತ್ತು. ಕೇರಳ ಮುಸ್ಲಿಮರು ನಮ್ಮ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಹೇಳಿದರು.

ಕೇರಳ ಮುಸ್ಲಿಮರು ಧರ್ಮ ಸಂಘರ್ಷಕ್ಕೆ ಕಾರಣವಾಗಿದ್ದಾರೆ. ರಾಜ್ಯದ ಮುಸ್ಲಿಮರು ರಾಜ್ಯದ ಜನರ ಪರವಾಗಿ ನಿಲ್ಲಬೇಕು. ಮಾವಿನ ವಿಚಾರವಲ್ಲದೆ, ಇತರೆ ಬೆಳೆಗಾರರ ನೋವು ಗೊತ್ತು. ಶುಂಠಿ ಬೆಳೆಗಾರರು, ರೇಷ್ಮೆ ಬೆಳೆಗಾರರ ನೋವು ಗೊತ್ತು. ನಾವು ಕರ್ನಾಟಕದ ರೈತರ ಪರವಾಗಿ ಧ್ವನಿ ಎತ್ತಿದ್ದೇವೆ. ಈ ವಿಚಾರದಲ್ಲಿ ಹಿಂದೂ ಕನ್ನಡಿಗರು ಎಚ್ಚರಿಕೆಯ ಸಂದೇಶ ರವಾನೆ ಮಾಡುತ್ತೇವೆ ಎಂದು ಭರತ್ ಶೆಟ್ಟಿ ತಿಳಿಸಿದ್ದಾರೆ.

ಧ್ವನಿವರ್ಧಕ ಬಳಕೆ ವಿರೋಧಿಸಿ ಭಜನೆ: ನೆಲಮಂಗಲ: ಆಜಾನ್‌ಗೆ ಧ್ವನಿವರ್ಧಕ ಬಳಕೆ ವಿರೋಧಿಸಿ ಬೆಂಗಳೂರಿನ ಟಿ.ದಾಸರಹಳ್ಳಿಯ ದೇಗುಲದಲ್ಲಿ ಭಜನೆ ಮಾಡಿದ್ದಾರೆ. ವಿಶ್ವ ಹಿಂದೂ ಪರಿಷತ್‌ ದೇಗುಲದಲ್ಲಿ ಭಜನೆ ಮಾಡಿದೆ.

ಲೈಸೆನ್ಸ್ ನೀಡುವ ಅಧಿಕಾರ ಪೊಲೀಸ್ ಇಲಾಖೆಗೆ ಹಸ್ತಾಂತರ? ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿವಾದ ವಿಚಾರಕ್ಕೆ ಸಂಬಂಧಿಸಿ ಲೈಸೆನ್ಸ್ ನೀಡುವ ಅಧಿಕಾರ ಪೊಲೀಸ್ ಇಲಾಖೆಗೆ ಹಸ್ತಾಂತರ ಮಾಡುವ ಸಾಧ್ಯತೆಯಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡುತ್ತಿತ್ತು. ಪೊಲೀಸರಿಂದ ಲೈಸೆನ್ಸ್ ಪಡೆಯುವಂತೆ ಮಾಡಲು ಚಿಂತನೆ ಮಾಡಲಾಗಿದೆ. ಆಯಾ ಠಾಣಾ ವ್ಯಾಪ್ತಿಯಲ್ಲಿ ಅನುಮತಿ ಪಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ

ದೆಹಲಿ ಸಚಿವ ಸತ್ಯೇಂದ್ರ ಜೈನ್​ ಕುಟುಂಬಕ್ಕೆ ಸೇರಿದ 481 ಕೋಟಿ ರೂ.ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.

ಬಿಬಿಎಂಪಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು; ಒಂದೇ ಕಾಮಗಾರಿಗೆ ಎರಡೆರಡು ಬಾರಿ ಹಣ ಪಾವತಿ

Published On - 9:07 am, Wed, 6 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ