AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗು ಬ್ಯಾನ್ ಬೆನ್ನಲ್ಲೇ ಮಸಾಲೆ ಪೌಡರ್‌ಗಳಿಗೂ FDA ಶಾಕ್: ರಾಜ್ಯಾದ್ಯಂತ ಸ್ಯಾಂಪಲ್ ಪರೀಕ್ಷೆಗೆ ಸಿದ್ಧತೆ

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಮಸಾಲೆ ಪದಾರ್ಥಗಳ ಕಲಬೆರಕೆ ವಿರುದ್ಧ ಬಿರುಸಿನ ಕಾರ್ಯಾಚರಣೆ ನಡೆಸುತ್ತಿದೆ. ಕಳಪೆ ಇಂಗು ಮಾರಾಟ ನಿಷೇಧದ ಬೆನ್ನಲ್ಲೇ, ಈಗ ಮಸಾಲೆ ಪುಡಿಗಳಲ್ಲಿ ಇಥಿಲೀನ್ ಆಕ್ಸೈಡ್ (ETO) ಮತ್ತು ಕೃತಕ ಬಣ್ಣಗಳ ಬಳಕೆಯ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಮಾದರಿಗಳನ್ನು ಸಂಗ್ರಹಿಸಿ NABL ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗುತ್ತಿದೆ. ಸುರಕ್ಷತಾ ಮಾನದಂಡ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಸಜ್ಜಾಗಿದೆ.

ಇಂಗು ಬ್ಯಾನ್ ಬೆನ್ನಲ್ಲೇ ಮಸಾಲೆ ಪೌಡರ್‌ಗಳಿಗೂ FDA ಶಾಕ್: ರಾಜ್ಯಾದ್ಯಂತ ಸ್ಯಾಂಪಲ್ ಪರೀಕ್ಷೆಗೆ ಸಿದ್ಧತೆ
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Aug 31, 2026 | 11:09 AM

Share

ಬೆಂಗಳೂರು, ಆ.31: ರಾಜ್ಯ ರಾಜಧಾನಿ ಸೇರಿದಂತೆ ಹಲವು ಕಡೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಹಾರ ಉತ್ಪನ್ನಗಳಲ್ಲಿ ಕಲಬೆರಕೆಯಾಗಿರುವುದನ್ನು ಪತ್ತೆ ಮಾಡಿ, ಬ್ಯಾನ್ ಮಾಡುತ್ತಿದೆ. ಇದರ ಜತೆಗೆ ಹೋಟೆಲ್, ರೆಸ್ಟೋರೆಂಟ್​ಗಳ ಮೇಲೆ ದಾಳಿ ಮಾಡಿದೆ. ರಾಜ್ಯದ ಹಲವು ಕಡೆ ಅಧಿಕಾರಿಗಳು ಬಿರುಸಿನ ಕಾರ್ಯಚರಣೆ ಮಾಡುತ್ತಿದೆ. ಇನ್ನು ಇತ್ತಿಚೇಗೆ ಕಳಪೆ ಮಟ್ಟದ ಇಂಗು (Asafoetida) ಮಾರಾಟದ ವಿರುದ್ಧ ಕ್ರಮವನ್ನು ತೆಗೆದುಕೊಂಡ ಬೆನ್ನಲ್ಲೇ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FDA) ಇದೀಗ ಮಸಾಲೆ ಪದಾರ್ಥಗಳು ಹಾಗೂ ಮಸಾಲೆ ಪೌಡರ್‌ಗಳ ಮೇಲೆ ತೀವ್ರ ಕಣ್ಣಿಟ್ಟಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಬ್ರ್ಯಾಂಡ್‌ಗಳ ಮಸಾಲೆ ಉತ್ಪನ್ನಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಹಾಗೂ ಕೃತಕ ಬಣ್ಣಗಳನ್ನು ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.

ಮಸಾಲೆ ಪದಾರ್ಥಗಳಲ್ಲಿ ಇಥಿಲೀನ್ ಆಕ್ಸೈಡ್ (ETO) ನಂತಹ ಅಪಾಯಕಾರಿ ಕೆಮಿಕಲ್ ಬಳಕೆಯಾಗುತ್ತಿರುವ ಶಂಕೆ ವ್ಯಕ್ತವಾಗಿದ್ದು, ಬಳಕೆಗೆ ಸ್ಪಷ್ಟ ಹಾಗೂ ಕಠಿಣ ಮಾನದಂಡಗಳನ್ನು ರೂಪಿಸುವಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕೇಂದ್ರ FSSAIಗೆ ಮನವಿ ಸಲ್ಲಿಸಿದೆ. ರಾಜ್ಯದ ಮನವಿ ಹಾಗೂ ದೂರುಗಳ ಬೆನ್ನಲ್ಲೇ ಕೇಂದ್ರ ಆಹಾರ ಅಭಿವೃದ್ಧಿ ಮಂಡಳಿ ಮತ್ತು FSSAI ಸಹ ಈ ವಿಚಾರದಲ್ಲಿ ಹೈಅಲರ್ಟ್ ಆಗಿವೆ.

ಪ್ರಮುಖವಾಗಿ ಎವರೆಸ್ಟ್ ಹಾಗೂ ಎಲ್‌ಜಿ ಕಂಪನಿಗಳ ಇಂಗು ಉತ್ಪನ್ನಗಳಲ್ಲಿ ಶೇಕಡಾವಾರು ಆಲ್ಕೋಹಾಲ್ ಸೋಲ್ಯುಬಲ್ ಪ್ರಮಾಣ ಕಡಿಮೆಯಿದ್ದು, ಕಳಪೆ ಗುಣಮಟ್ಟ ಕಂಡುಬಂದಿದ್ದರಿಂದ ಅವುಗಳ ಮಾರಾಟ ಹಾಗೂ ಉತ್ಪಾದನೆಗೆ ನಿಷೇಧ ಹೇರಲಾಗಿತ್ತು. ಈ ಘಟನೆ ಆಹಾರ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು. ಇದೀಗ ರಾಜ್ಯದ ಮಾರುಕಟ್ಟೆಯಲ್ಲಿ ಸಿಗುವ ಸಾಂಬಾರ್ ಪೌಡರ್, ಗರಂ ಮಸಾಲೆ, ಚಿಕನ್ ಮಸಾಲೆ, ಅರಿಶಿನ ಹಾಗೂ ಖಾರದ ಪುಡಿ ಸೇರಿದಂತೆ ಪ್ರಮುಖ ಮಸಾಲೆ ಉತ್ಪನ್ನಗಳ ಸ್ಯಾಂಪಲ್‌ಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ.

ಇದನ್ನೂ ಓದಿ; ನೇಪಾಳ ಪ್ರವಾಹ, ದುರಂತ: ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ, ಸಿಎಂ ವಿಶೇಷ ಕರ್ತವ್ಯಾಧಿಕಾರಿ ಅಭಿಜಿತ್ ಗೌಡಗೆ ಹೊಣೆ

ಸಂಗ್ರಹಿಸಿದ ಮಾದರಿಗಳನ್ನು ಅಧಿಕೃತ NABL ಮಾನ್ಯತೆ ಪಡೆದ ಪ್ರಯೋಗಾಲಯಗಳಿಗೆ ಕಳುಹಿಸಿ, ಕೃತಕ ಬಣ್ಣ, ಕೀಟನಾಶಕಗಳ ಶೇಷ ಹಾಗೂ ಕೆಮಿಕಲ್ ಪ್ರಮಾಣ ಪರೀಕ್ಷಿಸಲಾಗುತ್ತದೆ. ಪರೀಕ್ಷೆಯ ವೇಳೆಯಲ್ಲಿ ಅನುಮೋದಿತ ಮಿತಿಗಿಂತ ಹೆಚ್ಚು ಕೆಮಿಕಲ್ ಅಥವಾ ಕೃತಕ ಬಣ್ಣ ಬಳಸಿರುವುದು ಸಾಬೀತಾದರೆ, ಸಂಬಂಧಪಟ್ಟ ತಯಾರಕ ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಮತ್ತು ಮಾರಾಟ ನಿಷೇಧ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ತೀರ್ಮಾನಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:08 am, Mon, 31 August 26

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ