AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಹಾರಾಡುತ್ತಾ ಕನ್ನಡ ಧ್ವಜ?

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನವೆಂಬರ್​​ 1 ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸಬೇಕೆಂದು ಹೆಚ್ಚಾದ ಕೂಗು

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಹಾರಾಡುತ್ತಾ ಕನ್ನಡ ಧ್ವಜ?
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಹಾರಾಡುತ್ತಾ ಕನ್ನಡ ಧ್ವಜ?
TV9 Web
| Edited By: |

Updated on: Oct 23, 2022 | 7:00 AM

Share

ಬೆಂಗಳೂರು: ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ (Chamrajpet Idgah Maidan) ಸ್ವಾತಂತ್ರ್ಯೋತ್ಸವ ಆಯ್ತು. ಕಂದಾಯ ಇಲಾಖೆಯಿಂದ ಅದ್ದೂರಿಯಾಗಿ ತ್ರಿವರ್ಣ ಧ್ವಜ ಹಾರಿಸಲಾಯ್ತು. ಇದೀಗ ಕನ್ನಡ ರಾಜ್ಯೋತ್ಸವದ ಕಿಚ್ಚು ಹೆಚ್ಚಾಗಿದೆ. ಈದ್ಗಾ ಮೈದಾನದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬೇಕೆಂಬ ಕೂಗು ಜೋರಾಗಿ ಕೇಳಿ ಬರುತ್ತಿದೆ.

ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಬೇಕೆಂಬ ನಾಗರೀಕರು ಹಾಗೂ ಹಿಂದೂ ಸಂಘಟನೆಗಳು ಕನಸು ನನಸಾಗಿದೆ. ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸುಪ್ರೀಂ ಕೋರ್ಟ್ ಅನುಮತಿ ಕೊಟ್ಟಿರಲಿಲ್ಲ. ಇದೀಗ ಮೈದಾನದಲ್ಲಿ ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕೆಂದು ಚಾಮರಾಜಪೇಟೆ ನಾಗರೀಕರ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ.

ಕೋರ್ಟ್​​ಗೆ ರಾಜ್ಯ ಸರ್ಕಾರದಿಂದ ಮೇಲ್ಮನವಿ ಸಲ್ಲಿಕೆ ಸಾಧ್ಯತೆ?

ಸ್ವಾತಂತ್ರ್ಯ ದಿನಾಚರಣೆ, ಗಣೇಶೋತ್ಸವ ಗದ್ದಲ ಮುಗೀತು ಅನ್ನೊ ಅಷ್ಟರಲ್ಲಿ ಇದೀಗ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂಬ ಹೊಸ ಕೂಗು ಎದ್ದಿದೆ. ಈ ಸಂಬಂಧ ರಾಜ್ಯ ಸರ್ಕಾರ ಕೋರ್ಟ್​​ಗೆ ಮೇಲ್ಮನವಿ ಹೋಗುವ ಸಾಧ್ಯತೆ ಇದ್ದು, ಅನುಮತಿ ನೀಡುವ ವಿಚಾರದಲ್ಲಿ ಕೋರ್ಟ್ ಹಾಗೂ ಸರ್ಕಾರ ಯಾವು ನಿಲುವು ತಾಳುತ್ತೆ ಅನ್ನೋದು ಕುತೂಹಲ ಕೆರಳಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅವಕಾಶ ಕೊಡಬೇಕು ಎಂಬ ಕೂಗು ಎದ್ದಿದೆ. ಮೈದಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಬಾವುಟ ಹಾರಾಡಬೇಕು ಅಂತ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ. ಧ್ವಜಾರೋಹಣ, ಗಣೇಶೋತ್ಸವ ಮುಗಿದರೂ ಈ ಗಲಾಟೆ ಮಾತ್ರ ತಣ್ಣಗಾಗುವಂತೆ ಕಾಣುತ್ತಿಲ್ಲ. ಕನ್ನಡ ಸಾಹಿತ್ಯ ಪರಿಷತ್ ನಿಂದ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮನವಿ ಮಾಡಿದೆ.

ಈದ್ಗಾ ಮೈದಾನದಲ್ಲಿ ಕಂದಾಯ ಇಲಾಖೆಯಿಂದಲೇ ನಡೆಯುತ್ತಾ ಕನ್ನಡ ರಾಜ್ಯೋತ್ಸವ?

ತಂತ್ರ್ಯ ದಿನಾಚರಣೆ ರೀತಿಯೇ ಜಿಲ್ಲಾಡಳಿತದಿಂದಲೇ ಕನ್ನಡ ಧ್ವಜ ಹಾರಾಡುತ್ತೆ ಅನ್ನೊ ಚರ್ಚೆಗಳು ಕೇಳಿ ಬರುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ರೀತಿಯೇ ಜಿಲ್ಲಾಡಳಿತ ಕನ್ನಡದ ಧ್ವಜ ಹಾರಿಸುತ್ತಾ ಅನ್ನೊ ಕುತೂಹಲ ಚಾಮರಾಜಪೇಟೆ ನಾಗರೀಕರಲ್ಲಿ ಹೆಚ್ಚಿದೆ. ಈ ಸಂಬಂಧ ಮೊನ್ನೆ ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿ ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ಕಂದಾಯ ಸಚಿವ ಆರ್.ಅಶೋಕ್​ರನ್ನ ಒಕ್ಕೂಟ ಭೇಟಿ ಮಾಡಿದೆ. ಕಂದಾಯ ಸಚಿವರಿಂದ ಮೌಕಿಕವಾಗಿ ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಗೆ ಕಂದಾಯ ಸಚಿವರ ಸಲಹೆ ನೀಡಿದ್ದಾರೆ‌.

ಇನ್ನೂ ಕನ್ನಡ ಸಾಹಿತ್ಯ ಪರಿಷತ್​ನಿಂದಲೂ ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ. ಒಕ್ಕೂಟದಿಂದ ಬಂದಿರುವ ಕನ್ನಡ ಬಾವುಟ ಹಾರಿಸುವ ವಿಚಾರವಾಗಿ ಮಾಹಿತಿ ನೀಡಲಾಗಿದೆ. ಸದ್ಯ ನಾಗರಿಕರ ಒಕ್ಕೂಟ ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದು, ಕಂದಾಯ ಇಲಾಖೆಯಾದರೂ ಮಾಡಲಿ, ಸಾಹಿತ್ಯ ಪರಿಷತ್ ನಿಂದಾದರೂ ಆಗಲಿ ಎಂಬ ಆಶಯ ವ್ಯಕ್ತವಾಗುತ್ತಿದೆ. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಕನ್ನಡ ಧ್ವಜ ಹಾರಿಸಬೇಕೆಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ಸರ್ಕಾರಕ್ಕೆ ಮನವಿ ಮಾಡಿದೆ.

ವರದಿ – ಅನಿಲ್ ಕಲ್ಕೆರೆ, ಟಿವಿ9, ಬೆಂಗಳೂರು