AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದ ಗಲಾಟೆಯ ತನಿಖೆ ನಡೆಯುವಾಗಲೇ ಸಚಿವರು ಕ್ಲೀನ್​ಚಿಟ್ ಕೊಡುತ್ತಿದ್ದಾರೆ; ಬೊಮ್ಮಾಯಿ ವಾಗ್ದಾಳಿ

ಶಿವಮೊಗ್ಗದ ಗಲಭೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು. ಬಿಜೆಪಿಯವರೇ ಬೇರೆ ಬಟ್ಟೆ ತೊಟ್ಟು ಗಲಾಟೆ ಮಾಡುತ್ತಾರೆ ಎಂದರೆ ಹೇಗೆ? ಇದೊಂದು ಸಣ್ಣ ಘಟನೆಯಾದರೆ ಯಾಕೆ ಲಾಠಿ ಚಾರ್ಜ್ ಆಯ್ತು? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಶಿವಮೊಗ್ಗದ ಗಲಾಟೆಯ ತನಿಖೆ ನಡೆಯುವಾಗಲೇ ಸಚಿವರು ಕ್ಲೀನ್​ಚಿಟ್ ಕೊಡುತ್ತಿದ್ದಾರೆ; ಬೊಮ್ಮಾಯಿ ವಾಗ್ದಾಳಿ
ಬಸವರಾಜ ಬೊಮ್ಮಾಯಿ
ಕಿರಣ್​ ಹನಿಯಡ್ಕ
| Edited By: |

Updated on: Oct 04, 2023 | 5:09 PM

Share

ಬೆಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ, ಗಲಾಟೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುವ ಸಮಯದಲ್ಲೇ ಸಚಿವರು ಕ್ಲೀನ್​ಚಿಟ್ ಕೊಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಶಿವಮೊಗ್ಗದ ಗಲಭೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು. ಬಿಜೆಪಿಯವರೇ ಬೇರೆ ಬಟ್ಟೆ ತೊಟ್ಟು ಗಲಾಟೆ ಮಾಡುತ್ತಾರೆ ಎಂದರೆ ಹೇಗೆ? ಇದೊಂದು ಸಣ್ಣ ಘಟನೆಯಾದರೆ ಯಾಕೆ ಲಾಠಿ ಚಾರ್ಜ್ ಆಯ್ತು? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಅತಿಯಾದ ತುಷ್ಟೀಕರಣವೇ ಶಿವಮೊಗ್ಗದ ಗಲಾಟೆಗೆ ಕಾರಣ. ಶಿವಮೊಗ್ಗ ಗಲಾಟೆಯಲ್ಲಿ ಓಲೈಕೆ ರಾಜಕಾರಣ ಪ್ರಭಾವ ಬೀರಿದೆ. ತಪ್ಪಿತಸ್ಥರು ಯಾರೇ ಇರಲಿ, ಅವರನ್ನು ಕೂಡಲೇ ಬಂಧಿಸಿ ಶಿಕ್ಷೆ ಕೊಡಿಸಬೇಕು. ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಇದು ಸಣ್ಣ ಘಟನೆ ಅಂತಿದ್ದಾರೆ. ಕಾಂಗ್ರೆಸ್​ನವರಿಗೆ ಇನ್ನೆಷ್ಟು ದೊಡ್ಡ ಘಟನೆ ನಡೆಯಬೇಕಿತ್ತು? ಎಂದು ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ; ಸಂಕಷ್ಟಕ್ಕೆ ಸಿಲುಕಿದ ಸಾರ್ವಜನಿಕರು

ಇನ್ನೊಂದೆಡೆ, ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ಮುಂದುವರೆಸಿದ್ದಾರೆ. ಇದು ಮುಸ್ಲಿಮರಿಗೆ ಮಾರಿಕೊಂಡ ಸರ್ಕಾರ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಬೆಂಬಲದಿಂದ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಶಿವಮೊಗ್ಗದ ಗಲಾಟೆಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನೇರ ಕಾರಣ. ಮುಸ್ಲಿಂ ನಾಯಕನಾಗಲು ಅವರಿಬ್ಬರ ನಡುವೆ ಸ್ಪರ್ಧೆ ನಡೆಯುತ್ತಿದೆ. ಗಣೇಶ ವಿಸರ್ಜನೆ ವೇಳೆ ಏನಾದರೂ ದೇಶ ವಿರೋಧಿ ಕೃತ್ಯ ಆಗಿದ್ಯಾ? ಭಾರತದಲ್ಲಿ ಸನಾತನ ಧರ್ಮ ನಾಶ ಮಾಡಲು ಯಾವನೂ ಹುಟ್ಟಿಲ್ಲ. ಸನಾತನ ಧರ್ಮ ಒಡೆಯಲು ಬಂದವರೆಲ್ಲರೂ ನಾಶವಾಗಿದ್ದಾರೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಕೂಡ ನಾಶವಾಗಿ ಹೋಗುತ್ತಾರೆ. ಮುಸ್ಲಿಮರ ವಿರುದ್ಧ ಕ್ರಮ ತೆಗೆದುಕೊಳ್ಳುವ ಧಮ್ ಡಿಸಿಎಂ ಡಿಕೆ ಶಿವಕುಮಾರ್​ಗೆ ಇಲ್ಲ ಎಂದು ಯತ್ನಾಳ್ ಟೀಕಿಸಿದ್ದಾರೆ.

ಇದನ್ನೂ ಓದಿ: ನಾವು ಸಾಬ್ರು ಹೇಗೆ ಅಂತಾ ಗೊತ್ತಲ್ಲ ಎಂದು ಈದ್ ಮಿಲಾದ್​ ಗಲಾಟೆ ವೇಳೆ ಶಿವಮೊಗ್ಗ ಪೊಲೀಸ್​ ಗೆ ಆವಾಜ್ ಹಾಕಿದ್ದ ವ್ಯಕ್ತಿ ಅರೆಸ್ಟ್​

ಶಿವಮೊಗ್ಗದಲ್ಲಿ ವೇಷ ಬದಲಿಸಿಕೊಂಡು ಬಿಜೆಪಿಯವರೇ ಗಲಾಟೆ ಮಾಡಿದ್ದಾರೆಂಬ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಿನಿಂದ ಜನರ ಹಿತ ಬಯಸಿಲ್ಲ. ಕಾಂಗ್ರೆಸ್​ ಅಲ್ಪಸಂಖ್ಯಾತರ ವೋಟ್​​ ಬ್ಯಾಂಕ್​ಗಾಗಿ ಕೆಲಸ ಮಾಡುತ್ತಿದೆ. ಪೊಲೀಸರ ಮೇಲೆ ಕಲ್ಲು ತೂರಿದವರ ಮೇಲೂ ಏಕೆ ಕ್ರಮ ಕೈಗೊಂಡಿಲ್ಲ? ಡಿ.ಜೆ. ಹಳ್ಳಿ ಗಲಭೆಕೋರರ ಕೇಸ್ ಕೈಬಿಡಿ ಎಂದು ತನ್ವೀರ್ ಸೇಠ್ ಪತ್ರ ಬರೆದಿದ್ದರು. ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿಯಲ್ಲಿ ಬಿಜೆಪಿಯವರೇ ಗಲಾಟೆ ಮಾಡಿದ್ರಾ? ಕಾಂಗ್ರೆಸ್ಸಿಗರು ಹಿಂದಿನಿಂದಲೂ ಹಿಂದೂಗಳ ಮೇಲೆ ಕಿಡಿಕಾರುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಹರಿಹಾಯ್ದಿದ್ದಾರೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್