AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 5ರಂದು ಕೆಎಸ್​​ಆರ್​​ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು (KSRTC, BMTC ಸೇರಿದಂತೆ) ಆಗಸ್ಟ್ 5 ರಂದು ಮುಷ್ಕರಕ್ಕೆ ನಿರ್ಧರಿಸಿವೆ. 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಮಾಡದ ಹಿನ್ನಲೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.

ಆಗಸ್ಟ್​ 5ರಂದು ಕೆಎಸ್​​ಆರ್​​ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ
ಸಾರಿಗೆ ಮುಷ್ಕರ
Kiran Surya
| Edited By: |

Updated on:Jul 16, 2025 | 8:59 AM

Share

ಬೆಂಗಳೂರು, ಜುಲೈ 16: ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ (strike) ಕರೆ ನೀಡಿದೆ. ಕೆಎಸ್​ಆರ್​ಟಿಸಿ (KSRTC), ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಕಳಿಸಿದ್ದೇವೆ: ಅನಂತ ಸುಬ್ಬರಾವ್​​

ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್​​ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಂಗಳವಾರ ಇ-ಮೇಲ್​ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: KSRTC Bus Ticket Price: ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ

ಇದನ್ನೂ ಓದಿ
Image
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
Image
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
Image
ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ
Image
ಉಚಿತ ಯೋಜನೆಯಿಂದ ಕಂಗೆಟ್ಟಿತಾ ಸರ್ಕಾರ?; 2000 ಕೋಟಿ ಸಾಲ ಪಡೆಯಲು ಒಪ್ಪಿಗೆ

4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಜುಲೈ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಈ ಸಭೆಯಲ್ಲಿ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಮತ್ತು ವೇತನ ಹೆಚ್ಚಳ ಬಗ್ಗೆ ಒಂದು ವಾರದೊಳಗೆ ಸಭೆ ಮಾಡುವುದಾಗಿ ಹೇಳಿದ್ದರು. ಆದರೆ 11 ದಿನ ಕಳೆದರೂ ಯಾವುದೇ ಸಭೆ ಕರೆಯಲಾಗಿಲ್ಲ. ಹೀಗಾಗಿ 4 ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 am, Wed, 16 July 25

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್