
ಬೆಂಗಳೂರು, ಜುಲೈ 16: ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ (strike) ಕರೆ ನೀಡಿದೆ. ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಂಗಳವಾರ ಇ-ಮೇಲ್ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: KSRTC Bus Ticket Price: ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ
4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಜುಲೈ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ
ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಈ ಸಭೆಯಲ್ಲಿ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಮತ್ತು ವೇತನ ಹೆಚ್ಚಳ ಬಗ್ಗೆ ಒಂದು ವಾರದೊಳಗೆ ಸಭೆ ಮಾಡುವುದಾಗಿ ಹೇಳಿದ್ದರು. ಆದರೆ 11 ದಿನ ಕಳೆದರೂ ಯಾವುದೇ ಸಭೆ ಕರೆಯಲಾಗಿಲ್ಲ. ಹೀಗಾಗಿ 4 ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:37 am, Wed, 16 July 25