AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ, ಯುಪಿಗಿಂತ ಕರ್ನಾಟಕದಲ್ಲೇ ಹೆಚ್ಚು ಶಾಲೆ ತೊರೆಯುತ್ತಿರುವ ಹೆಣ್ಣುಮಕ್ಕಳು!

ಲೋಕಸಭೆಯಲ್ಲಿ ಮಂಡಿಸಲಾದ ಯುಡೈಸ್ ಪ್ಲಸ್ ವರದಿಯ ಪ್ರಕಾರ ಕರ್ನಾಟಕದಲ್ಲಿ ಪ್ರೌಢಶಾಲಾ ಹಂತದಲ್ಲಿ ಶಾಲೆ ತೊರೆಯುವ (Dropout) ಹೆಣ್ಣುಮಕ್ಕಳ ಪ್ರಮಾಣ ಶೇ. 13.9 ತಲುಪಿದ್ದು, ಬಿಹಾರ ಹಾಗೂ ಯುಪಿಗಿಂತಲೂ ಹದಗೆಟ್ಟಿದೆ. ರಾಷ್ಟ್ರೀಯ ಸರಾಸರಿಗಿಂತಲೂ ಹೆಚ್ಚಿರುವ ಕರ್ನಾಟಕದ ಶಾಲಾ ಶಿಕ್ಷಣದ ಈ ಆತಂಕಕಾರಿ ವರದಿ ಇಲ್ಲಿದೆ.

ಬಿಹಾರ, ಯುಪಿಗಿಂತ ಕರ್ನಾಟಕದಲ್ಲೇ ಹೆಚ್ಚು ಶಾಲೆ ತೊರೆಯುತ್ತಿರುವ ಹೆಣ್ಣುಮಕ್ಕಳು!
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Jul 28, 2026 | 11:30 AM

Share

ಮುಖ್ಯಾಂಶಗಳು

  • ಪ್ರೌಢಶಾಲಾ ಹಂತದಲ್ಲಿ ಶಾಲೆ ತೊರೆಯುವ ಹೆಣ್ಣುಮಕ್ಕಳ ದರ ಕರ್ನಾಟಕದಲ್ಲಿ ಶೇ 13.9ರಷ್ಟಿದೆ.
  • ದೇಶದ ರಾಷ್ಟ್ರೀಯ ಸರಾಸರಿ ಶೇ 8 ಕ್ಕಿಂತ ಕರ್ನಾಟಕದ ಡ್ರಾಪ್‌ಔಟ್ ದರ ಹೆಚ್ಚಾಗಿದೆ.
  • ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳು ಕರ್ನಾಟಕಕ್ಕಿಂತ ಉತ್ತಮ ಸುಧಾರಣೆ ಕಂಡುಕೊಂಡಿವೆ.

ಬೆಂಗಳೂರು, ಜುಲೈ 28: ಪ್ರೌಢಶಾಲೆ (9 ಮತ್ತು 10ನೇ ತರಗತಿ) ಹಂತದಲ್ಲಿ ಶಾಲೆ ತೊರೆಯುವ (Dropout) ಹೆಣ್ಣುಮಕ್ಕಳ ಪ್ರಮಾಣದಲ್ಲಿ ಕರ್ನಾಟಕವು ದೇಶದ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬಿಹಾರ ಮತ್ತು ಉತ್ತರ ಪ್ರದೇಶದಂತಹ ಹಿಂದುಳಿದ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲೇ ಹೆಚ್ಚು ಹೆಣ್ಣುಮಕ್ಕಳು ಶಿಕ್ಷಣವನ್ನು ಅರ್ಧಕ್ಕೇ ಮೊಟಕುಗೊಳಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಷಯ ಲೋಕಸಭೆಯಲ್ಲಿ ಮಂಡಿಸಲಾದ ಕೇಂದ್ರ ಸರ್ಕಾರದ ಯುಡೈಸ್ ಪ್ಲಸ್ (UDISE+) ವರದಿಯಿಂದ ತಿಳಿದುಬಂದಿದೆ.

ರಾಷ್ಟ್ರೀಯ ಸರಾಸರಿಗಿಂತ ಕರ್ನಾಟಕದಲ್ಲಿ ಡ್ರಾಪ್‌ಔಟ್ ದರ ಹೆಚ್ಚು

2025-26ರ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಪ್ರೌಢಶಾಲಾ ಹಂತದಲ್ಲಿ ಶಾಲೆ ತೊರೆಯುತ್ತಿರುವ ಹೆಣ್ಣುಮಕ್ಕಳ ಪ್ರಮಾಣ ಶೇ 13.9ರಷ್ಟಿದೆ. ಇದು ದೇಶದ ರಾಷ್ಟ್ರೀಯ ಸರಾಸರಿಯಾದ ಶೇ. 8 ಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ.

ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದ ಪರಿಸ್ಥಿತಿಯಲ್ಲಿ ಸ್ವಲ್ಪ ಮಟ್ಟಿಗೆ ಸುಧಾರಣೆ ಕಂಡುಬಂದಿದೆಯಾದರೂ (2023-24ರಲ್ಲಿ ಶೇ 19.6, 2024-25ರಲ್ಲಿ ಶೇ 14.6), ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಪ್ರಗತಿಯು ಅತ್ಯಂತ ಮಂದಗತಿಯಲ್ಲಿದೆ. ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಈ ಪ್ರಮಾಣ ಶೇ. 15.6 ಇದ್ದು, ಇಡೀ ದೇಶದಲ್ಲೇ ಅಗ್ರಸ್ಥಾನದಲ್ಲಿದ್ದರೆ, ದೊಡ್ಡ ರಾಜ್ಯಗಳಲ್ಲಿ ಕರ್ನಾಟಕ ಮತ್ತು ಅಸ್ಸಾಂ (ತಲಾ ಶೇ 13.9) ಮೊದಲ ಸ್ಥಾನದಲ್ಲಿವೆ.

ದಕ್ಷಿಣದ ಇತರ ರಾಜ್ಯಗಳು ಮುಂದೆ

ಒಮ್ಮೆ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದಿದ್ದ ಬಿಹಾರವು 2023-24ರಲ್ಲಿ ಶೇ 25.1 ಇದ್ದ ಡ್ರಾಪ್‌ಔಟ್ ಪ್ರಮಾಣವನ್ನು 2025-26ರ ವೇಳೆಗೆ ಶೇ 9.1 ಕ್ಕೆ ತಗ್ಗಿಸುವ ಮೂಲಕ ಅಭೂತಪೂರ್ವ ಸುಧಾರಣೆ ಕಂಡಿದೆ. ಉತ್ತರ ಪ್ರದೇಶದಲ್ಲಿ ಈ ಪ್ರಮಾಣ ಶೇ 7.3 ರಷ್ಟಿದೆ.

ದಕ್ಷಿಣ ಭಾರತದ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಪ್ರದರ್ಶನ ತೀರಾ ಕಳಪೆಯಾಗಿದೆ. ಕೇರಳದಲ್ಲಿ ಕೇವಲ ಶೇ 3, ತಮಿಳುನಾಡಿನಲ್ಲಿ ಶೇ 3.2 ಹಾಗೂ ಹರಿಯಾಣದಲ್ಲಿ ಶೇ 3.8 ರಷ್ಟು ಹೆಣ್ಣುಮಕ್ಕಳು ಮಾತ್ರ ಶಾಲೆ ತೊರೆಯುತ್ತಿದ್ದು, ಅತ್ಯಂತ ಕಡಿಮೆ ಡ್ರಾಪ್‌ಔಟ್ ದರ ಹೊಂದಿದ ರಾಜ್ಯಗಳಾಗಿ ಹೊರಹೊಮ್ಮಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ