AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರಿಗೆ ಹೆಚ್ಚುವರಿ 2000 ಪೊಲೀಸ್ ಬಲ; ಸರ್ಕಾರಕ್ಕೆ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಧನ್ಯವಾದ

ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿಗೆ 2000 ಪೊಲೀಸರನ್ನು ಬೆಂಗಳೂರು ನಗರಕ್ಕೆ ನಿಯೋಜಿಸಿ ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

Bengaluru: ಬೆಂಗಳೂರಿಗೆ ಹೆಚ್ಚುವರಿ 2000 ಪೊಲೀಸ್ ಬಲ; ಸರ್ಕಾರಕ್ಕೆ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಧನ್ಯವಾದ
ಪೊಲೀಸ್​
TV9 Web
| Updated By: ವಿವೇಕ ಬಿರಾದಾರ|

Updated on:Feb 20, 2023 | 8:11 AM

Share

ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿಗೆ 2000 ಪೊಲೀಸರನ್ನು ಬೆಂಗಳೂರು (Bengaluru) ನಗರಕ್ಕೆ ನಿಯೋಜಿಸಿ  ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಣಯಕ್ಕೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ (Bengaluru Police Commissioner Pratap Reddy) ಧನ್ಯವಾದ ಹೇಳಿದ್ದಾರೆ. ಹೆಚ್ಚಿನ ಪೊಲೀಸ್​ರ ನಿಯೋಜನೆಯಿಂದ ಅನುಕೂಲವಾಗಲಿದ್ದು, ಹೆಚ್ಚಿನ ಕಾರ್ಯಕ್ಷಮತೆಯಿಂದ ನಗರದಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.

ಹೆಚ್ಚಿಗೆ 2000 ಪೊಲೀಸರನ್ನು ನಿಯೋಜನೆ ಮಾಡುವುದರಿಂದ ಬೆಂಗಳೂರು ಪೊಲೀಸ್​ ಇಲಾಖೆಯಲ್ಲಿ ಶೇ 11 ಪ್ರತಿಶತದಷ್ಟು ಪೊಲೀಸ್​ ಸಿಬ್ಬಂದಿ ಸಂಖ್ಯೆ ಏರಿಕೆಯಾಗುತ್ತದೆ ಎಂದು ಕಮಿಷನರ್​ ಪ್ರತಾಪ್​ ರೆಡ್ಡಿ ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇನ್ನು ಸಿಲಿಕಾನ್​ ಸಿಟಿಯಲ್ಲಿನ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು, ರಾಜ್ಯ ಸರ್ಕಾರ ಹೆಚ್ಚಿಗೆ 20 ಪೊಲೀಸ್​ ಠಾಣೆಗಳನ್ನು ನಗರದಲ್ಲಿ ತೆರೆಯಲು ಮುಂದಾಗಿದೆ. ಈ ಸಂಬಂಧ ರಾಜ್ಯ ಬಜೆಟ್​ನಲ್ಲಿ ಹಣವನ್ನು ಮೀಸಲಿಡಲಾಗಿದೆ.

ಬೆಂಗಳೂರು ದಿನ ದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು, ಪ್ರತಿದಿನ 5000 ಹೊಸ ವಾಹನಗಳು ರಸ್ತೆಗಿಳಿಯುತ್ತವೆ. ಇನ್ನು ಪ್ರತಿದಿನ 10 ಲಕ್ಷ ಜನರು ರಸ್ತೆಯಲ್ಲಿ ಸಂಚರಿಸುತ್ತಾರೆ. ಹೀಗಾಗಿ ಹೆಚ್ಚಿನ ಸಂಚಾರಿ ಪೊಲೀಸ್​ ಠಾಣೆಗಳು ಮತ್ತು ಪೊಲೀಸರ ಅವಶ್ಯಕತೆ ಇದೆ. ಹೀಗಾಗಿ ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ನಗರಕ್ಕೆ 5 ಹೊಸ ಟ್ರಾಫಿಕ್​ ಪೊಲೀಸ್​ ಠಾಣೆಗಳನ್ನು ಮಂಜೂರು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 am, Mon, 20 February 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?