ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿಗೆ 2000 ಪೊಲೀಸರನ್ನು ಬೆಂಗಳೂರು (Bengaluru) ನಗರಕ್ಕೆ ನಿಯೋಜಿಸಿ ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಣಯಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (Bengaluru Police Commissioner Pratap Reddy) ಧನ್ಯವಾದ ಹೇಳಿದ್ದಾರೆ. ಹೆಚ್ಚಿನ ಪೊಲೀಸ್ರ ನಿಯೋಜನೆಯಿಂದ ಅನುಕೂಲವಾಗಲಿದ್ದು, ಹೆಚ್ಚಿನ ಕಾರ್ಯಕ್ಷಮತೆಯಿಂದ ನಗರದಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.
ಹೆಚ್ಚಿಗೆ 2000 ಪೊಲೀಸರನ್ನು ನಿಯೋಜನೆ ಮಾಡುವುದರಿಂದ ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ ಶೇ 11 ಪ್ರತಿಶತದಷ್ಟು ಪೊಲೀಸ್ ಸಿಬ್ಬಂದಿ ಸಂಖ್ಯೆ ಏರಿಕೆಯಾಗುತ್ತದೆ ಎಂದು ಕಮಿಷನರ್ ಪ್ರತಾಪ್ ರೆಡ್ಡಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇನ್ನು ಸಿಲಿಕಾನ್ ಸಿಟಿಯಲ್ಲಿನ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು, ರಾಜ್ಯ ಸರ್ಕಾರ ಹೆಚ್ಚಿಗೆ 20 ಪೊಲೀಸ್ ಠಾಣೆಗಳನ್ನು ನಗರದಲ್ಲಿ ತೆರೆಯಲು ಮುಂದಾಗಿದೆ. ಈ ಸಂಬಂಧ ರಾಜ್ಯ ಬಜೆಟ್ನಲ್ಲಿ ಹಣವನ್ನು ಮೀಸಲಿಡಲಾಗಿದೆ.
Thank you @CMofKarnataka @JnanendraAraga for 2000 additional manpower to @BlrCityPolice in #karnatakabudget2023 – A game changing 11% raise in Civil Police!
Better woman safety, traffic management, cyber crime investigations & public order in #NammaBengaluru@DgpKarnataka— Pratap Reddy, IPS ಪೊಲೀಸ್ ಆಯುಕ್ತರು, ಬೆಂಗಳೂರು ನಗರ (@CPBlr) February 19, 2023
ಬೆಂಗಳೂರು ದಿನ ದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು, ಪ್ರತಿದಿನ 5000 ಹೊಸ ವಾಹನಗಳು ರಸ್ತೆಗಿಳಿಯುತ್ತವೆ. ಇನ್ನು ಪ್ರತಿದಿನ 10 ಲಕ್ಷ ಜನರು ರಸ್ತೆಯಲ್ಲಿ ಸಂಚರಿಸುತ್ತಾರೆ. ಹೀಗಾಗಿ ಹೆಚ್ಚಿನ ಸಂಚಾರಿ ಪೊಲೀಸ್ ಠಾಣೆಗಳು ಮತ್ತು ಪೊಲೀಸರ ಅವಶ್ಯಕತೆ ಇದೆ. ಹೀಗಾಗಿ ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ನಗರಕ್ಕೆ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:05 am, Mon, 20 February 23