ಕನ್ನಡ ರಾಜ್ಯೋತ್ಸವಕ್ಕೆ ಕೊಡುಗೆ! ನವೆಂಬರ್‌ನಿಂದ ಬದಲಾಗಲಿದೆ ಸರ್ಕಾರದ ಆಡಳಿತ ವೈಖರಿ, ಆಡಳಿತದ ವೆಚ್ಚ ಕಡಿತಗೊಳಿಸಲು ಹೊಸ ಕ್ರಮ

Karnataka Rajyotsava: ಆಡಳಿತದ ವೆಚ್ಚ ಕಡಿತಗೊಳಿಸಲು ಕ್ರಮ ಜಾರಿ ಮಾಡಲು ಸರ್ಕಾರ ಹೆಜ್ಜೆ ಇಟ್ಟಿದೆ. ಸರ್ಕಾರದ ಹಿರಿಯ ಅಧಿಕಾರಿಗಳು ಹೆಚ್ಚುವರಿ ವೆಚ್ಚ ಕಡಿತಕ್ಕೆ ಅಂತಿಮ ತಯಾರಿ ನಡೆಸಿದ್ದಾರೆ.

ಕನ್ನಡ ರಾಜ್ಯೋತ್ಸವಕ್ಕೆ ಕೊಡುಗೆ! ನವೆಂಬರ್‌ನಿಂದ ಬದಲಾಗಲಿದೆ ಸರ್ಕಾರದ ಆಡಳಿತ ವೈಖರಿ, ಆಡಳಿತದ ವೆಚ್ಚ ಕಡಿತಗೊಳಿಸಲು ಹೊಸ ಕ್ರಮ
ವಿಧಾನಸೌಧ
Follow us
TV9 Web
| Updated By: Digi Tech Desk

Updated on:Oct 26, 2021 | 12:53 PM

Karnataka Rajyotsava: ಬೆಂಗಳೂರು: ನವೆಂಬರ್‌ನಿಂದ ಸರ್ಕಾರದ ಆಡಳಿತ ವೈಖರಿ ಬದಲಾಗಲಿದೆ. ಹೆಚ್ಚುವರಿ ಖರ್ಚುವೆಚ್ಚಕ್ಕೆ ಬ್ರೇಕ್ ಹಾಕಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆಡಳಿತದ ವೆಚ್ಚ ಕಡಿತಗೊಳಿಸಲು ಕ್ರಮ ಜಾರಿ ಮಾಡಲು ಸರ್ಕಾರ ಹೆಜ್ಜೆ ಇಟ್ಟಿದೆ. ಸರ್ಕಾರದ ಹಿರಿಯ ಅಧಿಕಾರಿಗಳು ಹೆಚ್ಚುವರಿ ವೆಚ್ಚ ಕಡಿತಕ್ಕೆ ಅಂತಿಮ ತಯಾರಿ ನಡೆಸಿದ್ದಾರೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ನೇತೃತ್ವದ ಆಡಳಿತ ಸುಧಾರಣಾ ಆಯೋಗದಿಂದ ಮಧ್ಯಂತರ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ನವೆಂಬರ್‌ನಿಂದ ವರದಿಯ ಅಂಶಗಳನ್ನ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.

ಕಂದಾಯ, ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಸಾರಿಗೆ ಇಲಾಖೆಯಲ್ಲಿ ಆಡಳಿತ ಸುಧಾರಣೆ ಹಾಗೂ ವೆಚ್ಚ ಕಡಿತದ ಶಿಫಾರಸು ಜಾರಿಗೆ ಸರ್ಕಾರ ಮುಂದಾಗಿದೆ. -ಕಂದಾಯ ಇಲಾಖೆಯಲ್ಲಿ ಪ್ರಾದೇಶಿಕ ಆಯಕ್ತರ ಹುದ್ದೆ ರದ್ದತಿ ಬಗ್ಗೆ ಚಿಂತನೆ – ಪ್ರಾದೇಶಿಕ ಆಯುಕ್ತರ ಹುದ್ದೆ ಬದಲಿಗೆ ಕಂದಾಯ ಆಯುಕ್ತರ ಹುದ್ದೆ ರಚನೆ ಚಿಂತನೆ -ಪ್ರಾದೇಶಿಕ ಆಯುಕ್ತರ ಕಚೇರಿಗಳಲ್ಲಿನ 378 ಹುದ್ದೆ ರದ್ದತಿ ಸಾಧ್ಯತೆ -ನೂತನ ಕಂದಾಯ ಆಯುಕ್ತಾಲಯಕ್ಕೆ 186 ಹುದ್ದೆಗಳ ನೇಮಕ‌ – ಅಟಲ್ ಜನಸ್ನೇಹಿ ಕೇಂದ್ರ ಏಕಗವಾಕ್ಷಿ ಏಜೆನ್ಸಿಯಾಗಿಸಿ ಸುಮಾರು 800 ಸೇವೆ ಜನರಿಗೆ ಒಂದೇಕಡೆ ಲಭ್ಯವಾಗುವಂತೆ ಮಾಡುವುದು -ಎಲ್ಲಾ ಕಚೇರಿಗಳಿಗೆ ಇ-ಆಫೀಸ್ ಕಡ್ಡಾಯಗೊಳಿಸುವ ಶಿಫಾರಸು -ಸಾರಿಗೆ ಇಲಾಖೆಯ 2 ಐಟಿ ನಿರ್ದೇಶಕರ ಹುದ್ದೆ ಪೈಕಿ 1 ರದ್ದತಿ -ಎಲ್ಲಾ ಆರ್‌ಟಿಒ ಸೇವೆಗಳನ್ನು ಕಾಗದರಹಿತ ಮಾಡುವ ಸಾಧ್ಯತೆ

ವಿಧಾನಸೌಧ ಸಚಿವಾಲಯ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧನೆ ವಿಧಾನಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ ನೌಕರರು, ಅಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧನೆ ಮಾಡಿಸಿದ್ದಾರೆ.

ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆಯೆಂದು ನಾನು ನಂಬುತ್ತೇನೆ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ, ನಾಗರಿಕರು ಮತ್ತು ಖಾಸಗಿ ವಲಯದಂತಹ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆಂದು ನಾನು ನಂಬುತ್ತೇನೆ. ಪ್ರತಿ ನಾಗರಿಕನು ಜಾಗರೂಕನಾಗಿದ್ದು, ಎಲ್ಲಾ ಸಮಯದಲ್ಲೂ ಉನ್ನತ ಗುಣಮಟ್ಟದ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧನಾಗಿರಬೇಕೆಂದು ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಬೆಂಬಲಿಸಬೇಕೆಂದು ನಾನು ಅರಿತಿದ್ದೇನೆ. ಆದ್ದರಿಂದ, ನಾನು ಈ ರೀತಿ ಪ್ರತಿಜ್ಞೆ ಮಾಡುತ್ತೇನೆ : • ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸುತ್ತೇನೆ; ಲಂಚವನ್ನು ಪಡೆಯುವುದಿಲ್ಲ ಹಾಗೂ ನೀಡುವುದೂ ಇಲ್ಲ; • ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೇನೆ; • ಸಾರ್ವಜನಿಕ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ; • ವೈಯಕ್ತಿಕ ನಡವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುವ ಮೂಲಕ ಮಾದರಿಯಾಗಿರುತ್ತೇನೆ • ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ.

ಇದನ್ನೂ ಓದಿ: ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರೊಟ್ಟಿಗೆ ನಿನ್ನೆ ರಾತ್ರಿ ಕಳೆದ ಗೃಹ ಸಚಿವ ಅಮಿತ್​ ಶಾ; ಹುತಾತ್ಮರಿಗೆ ಗೌರವ

Published On - 11:58 am, Tue, 26 October 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ