ಕಸ ವಿಲೇವಾರಿಗೆ ಜೂನ್​ 1ರಿಂದಲೇ ಹೊಸ ಯೋಜನೆ: ಪ್ರತ್ಯೇಕ ಕಂಪನಿಯನ್ನೇ ಸ್ಥಾಪನೆ ಮಾಡಿದ ಸರ್ಕಾರ, ಇಲ್ಲಿದೆ ವಿವರ

ಘನತ್ಯಾಜ್ಯ ಇಲಾಖೆಯನ್ನು ಅರೋಗ್ಯ ಇಲಾಖೆ ಜೊತೆ ವಿಲೀನ ಮಾಡಿ ಅರೋಗ್ಯ ಮತ್ತು ನೈರ್ಮಲ್ಯ ಶಾಖೆ ಎಂದು ಮರುನಾಮಕರಣ ಮಾಡಿರುವ ರಾಜ್ಯ ಸರ್ಕಾರ, ಬಿಬಿಎಂಪಿ ಜತೆಗೂಡಿ ಕಸ ವಿಲೇವಾರಿಗೆ ಹೊಸ ಕಂಪನಿಯನ್ನೇ ಸ್ಥಾಪನೆ ಮಾಡಿದೆ. ಹಾಗಾದರೆ ಇನ್ನು ಮುಂದೆ ಬಿಬಿಎಂಪಿಯ ಕಸ ಸಂಗ್ರಹ ವಾಹನಗಳು, ಕಾರ್ಮಿಕರ ಕೆಲಸ ಏನಾಗಲಿದೆ? ಪೌರಕಾರ್ಮಿಕರ ಕಥೆಯೇನು? ಇಲ್ಲಿದೆ ವಿವರ.

ಕಸ ವಿಲೇವಾರಿಗೆ ಜೂನ್​ 1ರಿಂದಲೇ ಹೊಸ ಯೋಜನೆ: ಪ್ರತ್ಯೇಕ ಕಂಪನಿಯನ್ನೇ ಸ್ಥಾಪನೆ ಮಾಡಿದ ಸರ್ಕಾರ, ಇಲ್ಲಿದೆ ವಿವರ
ಕಸ ವಿಲೇವಾರಿಗೆ ಜೂನ್​ 1ರಿಂದಲೇ ಹೊಸ ಯೋಜನೆ
Follow us
ಶಾಂತಮೂರ್ತಿ
| Updated By: Ganapathi Sharma

Updated on: May 24, 2024 | 9:30 AM

ಬೆಂಗಳೂರು, ಮೇ 24: ಕಸ ವಿಲೇವಾರಿಗೆ (Waste Management) ಹೊಸ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದಕ್ಕೆಂದೇ ಹೊಸ ಕಂಪನಿಯೊಂದನ್ನು ಸ್ಥಾಪನೆ ಮಾಡಿ ಆದೇಶ ಹೊರಡಿಸಿದೆ. ಜೂನ್ 1 ರಿಂದಲೇ ಹೊಸ ಯೋಜನೆ ಜಾರಿಗೆ ಬರಲಿದೆ. ನಗರದಲ್ಲಿ ಕಸದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಸ ವಿಲೇವಾರಿಗೆಂದೇ ‘ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ (Bangalore Solid Waste Management Company limited)’ ಸ್ಥಾಪನೆ ಮಾಡಿ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ (BBMP) ಜಂಟಿಯಾಗಿ ಈ ಕಂಪನಿ ಸ್ಥಾಪನೆ ಮಾಡಿವೆ. ಇನ್ನು ಮುಂದೆ ನಗರದಲ್ಲಿ ಕಸದ ಸಮಸ್ಯೆ ಕಂಡುಬಂದರೆ ಈ ಕಂಪನಿಯೇ ನಿರ್ವಹಣೆ ಮಾಡಲಿದೆ.

ಕಂಪನಿಯ ಕೆಲಸವೇನು?

ಕಸ ಸಂಗ್ರಹಣೆ, ಸಾಗಾಣಿಕೆ ಹಾಗೂ ವಿಲೇವಾರಿ ಕಾರ್ಯಯವನ್ನು ಜೂನ್ 1 ರಿಂದ ಕಂಪನಿಯೇ ನಿರ್ವಹಣೆ ಮಾಡಲಿದೆ. ಮನೆ ಮನೆಯಿಂದ ಅಟೋದಲ್ಲಿ ಕಸ ಸಂಗ್ರಹಣೆ ಮಾಡುವುದು, ಸಂಗ್ರಹ ಮಾಡಿದ ಕಸವನ್ನು ಟಿಪ್ಪರ್ ಲಾರಿಗಳ ಮೂಲಕ ಕಸ ಸಂಸ್ಕರಣಾ ಘಟಕ ಅಥವಾ ಕ್ವಾರಿಗಳಿಗೆ ಸಾಗಿಸುವುದು ಕಂಪನಿಯ ಕೆಲಸವಾಗಿರಲಿದೆ.

ಬಿಬಿಎಂಪಿ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಟೋ, ಟಿಪ್ಪರ್, ಕಾಂಪ್ಯಾಕ್ಟರ್, ಚಾಲಕರು, ಸಹಾಯಕರು ಇನ್ನು ಮುಂದೆ ಕಂಪನಿ ವ್ಯಾಪ್ತಿಗೆ ಬರಲಿದ್ದಾರೆ. ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ವಾರ್ಡ್ ಮಟ್ಟದ ಇಂಜಿನಿಯರ್​ಗಳು, ಸಿಬ್ಬಂದಿ ಹಾಗೂ ಮಾರ್ಷಲ್​​ಗಳು ಕಂಪನಿ ಅಧೀನಕ್ಕೆ ಒಳಪಡಲಿದ್ದಾರೆ. ಇವಿಷ್ಟೂ ಮಂದಿ ಅಧಿಕಾರಿಗಳು, ಸಿಬ್ಬಂದಿ ವೇತನ ಕಂಪನಿಯಿಂದಲೇ ಪಾವತಿಯಾಗಲಿದೆ.

ಇಷ್ಟೇ ಅಲ್ಲದೆ, ನಗರದಲ್ಲಿರುವ 7 ಕಸ ಸಂಸ್ಕರಣಾ ಘಟಕಗಳು ಕಂಪನಿ ವ್ಯಾಪ್ತಿಗೆ ಬರಲಿವೆ.

ಸರ್ಕಾರದಿಂದ ಅನುದಾನ

ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಪ್ರತಿ ವರ್ಷ ‘ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ’ಕ್ಕೆ ಅನುದಾನ ನೀಡಲಿವೆ.

ಪೌರಕಾರ್ಮಿಕರ ಕಥೆಯೇನು?

ಕಂಪನಿ ಸ್ಥಾಪನೆ ಹೊರತಾಗಿಯೂ ಪೌರ ಕಾರ್ಮಿಕರು, ಗುತ್ತಿಗೆ ಪೌರಕಾರ್ಮಿಕರು ಬಿಬಿಎಂಪಿ ಅಧೀನದಲ್ಲೇ ಕಾರ್ಯನಿರ್ವಹಿಸಲಿದ್ದಾರೆ. ಪೌರಕಾರ್ಮಿಕರಿಗೆ, ಗುತ್ತಿಗೆ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದಲೇ ವೇತನ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಪೌರಕಾರ್ಮಿಕರು ಕೇವಲ ಕಸ ಗುಡಿಸುವುದು, ಸಾರ್ವಜನಿಕ ಸ್ಥಳಗಳನ್ನ ಸ್ವಚ್ಛ ಮಾಡುವ ಕೆಲಸ ಮಾತ್ರ ಮಾಡಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಶೇ 40 ರಷ್ಟು ಏರಿಕೆ: ಮುಖ್ಯ ಕಾರಣ ಇದುವೇ ನೋಡಿ!

ಘನತ್ಯಾಜ್ಯ ಇಲಾಖೆಯನ್ನು ಅರೋಗ್ಯ ಇಲಾಖೆ ಜೊತೆ ವಿಲೀನ ಮಾಡಿ ಅದೇಶ ಹೊರಡಿಸಲಾಗಿದ್ದು, ಅರೋಗ್ಯ ಮತ್ತು ನೈರ್ಮಲ್ಯ ಶಾಖೆ ಎಂದು ಮರುನಾಮಕರಣ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?