AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರಿಗೆ ಗುಡ್‌ನ್ಯೂಸ್: ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ 50 ವಿನಾಯಿತಿ

ಕರ್ನಾಟಕದಲ್ಲಿ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್​ ನೀಡಿದೆ. ಸಂಚಾರ ಮತ್ತು ಸಾರಿಗೆ ಇಲಾಖೆಗಳಲ್ಲಿ ಬಾಕಿ ಇರುವ ವಾಹನ ದಂಡಗಳ ಮೇಲೆ ಶೇಕಡಾ 50 ರಷ್ಟು ವಿನಾಯಿತಿ ನೀಡಿದೆ. ದಂಡ ಪಾವತಿಸಲು ಜೂನ್ 21ರಿಂದ ಜುಲೈ 10ರವರೆಗೆ ಅಂದರೆ 20 ದಿನಗಳ ಕಾಲ ಅವಕಾಶವಿದೆ.

ವಾಹನ ಸವಾರರಿಗೆ ಗುಡ್‌ನ್ಯೂಸ್: ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ 50 ವಿನಾಯಿತಿ
ಪ್ರಾತಿನಿಧಿಕ ಚಿತ್ರImage Credit source: Getty images
ಕಿರಣ್​ ಸೂರ್ಯ
| Edited By: |

Updated on:Jun 04, 2026 | 10:39 PM

Share

ಬೆಂಗಳೂರು, ಜೂನ್​ 04: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ (fine) ಪಾವತಿಗೆ ಮತ್ತೆ ಶೇ 50% ವಿನಾಯಿತಿಗೆ ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ (Karnataka Government) ಗುಡ್​ನ್ಯೂಸ್ ನೀಡಲಾಗಿದೆ. ಜೂನ್ 21ರಿಂದ ಜುಲೈ 10ರವರೆಗೆ ಅಂದರೆ 20 ದಿನಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಲಾಗಿದೆ.

ಮುಖ್ಯಾಂಶಗಳು

  • ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್​​
  • ಸಂಚಾರ ದಂಡದ ಮೊತ್ತದಲ್ಲಿ ಮತ್ತೆ ಶೇ 50ರಷ್ಟು ವಿನಾಯಿತಿ ನೀಡಿದ ರಾಜ್ಯ ಸರ್ಕಾರ
  • ಜೂನ್ 21ರಿಂದ ಜುಲೈ 10ರವರೆಗೆ ದಂಡ ಪಾವತಿಸಲು ಅವಕಾಶ

ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಲಾಗದೆ ಪರದಾಡುತ್ತಿದ್ದ ಸವಾರರ ಹಿತದೃಷ್ಟಿಯಿಂದ, ಬಾಕಿ ಇರುವ ದಂಡದ ಮೊತ್ತದಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆ ಮತ್ತೆ ಶೇಕಡಾ 50ರಷ್ಟು ರಿಯಾಯಿತಿ ಘೋಷಿಸಿದೆ.

ಇದನ್ನೂ ಓದಿ: ತಪ್ಪು ಮಾಡಿದ್ರೆ ದಂಡ ಹಾಕಿ, ಕೈ ಮಾಡುವ ಹಕ್ಕಿಲ್ಲ: ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಟ್ರಾಫಿಕ್ ಪೊಲೀಸರ ದೌರ್ಜನ್ಯ

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ಗಳಲ್ಲಿ 2026ರ ಮೇ ತಿಂಗಳಿಗಿಂತ ಮೊದಲು ದಾಖಲಾಗಿರುವ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರವರೆಗಿನ ಸುದೀರ್ಘ ಅವಧಿಯಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಅರ್ಧದಷ್ಟು ವಿನಾಯಿತಿ ನೀಡಲಾಗಿದೆ. ಈ ಸುದೀರ್ಘ ಅವಧಿಯ ಸಂಚಾರ ನಿಯಮ ಉಲ್ಲಂಘನೆ ದಂಡದ ಬಾಕಿಯನ್ನು ಸವಾರರು ಸುಲಭವಾಗಿ ಪಾವತಿಸಲು ಇದೇ ಜೂನ್ 21ರಿಂದ ಜುಲೈ 10ರವರೆಗೆ ಒಟ್ಟು 20 ದಿನಗಳ ಕಾಲಾವಕಾಶ ನೀಡಲಾಗಿದೆ.

ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ: ರೈತರ ‘ವಿಧಾನಸೌಧ ಚಲೋ’ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ರಸ್ತೆ ಬಂದ್ ಭೀತಿ

ವಾಹನ ಸವಾರರು ತಮ್ಮ ಬಾಕಿ ದಂಡದ ಮೊತ್ತವನ್ನು ಸುಲಭವಾಗಿ ಪಾವತಿಸಲು ಸರ್ಕಾರ ಹಲವು ಆಯ್ಕೆಗಳನ್ನು ನೀಡಿದೆ. ಸಾರ್ವಜನಿಕರು ಅಸ್ತ್ರಂ ಆ್ಯಪ್, ಕೆಎಸ್‌ಪಿಎಸ್ ಆ್ಯಪ್ ಹಾಗೂ ರಾಜ್ಯಾದ್ಯಂತ ಇರುವ ಕರ್ನಾಟಕ ಒನ್ ಕೇಂದ್ರಗಳು ಸೇರಿದಂತೆ ಅಧಿಕೃತ ಡಿಜಿಟಲ್ ವೇದಿಕೆಗಳ ಮೂಲಕ ಶೇಕಡಾ 50ರಷ್ಟು ವಿನಾಯಿತಿಯ ದಂಡವನ್ನು ಪಾವತಿಸಬಹುದಾಗಿದೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೂಡ ಶೇಕಡಾ 50ರಷ್ಟು ವಿನಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:38 pm, Thu, 4 June 26

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ