ಯುಎಇ ಅಧ್ಯಕ್ಷ ಶೇಖ್ ಖಲೀಫಾ ನಿಧನ; ಕರ್ನಾಟಕದಲ್ಲಿ ಒಂದು ದಿನದ ಶೋಕಾಚರಣೆ ಘೋಷಣೆ

ರಾಜ್ಯದಲ್ಲೂ ಒಂದು ದಿನದ ಶೋಕಾಚರಣೆ ಘೋಷಣೆ ಮಾಡಿ, ಕರ್ನಾಟಕ ಸರ್ಕಾರ (Karnataka Government) ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರುತ್ತದೆ.

ಯುಎಇ ಅಧ್ಯಕ್ಷ ಶೇಖ್ ಖಲೀಫಾ ನಿಧನ; ಕರ್ನಾಟಕದಲ್ಲಿ ಒಂದು ದಿನದ ಶೋಕಾಚರಣೆ ಘೋಷಣೆ
ಯುಎಇ ಅಧ್ಯಕ್ಷ ಶೇಖ್ ಖಲೀಫಾ
Follow us
TV9 Web
| Updated By: sandhya thejappa

Updated on:May 14, 2022 | 10:48 AM

ಬೆಂಗಳೂರು: ಯುಎಇ ಅಧ್ಯಕ್ಷ ಹಾಗೂ ಅಬುಧಾಬಿಯ ಆಡಳಿತಗಾರರಾದ ಶೇಖ್ ಖಲೀಫಾ (Sheikh Khalifa) ನಿನ್ನೆ (ಮೇ 13) ನಿಧನರಾಗಿದ್ದಾರೆ. ಇವರ ನಿಧನದ ಹಿನ್ನೆಲೆ ದೇಶಾದ್ಯಂತ ಒಂದು ದಿನದ ಶೋಕಾಚರಣೆ (Mourning) ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲೂ ಒಂದು ದಿನದ ಶೋಕಾಚರಣೆ ಘೋಷಣೆ ಮಾಡಿ, ಕರ್ನಾಟಕ ಸರ್ಕಾರ (Karnataka Government) ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರುತ್ತದೆ. ಜೊತೆಗೆ, ರಾಜ್ಯದಲ್ಲಿ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಯಾವುದು ನಡೆಯೋಲ್ಲ.

ಶೇಖ್ ಖಲೀಫಾ ಅವರಿಗೆ 73 ವರ್ಷ ವಯಸ್ಸಾಗಿತ್ತು. ಇವರು ಯುಎಇ ಅಧ್ಯಕ್ಷ, ಅಬುಧಾಬಿಯ ಆಡಳಿತಗಾರರಾಗಿ ನವೆಂಬರ್ 3, 2004 ರಿಂದ ಸೇವೆ ಸಲ್ಲಿಸುತ್ತಿದ್ದರು. ಶೇಖ್ ಖಲೀಫಾ ತಮ್ಮ ತಂದೆ ದಿವಂಗತ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದರು. ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರು 1971 ರಲ್ಲಿ ಒಕ್ಕೂಟದಿಂದ ಯುಎಇಯ ಮೊದಲ ಅಧ್ಯಕ್ಷರಾಗಿ ನವೆಂಬರ್ 2, 2004 ರಂದು ನಿಧನರಾಗುವವರೆಗೆ ಸೇವೆ ಸಲ್ಲಿಸಿದರು.

1948 ರಲ್ಲಿ ಜನಿಸಿದ ಶೇಖ್ ಖಲೀಫಾ ಯುಎಇಯ ಎರಡನೇ ಅಧ್ಯಕ್ಷ ಮತ್ತು ಅಬುಧಾಬಿ ಎಮಿರೇಟ್‌ನ 16 ನೇ ಆಡಳಿತಗಾರರಾಗಿದ್ದರು. ಅವರು ಶೇಖ್ ಜಾಯೆದ್ ಅವರ ಹಿರಿಮಗ. ಯುಎಇ ಅಧ್ಯಕ್ಷರಾದಾಗಿನಿಂದ ಶೇಖ್ ಖಲೀಫಾ ಅವರು ಫೆಡರಲ್ ಸರ್ಕಾರ ಮತ್ತು ಅಬುಧಾಬಿ ಸರ್ಕಾರದ ಪ್ರಮುಖ ಪುನರ್ರಚನೆಯ ಮುಂದಾಳತ್ವ ವಹಿಸಿದ್ದಾರೆ. ಅವರ ಆಳ್ವಿಕೆಯಲ್ಲಿ, ಯುಎಇ ಹೆಚ್ಚಿನ ವೇಗದಲ್ಲಿ ಅಭಿವೃದ್ಧಿಗೆ ಸಾಕ್ಷಿಯಾಯಿತು.

ಇದನ್ನೂ ಓದಿ
Image
Wheat Export Ban: ಗೋಧಿ ದರ ಇಳಿಕೆಗೆ ಪ್ಲ್ಯಾನ್: ರಫ್ತು ನಿಷೇಧಿಸಿದ ಭಾರತ
Image
ಕೋವಿಡ್-19ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಫ್ರಿ ಅಡ್ಮಿಷನ್: ಕೆವಿಎಸ್​ನಿಂದ ಮಹತ್ವದ ನಿರ್ಧಾರ
Image
ಜಾಮಿಯಾ ಮಸೀದಿಯಲ್ಲಿ ಆಂಜನೇಯನ ಪೂಜೆಗೆ ಅವಕಾಶ ನೀಡುವಂತೆ ಹಿಂದೂ ಕಾರ್ಯಕರ್ತರಿಂದ ಮಂಡ್ಯ ಜಿಲ್ಲಾಧಿಕಾರಿಗೆ ದೂರು
Image
ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಸ್ಫೋಟಕ‌ ಸತ್ಯ ಬಾಯ್ಬಿಟ್ಟ ಬಂಧಿತ ಆರೋಪಿ ನಾಗೇಶ್, ಅಷ್ಟಕ್ಕೂ ಆತ ಹೇಳಿದ್ದೇನು?

ಶೇಖ್ ಖಲೀಫಾ ಬಿನ್ ಜಾಯೆದ್ ಅವರ ನಿಧನದ ಬಗ್ಗೆ ತಿಳಿದು ನನಗೆ ಅತೀವ ದುಃಖವಾಗಿದೆ. ಅವರು ಒಬ್ಬ ಮಹಾನ್ ರಾಜನೀತಿಜ್ಞ ಮತ್ತು ದಾರ್ಶನಿಕ ನಾಯಕರಾಗಿದ್ದರು, ಅವರ ನೇತೃತ್ವದಡಿಯಲ್ಲಿ ಭಾರತ-ಯುಎಇ ಸಂಬಂಧಗಳು ಸಮೃದ್ಧವಾಗಿವೆ. ಭಾರತದ ಜನರ ಹೃತ್ಪೂರ್ವಕ ಸಂತಾಪಗಳು ಯುಎಇ ಜನರೊಂದಿಗೆ ಇವೆ. ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Published On - 10:39 am, Sat, 14 May 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ