Indira Canteen: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ ತಲೆ ಎತ್ತಲಿವೆ 50 ಇಂದಿರಾ ಕ್ಯಾಂಟಿನ್
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ 50 ಇಂದಿರಾ ಕ್ಯಾಂಟಿನ್ಗಳು ತಲೆ ಎತ್ತಲಿವೆ. ಪಂಚ ಗ್ಯಾರಂಟಿ, ಆರ್ಥಿಕ ಸಂಕಷ್ಟದ ನಡುವೆಯೂ ಇಂದಿರಾ ಕ್ಯಾಂಟಿನ್ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಬೆಂಗಳೂರು: ಸರ್ಕಾರ ರಚನೆಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಇಂದಿರಾ ಕ್ಯಾಂಟೀನ್‌ಗಳ(Indira Canteen) ದುರಸ್ತಿಯತ್ತ ಹೆಚ್ಚು ಗಮನಹರಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೊಸದಾಗಿ ಆಹಾರದ ಮೆನು ಸಿದ್ಧಪಡಿಸಿ, ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಮತ್ತೆ ಈಗ ಬೆಂಗಳೂರಿನಲ್ಲಿ ಹೊಸದಾಗಿ 50 ಇಂದಿರಾ ಕ್ಯಾಟಿನ್ಗಳನ್ನು ತೆರೆಯಲು ಸಿದ್ಧತೆ ನಡೆದಿದೆ.
ಬೆಂಗಳೂರಿನಲ್ಲಿ ವಾರ್ಡ್‌ಗೊಂದರಂತೆ ಇಂದಿರಾ ಕ್ಯಾಂಟೀನ್‌ಗಳು ಬಡವರ ಹೊಟ್ಟೆ ತುಂಬುತ್ತಿವೆ. ಕ್ಯಾಂಟೀನ್ ಕಟ್ಟಡ ಇಲ್ಲದ ವಾರ್ಡ್‌ಗಳಲ್ಲಿ ಮೊಬೈಲ್ ಕ್ಯಾಂಟೀನ್‌ಗಳು ಸೇವೆ ನೀಡುತ್ತಿವೆ. ಇದರ ಜೊತೆಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ 50 ಇಂದಿರಾ ಕ್ಯಾಂಟಿನ್ಗಳು ತಲೆ ಎತ್ತಲಿವೆ. ಪಂಚ ಗ್ಯಾರಂಟಿ, ಆರ್ಥಿಕ ಸಂಕಷ್ಟದ ನಡುವೆಯೂ ಇಂದಿರಾ ಕ್ಯಾಂಟಿನ್ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ಇದೇ ವರ್ಷ ಮತ್ತೆ ಹೊಸದಾಗಿ 50 ಹೊಸ ಇಂದಿರಾ ಕ್ಯಾಂಟಿನ್ಗಳನ್ನು ತೆರೆಯಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಜೂನ್ 6 ರಂದು ಎಸ್ಆರ್ ಬೊಮ್ಮಾಯಿ ಜನ್ಮ ಶತಮಾನೋತ್ಸವ ಆಚರಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಸಿದ್ದರಾಮಯ್ಯ ಕನಸಿನ ಕೂಸು ಇಂದಿರಾ ಕ್ಯಾಟಿನ್ಗೆ ಮತಷ್ಟು ಬಲ
ಸರ್ಕಾರದ ಸೂಚನೆಯಂತೆ ಬಿಬಿಎಂಪಿ 198 ರಿಂದ 250 ಕ್ಕೆ ಇಂದಿರಾ ಕ್ಯಾಂಟಿನ್ ಏರಿಕೆಗೆ ಮುಂದಾಗಿದೆ. 24 ಮೊಬೈಲ್ ಇಂದಿರಾ ಕ್ಯಾಂಟಿನ್ಗಳು ಸೇರಿದಂತೆ 250 ಇಂದಿರಾ ಕ್ಯಾಂಟಿನ್ ಸ್ಥಾಪನೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟಿನ್ ಹೈಟೆಕ್ ಮಾಡಿ ಉತ್ತಮ ಗುಣಮಟ್ಟದ ಆಹಾರ ನೀಡಲು ಹೆಚ್ಚುವರಿಯಾಗಿ 15 ಕೋಟಿ ಅನುದಾನ ಬೇಕಾಗಿದೆ. ಹೀಗಾಗಿ ಹೆಚ್ಚುವರಿ ಅನುದಾನಕ್ಕೆ ಪಾಲಿಕೆ, ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದೆ. ಪಂಚ ಗ್ಯಾರಂಟಿಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟಿನ್ ಗೆ ಮತಷ್ಟು ಅನುದಾನ ನೀಡಲು ಮುಂದಾಗಿದ್ದಾರೆ. ಈಗಾಗಲೇ ಇಂದಿರಾ ಕ್ಯಾಂಟಿನ್ ದುರಸ್ಥಿಗೆ ಪ್ರತಿ ಇಂದಿರಾ ಕ್ಯಾಂಟಿನ್ ಗೂ ಒಂದು ಲಕ್ಷ ತುರ್ತು ಅನುದಾನ ಬಿಡುಗಡೆ ಮಾಡಿದ್ದಾರೆ. ಜೊತೆಗೆ ವಿಧಾನಸೌಧ, ವಿಕಾಸಸೌಧ, ಶಾಸಕರ ಭವನಕ್ಕೆ ಬರುವವರು, ಅಲ್ಲಿ ಕಾರ್ಯನಿರ್ವಹಿಸುವವರಿಗಾಗಿ ಹೊಸದಾಗಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬಿಬಿಎಂಪಿ ನಿರ್ಧರಿಸಿದೆ. ಈ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:20 am, Sun, 4 June 23