ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕರ್ನಾಟಕ ಸರ್ಕಾರ ನಿರ್ಧಾರ
ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಇಂದು ಬೆಳಗ್ಗೆ ಸಭೆ ನಡೆಯುತ್ತದೆ. ಸುಪ್ರೀಂಕೋರ್ಟ್ನ 2 ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಒಬಿಸಿ ಮೀಸಲಾತಿ ವಿಚಾರವಾಗಿ ‘ಸುಪ್ರೀಂ’ ತೀರ್ಪು ನೀಡಿದೆ.
ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ (Anti Conversion Bill) ಜಾರಿ ಮಾಡಲಾಗುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ಇಂದು (ಮೇ 12) ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಜಾರಿಮಾಡಲಾಗುತ್ತದೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದೆ. ಆದರೆ ವಿಧಾನಪರಿಷತ್ನಲ್ಲಿ ವಿಧೇಯಕ ಅಂಗೀಕಾರ ಆಗಿರಲಿಲ್ಲ. ಹಾಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.
ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಇಂದು ಬೆಳಗ್ಗೆ ಸಭೆ ನಡೆಯುತ್ತದೆ. ಸುಪ್ರೀಂಕೋರ್ಟ್ನ 2 ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಒಬಿಸಿ ಮೀಸಲಾತಿ ವಿಚಾರವಾಗಿ ‘ಸುಪ್ರೀಂ’ ತೀರ್ಪು ನೀಡಿದೆ. ಒಬಿಸಿ ಮೀಸಲಾತಿ ವಿಚಾರವಾಗಿ ಕಾನೂನು ತಜ್ಞರು, ಕಾನೂನು ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇವೆ. ವಿಪಕ್ಷ ನಾಯಕರು ಕೂಡ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.
ಇದುವರೆಗೆ ಸಂವಿಧಾನದ ಅಡಿ ಮೀಸಲಾತಿ ನೀಡುತ್ತಿದ್ದೆವು. ಮುಂದೆಯೂ ಮೀಸಲಾತಿ ನೀಡಿ ಚುನಾವಣೆ ನಡೆಸುತ್ತೇವೆ. ಒಬಿಸಿಗೆ ರಾಜಕೀಯ ಮೀಸಲಾತಿ ಸಂಬಂಧ ಚರ್ಚಿಸುತ್ತೇವೆ. ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ಮಾತನಾಡಿದ ಸಿಎಂ, ಮಧ್ಯಪ್ರದೇಶ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ವಿಚಾರಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಮರುಪರಿಶೀಲನಾ ಅರ್ಜಿ ಮಂಗಳವಾರ ವಿಚಾರಣೆಗೆ ಬರಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ 2 -3 ದಿನಗಳಲ್ಲಿ ನಿರ್ಧಾರ: ಸಚಿವ ಸಂಪುಟ ವಿಸ್ತರಣೆ ಬಗ್ಗೆ 2 ಅಥವಾ 3 ದಿನಗಳಲ್ಲಿ ಕೇಂದ್ರ ನಾಯಕರು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇದೇ ವೇಳೆ ಪುತ್ರ ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು. ಭ್ರಷ್ಟ, ದುರ್ಬಲ ಸರ್ಕಾರವೆಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಎಸ್ವೈ, ಯಾರು ಭ್ರಷ್ಟರೋ ಅಂಥವರ ಬಾಯಲ್ಲಿ ಈ ಮಾತು ಬರುತ್ತಿದೆ. ಸಿದ್ದರಾಮಯ್ಯ ಕಾಲದಲ್ಲಿ ಏನಾಯ್ತು ಎಂದು ಗೊತ್ತಿದೆ ಎಂದರು.
Published On - 11:46 am, Thu, 12 May 22