ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ

ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಆಯೋಗಕ್ಕೆ ಇದೀಗ ಮತ್ತೊಂದು ಜವಾಬ್ದಾರಿ ಹೆಗಲು ಏರಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈಗಾಗಲೇ ಜಸ್ಟಿಸ್ ಮೈಕೆಲ್‌ ಕುನ್ಹಾ ಆಯೋಗ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ವಿಚಾರಣೆ ಮಾಡುತ್ತಿದ್ದು, ಅದಕ್ಕೂ ಮುನ್ನ ಕಾಲ್ತುಳಿತ ಪ್ರಕರಣ ವರದಿ ನೀಡುವಂತೆ ಸರ್ಕಾರ ಸೂಚಿಸಿದೆ.

ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ
ಕಾಲ್ತುಳಿತ ಪ್ರಕರಣ
Updated By: ಗಂಗಾಧರ​ ಬ. ಸಾಬೋಜಿ

Updated on: Jun 07, 2025 | 12:17 PM

ಬೆಂಗಳೂರು, ಜೂನ್​ 07: ಆಸಿಬಿಗೆ (RCB) 18 ವರ್ಷಗಳ ಬಳಿಕ ಸಿಕ್ಕ ಅತೀ ದೊಡ್ಡ ಗೆಲುವಿನ ಸಂಭ್ರಮಕ್ಕೆಂದು ಬಂದವರು ಮನೆಗೆ ಮರಳಿದ್ದು ಹೆಣವಾಗಿ. ಒಂದಲ್ಲ, ಎರಡಲ್ಲ, ಬರೋಬ್ಬರಿ 11 ಮಂದಿ ಅಮಾಯಕರು, ಬೀಭತ್ಸ ಕಾಲ್ತುಳಿತಕ್ಕೆ ಉಸಿರು ಚೆಲ್ಲಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್​ಐಆರ್ ದಾಖಲಾಗಿ ನಾಲ್ವರನ್ನು ಬಂಧಿಸಲಾಗಿದೆ. ಈ ಮಧ್ಯೆ ಜಸ್ಟೀಸ್ ಮೈಕೆಲ್‌ ಕುನ್ಹಾ ಆಯೋಗಕ್ಕೆ (Justice Kunha) ಪ್ರಕರಣದ ಪರಿಶೀಲನೆ ಜವಾಬ್ದಾರಿ ನೀಡಲಾಗಿದ್ದು, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಸದ್ಯ ಜಸ್ಟೀಸ್ ಮೈಕೆಲ್‌ ಕುನ್ಹಾ ಆಯೋಗವು ಚಾಮರಾಜನಗರದ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ವಿಚಾರಣೆ ಮಾಡುತ್ತಿದೆ. ಆದರೆ ಅದಕ್ಕೂ‌ ಮೊದಲು ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಸರ್ಕಾರ ಸೂಚಿಸಿದೆ. ಬಳಿಕ ಚಾಮರಾಜನಗರ ಆಕ್ಸಿಜನ್ ದುರಂತದ ಕೇಸ್​ ಪರಿಶೀಲನೆಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್ 31ರವರೆಗೆ ಕುನ್ಹಾ ಆಯೋಗದ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಆಕ್ಸಿಜನ್ ದುರಂತ: 36 ಜನರು ಮೃತ

2021ರ ಮೇ 2ರಂದು ಚಾಮರಾಜನಗರ ಜಿಲ್ಲೆಯ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಾಗಬೇಕಿತ್ತು. ಆದರೆ ಮೈಸೂರಿನಿಂದ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದ ಹಿನ್ನೆಲೆ ರಾತ್ರಿ 10:30ರಿಂದ ಬೆಳಗಿನ ಜಾವ 2:30ರ ವರೆಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ವೆಂಟಿಲೇಟರ್‌, ಐಸಿಯು ಹಾಗೂ ಉಸಿರಾಟ ತೊಂದರೆಯಿಂದ ಆಮ್ಲಜನಕದ ನೆರವಿನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದರು. ದುರಂತದಲ್ಲಿ 36 ಜನರು ಮೃತಪಟ್ಟಿದ್ದರು.

ಇದನ್ನೂ ಓದಿ
ಬೆಂಗಳೂರು ಕಾಲ್ತುಳಿತ: ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ
ವಿಧಾನಸೌಧ ಮುಂದೆ RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ
Stampede: ಆರ್​ಸಿಬಿ ವಿರುದ್ಧ 3ನೇ ಎಫ್​ಐಆರ್​, ಹೆಚ್ಚಿದ ಸಂಕಷ್ಟ
Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಬಂಧಿತರ ವಿಚಾರಣೆ ವೇಳೆ ಗೊತ್ತಾಗಿದ್ದೇನು? ಸಿಐಡಿ ಮುಂದಿನ ನಡೆಯೇನು? ಇಲ್ಲಿದೆ ವಿವರ

ಜೂನ್​​ 4ರಂದು ಆರ್.ಸಿ.ಬಿ. ತಂಡದ ವಿಜಯೋತ್ಸವ ಅಭಿನಂದನಾ ಸಮಾರಂಭ ನಡೆಯುವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತದಿಂದ ಸಂಭವಿಸಿದ ಸಾವು ಹಾಗೂ ಗಾಯಕ್ಕೆ ಸಂಬಂಧಿಸಿದಂತೆ ಜಾನ್ ಮೈಕಲ್ ಕುನ್ನಾ ಇವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ಜೂನ್​ 05ರಂದು ಸರ್ಕಾರ ರಚಿಸಿದ್ದು, ಈ ವಿಷಯ ವ್ಯಾಪ್ತಿಯು ತುರ್ತಾಗಿರುವುದರಿಂದ, ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ನೈತಿಕ ಹೊಣೆ ಹೊತ್ತು ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ ಒಂದು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಾಗಿರುವ ಕಾರಣ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮರಣ ಹೊಂದಿರುವ ಘಟನೆಗೆ ಸಂಬಂಧಿಸಿದಂತೆ ಜಾನ್ ಮೈಕಲ್ ಕುನ್ಹಾ ರವರ ವಿಚಾರಣಾ ಆಯೋಗದ ಅವಧಿಯನ್ನು ಆಗಸ್ಟ್​ 1ರಿಂದ 31 ರವರೆಗೆ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.