AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ನವೆಂಬರ್ 1ರಿಂದ ಸರ್ಕಾರಿ ವೈದ್ಯರಿಗೆ ರಾತ್ರಿ 9 ಗಂಟೆಗೆ ಹಾಜರಾತಿ ಕಡ್ಡಾಯ!

ಕರ್ನಾಟಕದ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ವೈದ್ಯರು ನವೆಂಬರ್ 1ರಿಂದ ಪ್ರತಿದಿನ ರಾತ್ರಿ 9 ಗಂಟೆಗೆ 'ಕರ್ತವ್ಯ' ಆಪ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಲಭ್ಯತೆ ಖಚಿತಪಡಿಸಲು ಮತ್ತು ಹೊಣೆಗಾರಿಕೆ ಹೆಚ್ಚಿಸಲು ಆರೋಗ್ಯ ಇಲಾಖೆ ಈ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ನವೆಂಬರ್ 1ರಿಂದ ಸರ್ಕಾರಿ ವೈದ್ಯರಿಗೆ ರಾತ್ರಿ 9 ಗಂಟೆಗೆ ಹಾಜರಾತಿ ಕಡ್ಡಾಯ!
ಸಾಂದರ್ಭಿಕ ಚಿತ್ರImage Credit source: gettyimages
ಭಾವನಾ ಹೆಗಡೆ
|

Updated on: Oct 19, 2026 | 10:21 AM

Share

ಮುಖ್ಯಾಂಶಗಳು

  • ನವೆಂಬರ್ 1ರಿಂದ ಸರ್ಕಾರಿ ವೈದ್ಯರಿಗೆ ರಾತ್ರಿ 9 ಗಂಟೆಗೆ ಹಾಜರಾತಿ ಕಡ್ಡಾಯ.
  • ಕರ್ತವ್ಯ ಆಪ್ ಮತ್ತು ಜಿಯೋ-ಫೆನ್ಸಿಂಗ್ ಮೂಲಕ ಹಾಜರಾತಿ ಪರಿಶೀಲನೆ ನಡೆಸಲಾಗುತ್ತದೆ.
  • ಅನುಮತಿಯಿಲ್ಲದೆ ಕೇಂದ್ರಸ್ಥಾನ ಬಿಟ್ಟು ತೆರಳುವ ವೈದ್ಯರ ವಿರುದ್ಧ ಕಠಿಣ ಕ್ರಮ.

ಬೆಂಗಳೂರು, ಅಕ್ಟೋಬರ್ 19: ರಾಜ್ಯದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಆರೋಗ್ಯ ಸೇವೆಯನ್ನು ಮತ್ತಷ್ಟು ಸುಧಾರಿಸುವ ಮತ್ತು ವೈದ್ಯರ ಹೊಣೆಗಾರಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರು ಇನ್ನು ಮುಂದೆ ಪ್ರತಿದಿನ ರಾತ್ರಿ 9 ಗಂಟೆಯ ಬಳಿಕ ‘ಕರ್ತವ್ಯ’ಆಪ್ ಮೂಲಕ ರಾತ್ರಿ ಹಾಜರಾತಿಯನ್ನು ದಾಖಲಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಹೊಸ ನಿಯಮವು ನವೆಂಬರ್ 1ರಿಂದ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ.

ಜಿಯೋ-ಫೆನ್ಸಿಂಗ್ ವ್ಯವಸ್ಥೆಯ ಮೂಲಕ ಕಣ್ಗಾವಲು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಕ್ಟೋಬರ್ 17ರಂದೇ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಇದರನ್ವಯ, ಕರ್ತವ್ಯ ಆಪ್‌ನಲ್ಲಿ ಪ್ರತ್ಯೇಕ ರಾತ್ರಿ ಹಾಜರಾತಿ ಮಾಡ್ಯೂಲ್ ಅನ್ನು ಸಿದ್ಧಪಡಿಸಲಾಗಿದ್ದು, ‘ಜಿಯೋ-ಫೆನ್ಸಿಂಗ್’ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಇದರ ಸಹಾಯದಿಂದ ವೈದ್ಯರು ತಾವು ಕರ್ತವ್ಯ ನಿರ್ವಹಿಸುವ ನಿಗದಿತ ಪ್ರದೇಶಗಳಿಂದಲೇ ಹಾಜರಾತಿ ಹಾಕುತ್ತಿದ್ದಾರೆ ಎಂಬುದನ್ನು ವ್ಯವಸ್ಥೆಯು ಖಚಿತಪಡಿಸಿಕೊಳ್ಳಲಿದೆ. ತಾಲೂಕು ಅಥವಾ ಗ್ರಾಮ ಮಟ್ಟದಲ್ಲಿ ನಿಯೋಜನೆಗೊಂಡಿರುವ ವೈದ್ಯರು ಪೂರ್ವಾನುಮತಿಯಿಲ್ಲದೆ ತಮ್ಮ ಕೇಂದ್ರಸ್ಥಾನದಿಂದ ಹೊರಹೋಗುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

LIVE TV

ಅನುಮತಿ ಇಲ್ಲದೆ ಗೈರಾದರೆ ಕ್ರಮ

ಅನುಮತಿಯಿಲ್ಲದೆ ತಮ್ಮ ಕೇಂದ್ರಸ್ಥಾನದಲ್ಲಿ ಲಭ್ಯವಿಲ್ಲದ ವೈದ್ಯರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ವೈದ್ಯರು ಅಧಿಕೃತ ರಜೆಯಲ್ಲಿದ್ದರೆ, ಅಧಿಕೃತ ಕರ್ತವ್ಯದ ನಿಮಿತ್ತ ಹೊರಹೋಗಿದ್ದರೆ ಅಥವಾ ಸಮರ್ಥ ಪ್ರಾಧಿಕಾರದಿಂದ ಅನುಮತಿ ಪಡೆದಿದ್ದರೆ ಮಾತ್ರ ಅವರಿಗೆ ಈ ರಾತ್ರಿ ಹಾಜರಾತಿಯಿಂದ ವಿನಾಯಿತಿ ನೀಡಲಾಗುತ್ತದೆ. ಆದರೆ ಆ ಬಗ್ಗೆಯೂ ಆಪ್‌ನಲ್ಲಿ ವಿವರ ದಾಖಲಿಸುವುದು ಕಡ್ಡಾಯವಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರತಿ ತಿಂಗಳು ಈ ಹಾಜರಾತಿ ವರದಿಯನ್ನು ಪರಿಶೀಲಿಸಲಿದ್ದಾರೆ. ಈ ಪ್ರಾಯೋಗಿಕ ಯೋಜನೆಯ ಯಶಸ್ಸಿನ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಇಲಾಖೆಯ ಇತರೆ ನೌಕರರಿಗೂ ಇದನ್ನು ವಿಸ್ತರಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!