ಕಬ್ಬನ್ ಪಾರ್ಕ್ನಲ್ಲಿ 10 ಅಂತಸ್ತಿನ ಕಟ್ಟಡ ನಿರ್ಮಾಣದ ನಿರ್ಧಾರ ಕೈಬಿಟ್ಟ ಸರ್ಕಾರ
ಉದ್ಯಾನವನ ನಗರಿ ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಹತ್ತು ಅಂತಸ್ತಿನ ಕಟ್ಟಡ ನಿರ್ಮಾಣದ ನಿರ್ಧಾರವನ್ನು ಜನರ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಕೈಬಿಟ್ಟಿದೆ. ಚುನಾವಣಾ ಆಯೋಗ ಹಾಗೂ ಕೆಲವು ಸರ್ಕಾರಿ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರಿಸಲು ಸರ್ಕಾರ ಯೋಚಿಸಿದೆ. ಹೀಗಾಗಿ ಕಬ್ಬನ್ ಪಾರ್ಕ್ನಲ್ಲಿ ಹತ್ತು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಸರ್ಕಾರ ಯೋಚನೆ ರೂಪಿಸಿತ್ತು.
ಬೆಂಗಳೂರು, ಫೆಬ್ರವರಿ 13: ಉದ್ಯಾನವನ ನಗರಿ ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ (Cubbon Park) ಹತ್ತು ಅಂತಸ್ತಿನ ಕಟ್ಟಡ ನಿರ್ಮಾಣದ ನಿರ್ಧಾರವನ್ನು ಜನರ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ (Karnataka Government) ಕೈಬಿಟ್ಟಿದೆ. ಚುನಾವಣಾ ಆಯೋಗ (Election Commission) ಹಾಗೂ ಕೆಲವು ಸರ್ಕಾರಿ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರಿಸಲು ಸರ್ಕಾರ ಯೋಚಿಸಿದೆ. ಹೀಗಾಗಿ ಕಬ್ಬನ್ ಪಾರ್ಕ್ನಲ್ಲಿ ಹತ್ತು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಸರ್ಕಾರ ಯೋಚನೆ ರೂಪಿಸಿತ್ತು. ಆದರೆ ಅಷ್ಟು ದೊಡ್ಡ ಕಟ್ಟಡ ನಿರ್ಮಾಣ ಮಾಡಲು ಕಬ್ಬನ್ ಪಾರ್ಕ್ನಲ್ಲಿ ಮರ ಕಡಿಯುವುದು ಅನಿವಾರ್ಯವಾಗಿತ್ತು. ಈ ಕಾರಣಕ್ಕೆ ಪರಿಸರವಾದಿಗಳು ಹಾಗೂ ಸಾರ್ವಜನಿಕರು, ಸರ್ಕಾರ ಈ ಯೋಜನೆಯನ್ನು ಕೈ ಬಿಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ರವಿವಾರ (ಫೆ.12) ರಂದು ವಾಕರ್ಸ್ ಅಸೋಶಿಯನ್ ಕಬ್ಬನ್ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿತು. ಸಾರ್ವಜನಿಕರ ಆಕ್ರೋಶ ಬೆನ್ನಲ್ಲೇ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.
ಕಬ್ಬನ್ ಪಾರ್ಕ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾರಣವಾಗಿದ್ದು, 2019ರಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ. ಅಗತ್ಯವಿದ್ದಾಗ, ಕಬ್ಬನ್ ಪಾರ್ಕ್ ನಲ್ಲಿ ಕಟ್ಟಡಗಳನ್ನು ನಿರ್ಮಿಸಬಹುದು. ಆದರೆ, ಯಾವುದೇ ಮರವನ್ನು ಕತ್ತರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿತ್ತು. ಆ ಹಿನ್ನೆಲೆಯಲ್ಲಿ, ಕಬ್ಬನ್ ಪಾರ್ಕ್ ನಲ್ಲಿ ಹೊಸತಾದ ಹತ್ತು ಅಂತಸ್ತಿನ ಕಟ್ಟಡ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿತ್ತು.
ಕಬ್ಬನ್ ಪಾರ್ಕ್ನೊಳಗೆ ವಾಹನ ಸಂಚಾರಕ್ಕೆ ಅನುಮತಿ
ಕಬ್ಬನ್ ಪಾರ್ಕ್ನೊಳಗೆ ವಾಹನ ಸಂಚಾರಕ್ಕೆ ಕೊನೆಗೂ ಸರ್ಕಾರ ಅವಕಾಶ ಕಲ್ಪಿಸಿದೆ. ತಿಂಗಳ 2 ಮತ್ತು 4ನೇ ಶನಿವಾರ ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರಕ್ಕೆ ಅನುವು ನೀಡಿ ಫೆಬ್ರವರಿ 8 ರಂದು ತೋಟಗಾರಿಕಾ ಇಲಾಖೆ ಆದೇಶ ನೀಡಿದ್ದು, ಪ್ರವಾಸಿಗರು ಹಾಗೂ ಆ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಸಂತಸ ನೀಡಿದೆ.
ಇದನ್ನೂ ಓದಿ: ರಾಜ್ಯದ ಅತಿ ದೊಡ್ಡ ಕಬ್ಬನ್ ಪಾರ್ಕ್ ಸೆಂಟ್ರಲ್ ಲೈಬ್ರರಿಗೆ ಅನುದಾನ ಕೊರತೆ; ನಿರ್ವಹಣೆಗೆ ಪರದಾಡುತ್ತಿರುವ ಅಧಿಕಾರಿಗಳು
ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಸುಗಮ ಸಂಚಾರಕ್ಕಾಗಿ ಕಬ್ಬನ್ ಪಾರ್ಕ್ ಆವರಣದೊಳಗೆ ಹೈಕೋರ್ಟ್‌ನಿಂದ ಸಿದ್ದಲಿಂಗಯ್ಯ ವೃತ್ತ ಮತ್ತು ಸಿದ್ದಲಿಂಗಯ್ಯ ವೃತ್ತದಿಂದ ಹೈಕೋರ್ಟ್ ಭಾಗದವರೆಗೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೂರು ತಿಂಗಳ ಕಾಲ ಪ್ರಾಯೋಗಿಕ ಆಧಾರದ ಮೇಲೆ ಈ ಅವಕಾಶ ನೀಡಲಾಗಿದೆ.
ಕಬ್ಬನ್ ಪಾರ್ಕ್ ಸಂರಕ್ಷಣಾ ಸಮಿತಿ ವಿರೋಧ
ಪಾರ್ಕ್ನೊಳಗೆ ಸಂಚಾರಕ್ಕೆ ಅನುವು ಮಾಡಿಕೊಡುವ ಆದೇಶಕ್ಕೆ ಇತ್ತೀಚೆಗೆ ರಚನೆಯಾಗಿರುವ ಕಬ್ಬನ್ ಪಾರ್ಕ್ ಸಂರಕ್ಷಣಾ ಸಮಿತಿಯು ವಿರೋಧ ವ್ಯಕ್ತಪಡಿಸಿದೆ. ತೋಟಗಾರಿಕೆ ಇಲಾಖೆಯ ಉನ್ನತಾಧಿಕಾರಿಗಳು ಕಬ್ಬನ್ ಪಾರ್ಕ್‌ನ ನಿರ್ವಹಣೆ ಅಥವಾ ಪರಿಸರ ವ್ಯವಸ್ಥೆಯ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಸಮಿತಿ ದೂರಿದೆ.
ಎರಡನೇ ಮತ್ತು ನಾಲ್ಕನೇ ಶನಿವಾರದಂದು ಪಾರ್ಕ್ನೊಳಗೆ ವಾಹನ ಸಂಚಾರಕ್ಕೆ ಅನುವುಮಾಡಿಕೊಡುವುದರಿಂದ ಕಬ್ಬನ್ ಪಾರ್ಕ್‌ಗೆ ಬರುವ 3,000, 5,000 ಮಂದಿಗೆ ತೊಂದರೆಯಾಗಲಿದೆ ಎಂದು ಸಮಿತಿಯ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ