AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮಧ್ಯರಾತ್ರಿ 1ಗಂಟೆ ವರೆಗೂ ಮದ್ಯ ಮಾರಾಟಕ್ಕೆ ಅವಕಾಶ, ಆದರೆ ಈ ವ್ಯಾಪ್ತಿಯಲ್ಲಿ ಮಾತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಧ್ಯರಾತ್ರಿ 1ಗಂಟೆ ವರೆಗೂ ನೈಟ್ ಲೈಫ್ ವಿಸ್ತರಣೆಗೆ ಅವಕಾಶ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಬಾರ್‌, ಹೋಟೆಲ್‌, ಕ್ಲಬ್‌, ಸ್ಟಾರ್‌ ಹೋಟೆಲ್‌ಗಳು ಮತ್ತು ಬೋರ್ಡಿಂಗ್‌ ಹೌಸ್‌ಗಳಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

Bengaluru: ಮಧ್ಯರಾತ್ರಿ 1ಗಂಟೆ ವರೆಗೂ ಮದ್ಯ ಮಾರಾಟಕ್ಕೆ ಅವಕಾಶ, ಆದರೆ ಈ ವ್ಯಾಪ್ತಿಯಲ್ಲಿ ಮಾತ್ರ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Aug 07, 2024 | 9:26 AM

Share

ಬೆಂಗಳೂರು, ಆಗಸ್ಟ್.07: ರಾಜ್ಯ ಅಬಕಾರಿ ಇಲಾಖೆಯಲ್ಲಿ ಬಹಳಷ್ಟು ಬೆಳವಣಿಗೆಗಳಾಗುತ್ತಿವೆ. ಇತ್ತೀಚೆಗೆ ಸ್ಕಾಚ್​​​ಗಳ ಬೆಲೆಯಲ್ಲಿ ಭಾರಿ ಇಳಿಕೆ‌ ಮಾಡುವ ಬಗ್ಗೆ ಅಬಕಾರಿ ಇಲಾಖೆ ಮಾಹಿತಿ ನೀಡಿತ್ತು. ಇದೀಗ ಮದ್ಯ ಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಬರುವ ಬಾರ್‌, ಹೋಟೆಲ್‌, ಕ್ಲಬ್‌, ಸ್ಟಾರ್‌ ಹೋಟೆಲ್‌ಗಳು ಮತ್ತು ಬೋರ್ಡಿಂಗ್‌ ಹೌಸ್‌ಗಳಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ (Karnataka Government) ಅವಕಾಶ ನೀಡಿದೆ.

ವ್ಯಾಪಾರ, ವಾಹಿವಾಟು ಸುಧಾರಿಸುವ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯ ಬಾರ್, ಕ್ಲಬ್ ಸೇರಿದಂತೆ ಇತರ ವ್ಯಾಪಾರ ಸಂಸ್ಥೆಗಳಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ತೆರೆದಿರಲು ಅನುಮತಿ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲಿ ನಡೆದ 2024–25ನೇ ಸಾಲಿನ ಬಜೆಟ್‌ ಭಾಷಣೆಯಲ್ಲಿ ಈ ಬಗ್ಗೆ ಘೋಷಿಸಿದ್ದರು. ಅದರಂತೆ ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ನಿರ್ಬಂಧವನ್ನು ವಿಸ್ತರಿಸಲಾಗಿದೆ ಎಂದು ಜುಲೈ 29ರಂದೇ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಗುಡ್, ಬ್ಯಾಡ್ ನ್ಯೂಸ್: ಇಳಿಕೆಯಾಗಲಿದೆ ಪ್ರೀಮಿಯಂ ಸ್ಕಾಚ್ ದರ, ದುಬಾರಿಯಾಗಲಿದೆ ಬಡವರ ಮದ್ಯ

ಬಿಬಿಎಂಪಿ ಮಿತಿಯಲ್ಲಿರುವ ಮದ್ಯ ವ್ಯಾಪಾರ ಸಂಸ್ಥೆಗಳಿಗೆ ಮಾತ್ರ ಈ ಆದೇಶ ಅನ್ವಯಿಸಲಿದೆ. ಈ ನಿರ್ಧಾರ ರಾಜ್ಯ ಸರ್ಕಾರಕ್ಕೆ ತನ್ನ ಆದಾಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಗರದ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿರುವ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘ (BBHA), ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ.

ಇನ್ನು ಬಿಬಿಎಚ್‌ಎ ಅಧ್ಯಕ್ಷ ಪಿಸಿ ರಾವ್ ಮಾತನಾಡಿ, ವ್ಯಾಪಾರ ಸಮಯವನ್ನು 1 ಗಂಟೆಗೆ ವಿಸ್ತರಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದರಿಂದ ಬೆಂಗಳೂರಿನ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ. ಈ ನಿರ್ಧಾರದಿಂದ ಹೆಚ್ಚಿನ ಉದ್ಯೋಗ ಸೃಷ್ಟಿಗೂ ಕಾರಣವಾಗಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್‌ಗಳು ಮಧ್ಯರಾತ್ರಿ 1 ಗಂಟೆಯವರೆಗೆ ತೆರೆದಿರಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಆದರೆ, ಕೆಲವು ನೆಟ್ಟಿಗರು ಈ ನಿರ್ಧಾರವನ್ನು ವಿರೋಧಿಸಿದ್ದಾರೆ. ಇದು ನಗರದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:16 am, Wed, 7 August 24

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ