AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಬ್ರೇಕ್: ಪರಪ್ಪನ ಅಗ್ರಹಾರದಲ್ಲಿ ಕಠಿಣ ಜಾಮರ್‌ ಅಳವಡಿಕೆ

ತಿಹಾರ್ ಜೈಲಿನ ಮಾದರಿಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ (THCB) ಅಳವಡಿಸುವ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.

Bengaluru News: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಬ್ರೇಕ್: ಪರಪ್ಪನ ಅಗ್ರಹಾರದಲ್ಲಿ ಕಠಿಣ ಜಾಮರ್‌ ಅಳವಡಿಕೆ
ಪರಪ್ಪನ ಅಗ್ರಹಾರ
ವಿವೇಕ ಬಿರಾದಾರ
|

Updated on: Jun 10, 2023 | 6:36 AM

Share

ಬೆಂಗಳೂರು: ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಇನ್ಮುಂದೆ ಬ್ರೇಕ್ ಬೀಳಲಿದೆ. ತಿಹಾರ್ ಜೈಲಿನ (Tihar Jail) ಮಾದರಿಯಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ (THCB) ಅಳವಡಿಸುವ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಅಪರಾಧ ಪ್ರಕರಣಗಳ ಹಿನ್ನೆಲೆಯುಳ್ಳವರು, ವಿಚಾರಣಾಧೀನ ಖೈದಿಗಳು ಜೈಲಿನಿಂದಲೇ ಮೊಬೈಲ್ (Mobile) ಮೂಲಕ ಸಂಪರ್ಕಿಸಿ ಡೀಲ್ ನಡೆಸ್ತಿದ್ದ ಆರೋಪ, ಬೆದರಿಕೆ ವೊಡ್ಡುತ್ತಿದ್ದ ಪ್ರಕರಣಗಳು ದಾಖಲಾಗಿತ್ತಿದ್ದವು. ಇದನ್ನು ತಡೆಯುವ ದೃಷ್ಠಿಯಿಂದ ಜೈಲಿನಿಂದ ಯಾವುದೇ ಮೊಬೈಲ್ ಕರೆಗಳು ಹೋಗದಂತೆ ನಿರ್ಬಂಧಿಸಲು ಟಿಹೆಚ್​​ಸಿಬಿ ಟವರ್ ಸಿಗ್ನಲ್​​ಗಳನ್ನು ಅಳವಡಿಸಲಾಗುತ್ತಿದೆ.

ಪರಪ್ಪನ ಅಗ್ರಹಾರ ಕಾರಾಗೃಹ ಆವರಣದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ 3 ಟವರ್​​​ಗಳನ್ನು ಸ್ಥಾಪಿಸಲಾಗುತ್ತದೆ. ಇವು ಮೊಬೈಲ್ ಜಾಮರ್​ಗಳಿಗಿಂತಲೂ ಸುಧಾರಿತ ಟೆಕ್ನಾಲಜಿ ವ್ಯವಸ್ಥೆ ಹೊಂದಿವೆ. ವಿವಿಧ ಮೊಬೈಲ್ ನೆಟ್​ವರ್ಕ್ ಕಂಪನಿಗಳ ಆಂಟೇನಾ ಅಳವಡಿಸಲಾಗುತ್ತದೆ. ಈ ಮೂಲಕ ಮೊಬೈಲ್ ಗಳ ಸಂಪರ್ಕ ಕಡಿತಗೊಳ್ಳುತ್ತದೆ. ಲ್ಯಾಂಡ್ ಲೈನ್ ಮೂಲಕ ಮಾತ್ರ ದೂರವಾಣಿ ಸಂಪರ್ಕ ಇರುತ್ತದೆ.

ಇದನ್ನೂ ಓದಿ: ಅತ್ಯಾಚಾರ, ಮತಾಂತರ ಆರೋಪದ ಮೇಲೆ ಬಾಯ್ ಫ್ರೆಂಡ್ ಅನ್ನು ಜೈಲಿಗೆ ಕಳಿಸಿದ ಮಹಿಳೆ; ‘ದಿ ಕೇರಳ ಸ್ಟೋರಿ’ ವೀಕ್ಷಿಸಿದ ನಂತರ ದೂರು ದಾಖಲು

ಕಳೆದ ವರ್ಷ ಜನವರಿಯಲ್ಲಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕರೆ ಮಾಡಿ ಬೆದರಿಕೆಯೊಡ್ಡಲಾಗಿತ್ತು. ಈ ಬಳಿಕ ಪೊಲೀಸರ ದಾಳಿ ವೇಳೆ ಮೊಬೈಲ್ ಪೋನ್​​ಗಳು, ಸಿಮ್​ಗಳು ಪತ್ತೆಯಾಗುತ್ತಿದ್ದವು. ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಜೈಲಿನಲ್ಲೂ ಟವರ್‌ ಫರ್‌ ಹಾರ್ಮೋನಿಯಸ್‌ ಕಾಲ್‌ ಬ್ಲಾಕಿಂಗ್‌ ಸಿಸ್ಟಂ ಅಳವಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು