Chamarajpet Idgah Maidan: ಸರ್ಕಾರದ ವತಿಯಿಂದ ಗಣರಾಜ್ಯೋತ್ಸವ ಆಚರಣೆ: ಶಾಲಾ ಮಕ್ಕಳು, ಸಾರ್ವಜನಿಕರಿಗೂ ಆಹ್ವಾನ

TV9kannada Web Team

TV9kannada Web Team | Edited By: Vivek Biradar

Updated on: Jan 22, 2023 | 1:16 PM

ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವನ್ನು ಸರ್ಕಾರದ ವತಿಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಂಸದ ಪಿ.ಸಿ ಮೋಹನ್ ಹೇಳಿದ್ದಾರೆ.

Chamarajpet Idgah Maidan: ಸರ್ಕಾರದ ವತಿಯಿಂದ ಗಣರಾಜ್ಯೋತ್ಸವ ಆಚರಣೆ: ಶಾಲಾ ಮಕ್ಕಳು, ಸಾರ್ವಜನಿಕರಿಗೂ ಆಹ್ವಾನ
ಚಾಮರಾಜಪೇಟೆ ಈದ್ಗಾ ಮೈದಾನ, ಪಿ.ಸಿ ಮೋಹನ

ಬೆಂಗಳೂರು: ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ (Chamarajpet Idgah Maidan) ಗಣರಾಜ್ಯೋತ್ಸವನ್ನು (Republic Day) ಸರ್ಕಾರದ ವತಿಯಿಂದ ಆಚರಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಅವರಿಗೆ ಕಂದಾಯ ಸಚಿವ ಆರ್.ಅಶೋಕ್ (R Ashok) ಸೂಚನೆ ನೀಡಿದ್ದಾರೆ ಎಂದು ಸಂಸದ ಪಿ.ಸಿ ಮೋಹನ್ (PC Mohan) ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮಕ್ಕೆ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೂ ಆಹ್ವಾನ ನೀಡಲಾಗುವುದು. ಸ್ವಾತಂತ್ರ್ಯ ದಿನಾಚರಣೆಗಿಂತಲೂ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಿಸಲು ಸರ್ಕಾರದಿಂದ ಸಿದ್ದತೆ ನಡೆದಿದೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ಬೆಂಗಳೂರು ಉತ್ತರ ಎ.ಸಿ ಶಿವಣ್ಣ ನೇತೃತ್ವದಲ್ಲಿ ಧ್ವಜಾರೋಹಣ ನಡೆದಿತ್ತು. ಈ ಬಾರಿಯೂ ಎ.ಸಿ ಸಮ್ಮುಖದಲ್ಲೆ ಗಣರಾಜ್ಯೋತ್ಸವ ನಡೆಯಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ರೂಪುರೂಷೆ ಸಿದ್ದತೆಗೆ ಒಂದು ದಿನ ಕಾಲವಾಕಾಶ ನೀಡಲಾಗುತ್ತೆ ಎಂದರು.

ತಾಜಾ ಸುದ್ದಿ

ಮಂಗಳವಾರ ನಾನು ಕೂಡ ಜಿಲ್ಲಾಧಿಕಾರಿಗಳ ಜೊತೆ ಭೇಟಿ ಮಾಡಿ ಮಾತನಾಡುತ್ತೇನೆ. ಸ್ವಾತಂತ್ರ್ಯ ದಿನಾಚರಣೆ ಸಂಧರ್ಭದಲ್ಲಿದ್ದ ಕೆಲವು ನಿರ್ಭಂಧಗಳಿದ್ದವು. ಆದರೆ ಈ ಬಾರಿ ಇರುವುದಿಲ್ಲ. ಸಂಭ್ರಮದಿಂದ ಕಂದಾಯ ಇಲಾಖೆ ನೇತೃತ್ವದಲ್ಲಿ ರಾಜೋತ್ಸವವನ್ನು ಆಚರಣೆ ಮಾಡಲಾಗುತ್ತೆ. ಈ ಭಾಗದ ಶಾಸಕರಿಗೂ ಸರ್ಕಾರದಿಂದ ಆಹ್ವಾನ ಹೋಗಲಿದೆ. ನನಗೂ ಸರ್ಕಾರದಿಂದಲೇ ಆಹ್ವಾನ ಬರಲಿದೆ. ನನಗೆ ಈ ಬಗ್ಗೆ ಕಂದಾಯ ಸಚಿವರು ಪೋನ್ ಮೂಲಕ ಹೇಳಿದ್ದಾರೆ ಎಂದು ತಿಳಿಸಿದರು.

ಸರ್ಕಾರದ ನಿರ್ಧಾರವನ್ನ ಸ್ವಾಗತಿಸಿದ ಚಾಮರಾಜಪೇಟೆ ನಾಗರೀಕ ಒಕ್ಕೂಟ

ಸರ್ಕಾರದ ನಿರ್ಧಾರವನ್ನ ಚಾಮರಾಜಪೇಟೆ ನಾಗರೀಕ ಒಕ್ಕೂಟ ಸ್ವಾಗತಿಸಿದೆ. ಸರ್ಕಾರದ ಈ ತೀರ್ಮಾನ ಉತ್ತಮವಾದ ಬೆಳವಣಿಗೆಯಾಗಿದೆ. ಸ್ವಾತಂತ್ರ್ಯ ದಿನಾಚರಣೆಗಿಂತಲೂ ಅದ್ದೂರಿಯಾಗಿ ಆಚರಣೆ ಆಗಬೇಕು. ಅದ್ದೂರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಬೇಕು. ಕಾಟಚಾರ ಗಣರಾಜ್ಯೋತ್ಸವ ಆಗಬಾರದು. ಗಣರಾಜ್ಯೋತ್ಸವದ ಜೊತೆಗೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಯಗಳು ನಡೆಯಬೇಕು. ನಮ್ಮ ಸಲಹೆಗಳನ್ನ ನೀಡಲು ನಾಳೆ ಜಿಲ್ಲಾಧಿಕಾರಿಗಳ ಭೇಟಿ ಮಾಡುತ್ತೇವೆ. ನಾಳೆ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡಿ ಮನವಿ ಮಾಡುತ್ತೇವೆ ಎಂದು ಚಾಮರಾಜಪೇಟೆ ನಾಗರೀಕ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada