ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಟೆಸ್ಟ್ ಕಡ್ಡಾಯ, ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ; ರಾಜ್ಯ ಸರ್ಕಾರ ಆದೇಶ

TV9 Digital Desk

| Edited By: sandhya thejappa

Updated on:Sep 02, 2021 | 9:00 AM

ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ತಿಳಿಸಿದೆ.

ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಟೆಸ್ಟ್ ಕಡ್ಡಾಯ, ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ; ರಾಜ್ಯ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕೊರೊನಾ (Coronavirus) ವೈರಸ್​ನ ಹೊಸ ರೂಪಾಂತರಿ ತಳಿ ಪತ್ತೆಯಾಗುತ್ತಿರುವ ಹಿನ್ನೆಲೆ ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ (RTPCR) ಟೆಸ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ರಾಜ್ಯದ ರಾಜಧಾನಿಗೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರ ಕಠಿಣ ನಿಯಮ ಜಾರಿಗೆ ತಂದಿದೆ. ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ತಿಳಿಸಿದೆ. ಆರ್​ಟಿಪಿಸಿಆರ್ ವರದಿ ಬರುವವರೆಗೆ ಏರ್​ಪೋರ್ಟ್​ನಲ್ಲಿರಬೇಕು. ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ ತೆರಳಲು ಅವಕಾಶವಿರುತ್ತದೆ.

ಈ ಮೊದಲು ಯುಕೆ, ಯುರೋಪ್, ಮಿಡಲ್ ಈಸ್ಟ್, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ನಿಂದ ಬರುವ ಪ್ರಯಾಣಿಕರಿಗೆ ಕೊವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿತ್ತು. ಪ್ರಸ್ತುತ ಬಾಂಗ್ಲಾದೇಶ, ಚೀನಾ, ಮೌರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆಯಿಂದ ಬರುವ ಪ್ರಯಾಣಿಕರಿಗೂ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಟೆಸ್ಟ್ ರಿಪೋರ್ಟ್ ನೆಗೆಟಿವ್ ಬರುವ ತನಕ ಏರ್​ಪೋರ್ಟ್​ನಿಂದ ಹೊರ ಹೋಗಲು ಅವಕಾಶವನ್ನು ಆರೋಗ್ಯ ಇಲಾಖೆ ನಿಷೇಧಿಸಿದೆ.

ಕೇರಳದಲ್ಲಿ ಹೆಚ್ಚಾಯ್ತು ಕೊರೊನಾ ಕೇಸ್ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯಕ್ಕೆ ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿದೆ. ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ ಸ್ಪಾಟ್ ಟೆಸ್ಟ್​ನಲ್ಲಿ ಪಾಸಿಟಿವ್ ಇರುವುದು ಪತ್ತೆಯಾಗುತ್ತಿದೆ. ನಕಲಿ ಸರ್ಟಿಫಿಕೇಟ್ ತರುತ್ತಿರುವುದು ಪತ್ತೆಯಾಗಿದ್ದು, ಮತ್ತಷ್ಟು ಕಠಿಣ ನಿಯಮಗಳನ್ನು ವಿಧಿಸಲು ಆರೋಗ್ಯ ಇಲಾಖೆ  ಮುಂದಾಗಿದೆ. ಕೇರಳದಿಂದ ರಾಜ್ಯಕ್ಕೆ ಆಗಮಿಸುವ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಕೊವಿಡ್ ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. 72 ಗಂಟೆಯೊಳಗಿನ ರಿಪೋರ್ಟ್ ಇದ್ದರಷ್ಟೆ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುವುದು. ರಿಪೋರ್ಟ್ ಜತೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿದೆ. ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆಗೆ ಆಯಾ ಕಾಲೇಜು, ಸಂಸ್ಥೆಗಳು ಕೈಗೊಳ್ಳುವಂತೆ ಆದೇಶ ನೀಡಲಾಗಿದೆ.

ಇದನ್ನೂ ಓದಿ

ಈ ಜನರಿಗೆ ಗಮ್ಯದ ಬಗ್ಗೆ ಖಾತರಿಯಿಲ್ಲ, ಜೀವ ಉಳಿದರೆ ಸಾಕೆಂಬ ಭಾವದೊಂದಿಗೆ ಸುಮ್ಮನೆ ನಡೆದು ಹೋಗುತ್ತಿದ್ದಾರೆ

ಐಟಿ ಪ್ರಾಜೆಕ್ಟ್​ ಕೊಡಿಸುತ್ತೇನೆಂದು 50 ಲಕ್ಷಕ್ಕೂ ಹೆಚ್ಚು ಹಣ ಪಡೆದು ಅಕ್ಕ ತಮ್ಮನಿಂದ ಮೋಸ; ತಮ್ಮನ ಬಂಧನ, ಅಕ್ಕನಿಗಾಗಿ ತಲಾಶ್

(Karnataka government has mandated the RTPCR test for travelers coming from out of country)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada