ಸಿಎಂ ರೈತ ವಿದ್ಯಾನಿಧಿ ಯೋಜನೆ ಷರತ್ತಿನಲ್ಲಿ ಮಾರ್ಪಾಡು; ರೈತ ಕುಟುಂಬದ ಎಲ್ಲಾ ಮಕ್ಕಳು ವಿದ್ಯಾರ್ಥಿ ವೇತನಕ್ಕೆ ಅರ್ಹರು

| Updated By: sandhya thejappa

Updated on: Dec 11, 2021 | 3:45 PM

ಇತರೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ಸಹ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ರೈತ ಕುಟುಂಬದ ಎಲ್ಲಾ ಮಕ್ಕಳು ಅರ್ಹತೆ ಪಡೆದಿರುತ್ತಾರೆ

ಸಿಎಂ ರೈತ ವಿದ್ಯಾನಿಧಿ ಯೋಜನೆ ಷರತ್ತಿನಲ್ಲಿ ಮಾರ್ಪಾಡು; ರೈತ ಕುಟುಂಬದ ಎಲ್ಲಾ ಮಕ್ಕಳು ವಿದ್ಯಾರ್ಥಿ ವೇತನಕ್ಕೆ ಅರ್ಹರು
ರೈತ (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು: ಸಿಎಂ ರೈತ ವಿದ್ಯಾನಿಧಿ ((Mukyamanthri Raitha Vidhyanidhi) ಯೋಜನೆ ಷರತ್ತಿನಲ್ಲಿ ಮಾರ್ಪಾಡು ಮಾಡಲಾಗಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ರೈತ ಕುಟುಂಬದ ಎಲ್ಲಾ ಮಕ್ಕಳು ಅರ್ಹರೆಂದು ಮಾರ್ಪಾಡು ಮಾಡಲಾಗಿದೆ. ಇತರೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ಸಹ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ರೈತ ಕುಟುಂಬದ ಎಲ್ಲಾ ಮಕ್ಕಳು ಅರ್ಹತೆ ಪಡೆದಿರುತ್ತಾರೆ ಅಂತ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಘೋಷಣೆ ಆಗಿದ್ದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಸೆಪ್ಟೆಂಬರ್ 5ಕ್ಕೆ ಚಾಲನೆ ಸಿಕ್ಕಿದೆ. ರೈತ ವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳಿಗೆ ರಾಜ್ಯ ಸರ್ಕಾರ ಶಿಷ್ಯ ವೇತನ ನೀಡಲಿದ್ದು, ಸೆಪ್ಟೆಂಬರ್ 5ಕ್ಕೆ ಸಾಂಕೇತಿಕವಾಗಿ ರೈತರ ಮಕ್ಕಳಿಗೆ ಚೆಕ್ ವಿತರಣೆ ಮಾಡಲಾಗಿತ್ತು.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಈ ಯೋಜನೆ ಸುಮಾರು 17 ಲಕ್ಷ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2,500 ರೂ. ಮತ್ತು ವಿದ್ಯಾರ್ಥಿನಿಯರಿಗೆ 3 ಸಾವಿರ ರೂ. ಹಣವನ್ನು ಸರ್ಕಾರ ನೀಡಲಿದೆ. ಇನ್ನು ಪದವೀಧರ ವಿದ್ಯಾರ್ಥಿಗಳಿಗೆ 5 ಸಾವಿರ ರೂ, ವಿದ್ಯಾರ್ಥಿನಿಗಳಿಗೆ 5,500 ರೂ. ಹಣವನ್ನು ಸರ್ಕಾರ ನೀಡಲಿದೆ. ಎಲ್ಎಲ್​ಬಿ, ಪ್ಯಾರಾಮೆಡಿಕಲ್, ಬಿ ಫಾರ್ಮ್, ನರ್ಸಿಂಗ್, ವೃತ್ತಿಪರ ಕೋರ್ಸ್​ಗಳ ವಿದ್ಯಾರ್ಥಿಗಳಿಗೆ 7,500 ರೂ, ನೀಡಿದರೆ, ವಿದ್ಯಾರ್ಥಿನಿಯರಿಗೆ 8 ಸಾವಿರ ರೂ. ಹಣವನ್ನು ರಾಜ್ಯ ಸರ್ಕಾರ ನೀಡುತ್ತದೆ.

ಎಂಬಿಬಿಎಸ್, ಬಿಇ, ಬಿ.ಟೆಕ್ ಸ್ನಾತಕೋತ್ತರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 10 ಸಾವಿರ, ವಿದ್ಯಾರ್ಥಿನಿಯರಿಗೆ 11,000 ರೂ. ಶಿಷ್ಯ ವೇತನ ನೀಡಲಾಗುವುದು. ನೋಂದಣಿಯಾದ ಶಿಕ್ಷಣ ಸಂಸ್ಥೆಗಳಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆವರಿಗೆ ರಾಜ್ಯ ಸರ್ಕಾರ ಶಿಷ್ಯ ವೇತನ ನೀಡುತ್ತದೆ.

ಇದನ್ನೂ ಓದಿ

ಉತ್ಪಾದನೆ ನಿಲ್ಲಿಸಿದ ಹಿಂದೂಸ್ತಾನ್ ಸಿರಿಂಜ್; ಭಾರತದಲ್ಲಿ ಸಿರಿಂಜ್, ಸೂಜಿಗಳ ಕೊರತೆ ಎದುರಾಗುವ ಭೀತಿ

Ruturaj Gaikwad: ಹ್ಯಾಟ್ರಿಕ್ ಸೆಂಚುರಿ: ದೇಶೀಯ ಅಂಗಳದಲ್ಲಿ ರುತುರಾಜ್ ಅಬ್ಬರ