AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚಾದ ಮಂಕಿಪಾಕ್ಸ್ ಆತಂಕ: ಶಂಕಿತರ ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಆಸ್ಪತ್ರೆ ಗುರುತಿಸಿದ ಸರ್ಕಾರ

ರಾಜ್ಯದಲ್ಲಿ ಮಂಕಿಪಾಕ್ಸ್ ಆತಂಕ ಹಿನ್ನೆಲೆ ಆರೋಗ್ಯ ಇಲಾಖೆಯ ಅಲರ್ಟ್ ಆಗಿದ್ದು ರಾಜ್ಯದ ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸುತ್ತೋಲೆ ಹೊರಡಿಸಿದೆ. ಮಂಕಿಪಾಕ್ಸ್ ಶಂಕಿತರನ್ನ ಗುರುತಿಸಿ ಸ್ಕ್ರೀನಿಂಗ್ ಮಾಡುವಂತೆ ಸೂಚನೆ ನೀಡಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆ ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಗುರುತಿಸಲಾಗಿದೆ.

ರಾಜ್ಯದಲ್ಲಿ ಹೆಚ್ಚಾದ ಮಂಕಿಪಾಕ್ಸ್ ಆತಂಕ: ಶಂಕಿತರ ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಆಸ್ಪತ್ರೆ ಗುರುತಿಸಿದ ಸರ್ಕಾರ
ಎಂಪಾಕ್ಸ್
ಆಯೇಷಾ ಬಾನು
ಆಯೇಷಾ ಬಾನು|

Updated on: Aug 28, 2024 | 8:02 AM

Share

ಬೆಂಗಳೂರು, ಆಗಸ್ಟ್​.28: ಪಾಕಿಸ್ತಾನ್​ ಸೇರಿ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ (Mpox) ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ (Karnataka Health Department) ಅಲರ್ಟ್ ಆಗಿದ್ದು ಏರ್​ಪೋರ್ಟ್​​ಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದೆ. ಜೊತೆಗೆ ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಮಂಕಿಪಾಕ್ಸ್ ಕಂಡು ಬಂದ್ರೆ 21 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ.

ಆರೋಗ್ಯ ಇಲಾಖೆ ನಿನ್ನೆ ಹೊರಡಿಸಿದ ಸುತ್ತೋಲೆಯಲ್ಲಿ, ರಾಜ್ಯ ಆರೋಗ್ಯ ಆಯುಕ್ತ ಡಿ ರಂದೀಪ್ ಅವರು ಮಂಗನ ಕಾಯಿಲೆಯ ಶಂಕಿತ ಪ್ರಕರಣಗಳ ಬಗ್ಗೆ ನಿಗಾ ಇಡಲು ಸೂಚಿಸಿದ್ದಾರೆ. ವಿಮಾನ ನಿಲ್ದಾಣಗಳು, ಬಂದರು ಮತ್ತು ರಾಜ್ಯದ ಎಲ್ಲಾ ಕಡೆಗಳ ಪ್ರವೇಶ ಕೇಂದ್ರಗಳ ವ್ಯವಸ್ಥಾಪಕ ಅಧಿಕಾರಿಗಳಿಗೆ ಎಚ್ಚರ ವಹಿಸಲು ನಿರ್ದೇಶನ ನೀಡಿದ್ದಾರೆ. ಶಂಕಿತರನ್ನ ಗುರುತಿಸಿ ಸ್ಕ್ರೀನಿಂಗ್ ಮಾಡುವಂತೆ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ.

ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ಎಚ್ಚರವಹಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ಶಂಕಿತ ಪ್ರಕರಣಗಳು ಕಂಡು ಬಂದರೆ ಅವರನ್ನು ಐಸೋಲೇಟ್ ಮಾಡುವುದು, ಚಿಕಿತ್ಸೆ ನೀಡುವುದರ ಬಗ್ಗೆ ರಾಜ್ಯದ ಆರೋಗ್ಯ ಸಿಬ್ಬಂದಿ ಗಮನಹರಿಸುವಂತೆ ಸೂಚಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಮಂಕಿಪಾಕ್ಸ್ ಅನ್ನು ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಘೋಷಿಸಿದ ನಂತರ ಹಾಗೂ ಸ್ವೀಡನ್ ಮತ್ತು ಪಾಕಿಸ್ತಾನದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ನಂತರ, ಶಂಕಿತ ಪ್ರಕರಣಗಳಿಗೆ ಸಿದ್ಧರಾಗುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಭಾರತದಲ್ಲಿ ಪ್ರಸ್ತುತ ಯಾವುದೇ ಸಕ್ರಿಯ ಪ್ರಕರಣಗಳಿಲ್ಲ.

ಇದನ್ನೂ ಓದಿ: Monkeypox Outbreak: ಮಂಕಿಪಾಕ್ಸ್​ನಿಂದ ಮತ್ತೆ ಲಾಕ್‌ಡೌನ್ ಆಗುತ್ತಾ? ಈ ಸಾಂಕ್ರಾಮಿಕ ರೋಗದ ಬಗ್ಗೆ WHO ಎಚ್ಚರಿಕೆ

ಶಂಕಿತ ಪ್ರಕರಣದ ಎಲ್ಲಾ ಕ್ಲಿನಿಕಲ್ ಮಾದರಿಗಳನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರಿನಲ್ಲಿರುವ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಕ್ಕೆ ಸಾಗಿಸಲಾಗುತ್ತೆ. ಬಳಿಕ ಮಂಕಿಪಾಕ್ಸ್ ದೃಢಪಟ್ಟರೆ ಅವರನ್ನು ಕನಿಷ್ಠ 21 ದಿನಗಳವರೆಗೆ ಅಥವಾ ಸಂಪೂರ್ಣವಾಗಿ ಗುಣವಾಗುವವರೆಗೆ ಪ್ರತ್ಯೇಕವಾಗಿ ಐಸೋಲೇಟ್ ಮಾಡಲಾಗುತ್ತದೆ.

ಮಂಕಿಪಾಕ್ಸ್ ರೋಗಲಕ್ಷಣಗಳು

  • ಮೊದಲ ಐದು ದಿನ ಜ್ವರ, ಶೀತ ಮತ್ತು ಬೆವರು, ತಲೆನೋವು, ಸ್ನಾಯು ನೋವು, ಗಂಟಲು ನೋವು, ಕೆಮ್ಮು
  • ಜ್ವರ ಪ್ರಾರಂಭವಾದ ಮೂರು ದಿನಗಳ ನಂತರ ರ‍್ಯಾಶಸ್ ಕಂಡುಬರುತ್ತದೆ
  • ಸಾಮಾನ್ಯವಾಗಿ ಮುಖ, ಅಂಗೈ ಮತ್ತು ಅಡಿಭಾಗದ ಮೇಲೆ ರ‍್ಯಾಶಸ್​ಗಳಾಗಿ ನೋವು ಕಾಣಿಸಿಕೊಳ್ಳುತ್ತದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ