ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ

ಗ್ರೂಪ್ ಎ, ಬಿ, ಸಿ ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಲಾಗಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರ ಮಾರ್ಗಸೂಚಿಯನ್ನು ಕೂಡ ಪ್ರಕಟಿಸಿದೆ.

ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ
ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ
Rakesh Nayak Manchi

Updated on: May 30, 2023 | 8:55 PM

ಬೆಂಗಳೂರು: ಗ್ರೂಪ್ ಎ, ಬಿ, ಸಿ ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ (Universal Transfer) ಅವಕಾಶ ನೀಡಲಾಗಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರ ಮಾರ್ಗಸೂಚಿಯನ್ನು ಕೂಡ ಪ್ರಕಟಿಸಿದೆ. ಜೇಷ್ಠತಾ ಪಟ್ಟಿಯಲ್ಲಿ ಶೇ.6ರಷ್ಟು ಮೀರದಂತೆ ಜೂನ್ 1ರಿಂದ ಜೂ.16ರವರೆಗೆ ನೌಕರರನ್ನು ವರ್ಗಾವಣೆ ಮಾಡಲು ವಿವಿಧ ಇಲಾಖೆ ಸಚಿವರಿಗೆ ಅವಕಾಶ ನೀಡಿ ಆದೇಶಿಸಲಾಗಿದೆ.

ಮಾರ್ಗಸೂಚಿ ಪ್ರಕಾರ, ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗೊಳಪಟ್ಟು ಮಾಡಬಹುದಾಗಿದೆ. 2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ ಅಥವಾ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರಷ್ಟನ್ನು ಮೀರದಂತೆ ವರ್ಗಾವಣೆ ಮಾಡಬಹುದಾಗಿದೆ.

ಇದನ್ನೂ ಓದಿ: ಅಧಿಕಾರಿಗಳ ವರ್ಗಾವಣೆ, ನೇಮಕಾತಿಗೆ ಕೇಂದ್ರದಿಂದ ಸುಗ್ರೀವಾಜ್ಞೆ; ಸುಪ್ರೀಂ ಮೆಟ್ಟಿಲೇರಿದ ಕ್ರೇಜಿವಾಲ್​

ಅಲ್ಲದೆ, ಜೂನ್ 1ರಿಂದ ಜೂನ್ 15ರ ವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೇಮಲತ ಜಿ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us