AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೆಟ್ರೋ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ: ಎಂಡಿಗೆ ಸರ್ಕಾರದಿಂದ ನೋಟಿಸ್

ಈ ಬಗ್ಗೆ ವಿವರಣೆ ನೀಡುವಂತೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಿಗೆ ನೊಟೀಸ್ ಜಾರಿ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್‌ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ: ಎಂಡಿಗೆ ಸರ್ಕಾರದಿಂದ ನೋಟಿಸ್
ನೂತನ ಮೆಟ್ರೋ ಮಾರ್ಗಕ್ಕೆ ಚಾಲನೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 01, 2021 | 7:20 PM

Share

ಉಡುಪಿ: ಕೆಂಗೇರಿಯಲ್ಲಿ ಈಚೆಗೆ ನಡೆದ ನಮ್ಮ ಮೆಟ್ರೋ ವಿಸ್ತರಿತ ಮಾರ್ಗಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕನ್ನಡ ನಿರ್ಲಕ್ಷಿಸಿರುವ ವಿಚಾರವನ್ನು ಸಚಿವ ಸುನಿಲ್ ಕುಮಾರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ವಿವರಣೆ ನೀಡುವಂತೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಿಗೆ ನೊಟೀಸ್ ಜಾರಿ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್‌ ಕುಮಾರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು ಕಾರ್ಯಕ್ರಮದಲ್ಲಿ ಕನ್ನಡ ಕಡಗಣಿಸಿರುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಕೇಳಲಾಗಿದೆ. ಭಾಷೆಯ ವಿಚಾರದಲ್ಲಿ ನಿರ್ಲಕ್ಷ್ಯವನ್ನು ಸಹಿಸಲು ಆಗದು ಎಂದು ಹೇಳಿದರು.

ಕನ್ನಡ ನಿರ್ಲಕ್ಷ್ಯದ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಭಾಷೆಯ ವಿಚಾರದಲ್ಲಿ ಅಧಿಕಾರಿಗಳ ನಿರ್ಲಕ್ಷವನ್ನು ಸಹಿಸುವುದಿಲ್ಲ. ಕಾರ್ಯಕ್ರಮಕ್ಕೆ ಬಳಸಿಸಿದ್ದ ಬ್ಯಾಕ್​ಡ್ರಾಪ್ ಮೇಲೆ ಕನ್ನಡ ಇರಲಿಲ್ಲ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ನಿರ್ಲಕ್ಷಿಸುವುದು ಅಪರಾಧ. ಕಾರ್ಯಕ್ರಮದ ಆಯೋಜಕರು ಕೂಡಲೇ ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕು. ತಪ್ಪು ನಡೆದಿರುವುದು ಸಾಬೀತಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕರ್ನಾಟಕದಲ್ಲಿ ನಡೆಯುವ ರಾಜ್ಯದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಬೇಕು. ಕನ್ನಡಿಗರ ಭಾವನೆಗೆ ಧಕ್ಕೆ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಅವರು ತಿಳಿಸಿದರು.

(Karnataka Government issues notice to MD of Bengaluru Metro for neglecting Kannada language)

ಇದನ್ನೂ ಓದಿ: ರಾಮನಗರ, ಮಾಗಡಿ ಕಡೆಗೆ ನಮ್ಮ ಮೆಟ್ರೋ; 4ನೇ ಹಂತದಲ್ಲಿ ಬಿಡದಿಗೂ ಸಿಗಲಿದೆ ಮೆಟ್ರೋ ರೈಲು ಸಂಚಾರ ಭಾಗ್ಯ

ಇದನ್ನೂ ಓದಿ: ಮೆಟ್ರೋ ಮಾರ್ಗ ಉದ್ಘಾಟನೆ ವೇಳೆ ಇಂಗ್ಲಿಷ್ ಬ್ಯಾನರ್ ಬಳಕೆ; ಕ್ಷಮೆ ಕೋರಿ, ವಿಷಾದ ವ್ಯಕ್ತಪಡಿಸಿದ ಮೆಟ್ರೋ ನಿಗಮ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ