AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಾರ್ಯಕರ್ತೆಯರಿಗೆ 2 ಸಾವಿರ ರೂ. ಹೆಚ್ಚುವರಿ ನೀಡುವ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ 13ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ, 2027ರ ಜನವರಿ 1ರಿಂದ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಲಿಖಿತ ಆದೇಶ ಹೊರಡಿಸಿದೆ. ನಿನ್ನೆ ನಡೆದ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗಿನ ಚರ್ಚೆ ಬಳಿಕದ ತೀರ್ಮಾನಗಳನ್ನು ಟಿಪ್ಪಣಿ ರೂಪದಲ್ಲಿ ಸಿಎಂ ಕಚೇರಿ ಹೊರಡಿಸಿದೆ.

ಆಶಾ ಕಾರ್ಯಕರ್ತೆಯರಿಗೆ 2 ಸಾವಿರ ರೂ. ಹೆಚ್ಚುವರಿ ನೀಡುವ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಆಶಾ ಕಾರ್ಯಕರ್ತೆಯರಿಗೆ 2 ಸಾವಿರ ರೂ. ಹೆಚ್ಚುವರಿ ನೀಡುವ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ Image Credit source: PTI and Tv9
ಪ್ರಸನ್ನ ಗಾಂವ್ಕರ್​
| Edited By: |

Updated on:Nov 29, 2026 | 12:03 PM

Share

ಬೆಂಗಳೂರು, ನವೆಂಬರ್​​ 29: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ 13ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ, ಪ್ರತಿಭಟನಾಕಾರರನ್ನು ಸಮಾಧಾನಿಸುವ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆಶಾ ಕಾರ್ಯಕರ್ತೆಯರ ಬೇಡಿಕೆಯಂತೆ ಮಾಸಿಕ ಗೌರವಧನ 2,000 ಹೆಚ್ಚಳ ಸಂಬಂಧ ಲಿಖಿತ ರೂಪದಲ್ಲಿ ನೀಡಲಾಗಿದೆ. ಆಶಾ ಕಾರ್ಯಕರ್ತೆಯರ ಮನವೊಲಿಕೆ ನಿಟ್ಟಿನಲ್ಲಿ ನಿನ್ನೆ (ನವೆಂಬರ್ 28) ಆರೋಗ್ಯ ಸಚಿವ ಯು.ಟಿ. ಖಾದರ್​​ ಮತ್ತು ಸಿಎಂ ಡಿಕೆ ಶಿವಕುಮಾರ್​​ ಇಬ್ಬರೂ ಸರಣಿ ಸಭೆ ನಡೆಸಿದ್ದರು.

2027ರ ಜನವರಿ 1ರಿಂದಲೇ ಮಾಸಿಕ ಗೌರವಧನ 2,000 ಹೆಚ್ಚಳ

ನಿನ್ನೆ ನಡೆದ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗಿನ ಚರ್ಚೆ ಬಳಿಕದ ತೀರ್ಮಾನಗಳನ್ನು ಟಿಪ್ಪಣಿ ರೂಪದಲ್ಲಿ ಸಿಎಂ ಕಚೇರಿ ಹೊರಡಿಸಿದೆ. 2027ರ ಜನವರಿ 1ರಿಂದಲೇ ಮಾಸಿಕ ಗೌರವಧನ 2,000 ಹೆಚ್ಚಿಸುವ ಸಂಬಂಧ ಸಿಎಂ ಕಾರ್ಯದರ್ಶಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ. ಇದಕ್ಕೆ ಅಗತ್ಯ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಆರಂಭಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಲಿಖಿತ ರೂಪದಲ್ಲಿ ಭರವಸೆ ನೀಡುವಂತೆ ಸರ್ಕಾರಕ್ಕೆ ಪಟ್ಟು: 13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಆಶಾ ಕಾರ್ಯಕರ್ತೆಯರ ಮುಂದಿನ ನಡೆ ಬಗ್ಗೆ ಕುತೂಹಲ

ಸಿಎಂ ಸಮ್ಮುಖದಲ್ಲಿ ನಿನ್ನೆ ನಡೆದಿದ್ದ ಸಭೆಯಲ್ಲಿ ಮುಖಂಡರು ಗೌರವಧನ 2000 ರೂ. ಹೆಚ್ಚಳಕ್ಕೆ ಸಮ್ಮತಿ ಸೂಚಿಸಿದ್ದರು. ಬಳಿಕ ಈ ವಿಚಾರವನ್ನು ಫ್ರೀಡಂ ಪಾರ್ಕ್​​ನ ಪ್ರತಿಭಟನಾ ಸ್ಥಳದಲ್ಲಿ ಘೋಷಿಸಿದಾಗ ಕಾರ್ಯಕರ್ತೆಯರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸ್ಥಳದಲ್ಲಿ ತೀವ್ರ ವಾಗ್ವಾದವೂ ನಡೆದಿತ್ತು. ಹೀಗಾಗಿ ಕೊನೆಗೆ ಲಿಖಿತ ಭರವಸೆ ನೀಡುವಂತೆ ಪ್ರತಿಭಟನಾಕಾರರು ಸರ್ಕಾರವನ್ನು ಪಟ್ಟು ಹಿಡಿದಿದ್ದರು. ಹಾಲಿ ಬೆಳವಣಿಗೆಯ ಹಿನ್ನೆಲೆ ಆಶಾ ಕಾರ್ಯಕರ್ತರ ಪ್ರತಿಭಟನೆ ಅಂತ್ಯವಾಗುತ್ತಾ? ಅಥವಾ 15000 ರೂ. ಗೌರವಧನಕ್ಕೇ ಆಗ್ರಹಿಸಿ ಪ್ರತಿಭಟನೆ ಮುಂದುವರಿಯುತ್ತಾ ಎಂಬುದು ಸದ್ಯಕ್ಕಿರುವ ಪ್ರಶ್ನೆಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:01 pm, Sun, 29 November 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ
ಕ್ಷೇತ್ರ ಮರುವಿಂಗಡಣೆ ವಿರುದ್ಧ ಸಮರ; ನಾಳೆ ದಕ್ಷಿಣ ಭಾರತದ ಸಿಎಂಗಳ ಸಭೆ
ಕ್ಷೇತ್ರ ಮರುವಿಂಗಡಣೆ ವಿರುದ್ಧ ಸಮರ; ನಾಳೆ ದಕ್ಷಿಣ ಭಾರತದ ಸಿಎಂಗಳ ಸಭೆ
ಹೋರಾಟ ಮುಂದುವರಿಯುತ್ತೆ ಎಂದ ನಾಗಲಕ್ಷ್ಮೀ
ಹೋರಾಟ ಮುಂದುವರಿಯುತ್ತೆ ಎಂದ ನಾಗಲಕ್ಷ್ಮೀ
ವಿರಾಜಪೇಟೆ: ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಹಗಲು-ರಾತ್ರಿ ಕಾರ್ಯಾಚರಣೆ
ವಿರಾಜಪೇಟೆ: ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಹಗಲು-ರಾತ್ರಿ ಕಾರ್ಯಾಚರಣೆ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌