ಬೆಂಗಳೂರಿಗೆ ಬಂದಿದೆ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್: ಏನಿದರ ಮಹತ್ವ? ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ ಆಹಾರದ ಸುರಕ್ಷತೆಯನ್ನು ಖಚಿತಪಡಿಸಲು, ಆಹಾರ ಇಲಾಖೆ ಸಾರ್ವಜನಿಕ ಸ್ಥಳಗಳಲ್ಲಿ "ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್"ಗಳನ್ನು ಸ್ಥಾಪಿಸಿದೆ. ಸಾರ್ವಜನಿಕರು ಖರೀದಿಸಿದ ಆಹಾರ ಪದಾರ್ಥಗಳನ್ನು ಈ ಕಿಟ್‌ಗಳ ಮೂಲಕ ಪರೀಕ್ಷಿಸಬಹುದು. ಬೆಂಗಳೂರಿನ ಹಲವು ಮಾಲ್‌ಗಳಲ್ಲಿ ಈ ಕಿಟ್‌ಗಳು ಲಭ್ಯವಿದೆ. ಇದರಿಂದ ಆಹಾರದ ಗುಣಮಟ್ಟದ ಬಗ್ಗೆ ಜನರಲ್ಲಿ ಉಂಟಾಗುವ ಅನುಮಾನಗಳನ್ನು ನಿವಾರಿಸಬಹುದು.

ಬೆಂಗಳೂರಿಗೆ ಬಂದಿದೆ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್: ಏನಿದರ ಮಹತ್ವ? ಇಲ್ಲಿದೆ ಮಾಹಿತಿ
ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್
Follow us
| Updated By: ವಿವೇಕ ಬಿರಾದಾರ

Updated on: Oct 27, 2024 | 8:11 AM

ಬೆಂಗಳೂರು, ಅಕ್ಟೋಬರ್​ 27: ಪದಾರ್ಥಗಳ ಗುಣಮಟ್ಟ ಪರೀಕ್ಷೆಗಾಗಿ ಆಹಾರ ಇಲಾಖೆ (Food Department) ಸಾರ್ವಜನಿಕ ಸ್ಥಳಗಳಲ್ಲಿ “ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್” ಇರಿಸಿದೆ. ಹೌದು, ಗೋಬಿ, ಕಬಾಬ್​, ಪಾನಿಪುರಿ, ಕಾಟನ್ ಕ್ಯಾಂಡಿ ಮತ್ತು ಕೇಕ್​​ಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್​ಕಾರಕ (Cancer) ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ತಿಳಿಸಿತ್ತು.

ಇದರಿಂದ ಆತಂಕಗೊಂಡಿರುವ ಜನರು ತಾವು ಖರೀದಿಸುವ ಪದಾರ್ಥಗಳು ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಜನರ ಅನುಮಾನವನ್ನು ನಿವಾರಿಸುವ ನಿಟ್ಟಿನಲ್ಲಿ ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದೇಶದಲ್ಲಿಯೇ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಸ್ಥಳಗಳಲ್ಲಿ “ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್” ಸ್ಥಾಪಿಸಿದೆ. ಇದರಿಂದ ಸಾರ್ವಜನಿಕರು ತಾವು ಖರೀದಿಸಿ ಆಹಾರ ಪದಾರ್ಥಗಳನ್ನು ಸ್ಥಳದಲ್ಲೇ ಪರೀಕ್ಷೆಗೆ ಒಳಪಡಿಸಿ, ಫಲಿತಾಂಶ ಪಡೆಯಬಹುದಾಗಿದೆ.

ಆಹಾರ ಮತ್ತು ಗುಣಮಟ್ಟ ಸುರಕ್ಷತಾ ಇಲಾಖೆ ಕಳೆದ ಮೂರು ತಿಂಗಳಿನಿಂದ ಅಸುರಕ್ಷಿತರ ಆಹಾರಗಳ ಮೇಲೆ ಸಮರ ಸಾರಿದೆ. ಜನರ ಆರೋಗ್ಯಕ್ಕೆ ಕುತ್ತು ತರುವ ಅಪಾಯಕಾರಿ ಆಹಾರ ಪದಾರ್ಥಗಳನ್ನು ಪರೀಕ್ಷಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ತರಕಾರಿ, ಆಹಾರ ಧಾನ್ಯಗಳಿರುವ ಸೂಪರ್ ಮಾರ್ಕೆಟ್​​ಗಳಲ್ಲಿ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್ ಇರಿಸುತ್ತಿದೆ.

ಇದನ್ನೂ ಓದಿ: ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ವಿಚಾರದಲ್ಲಿ ಇನ್ಮುಂದೆ ಸಾರ್ವಜನಿಕರೇ ಫುಡ್ ಕೋರ್ಟ್ ಗಳಲ್ಲಿ ಆಹಾರ ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್​ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ. ಸಾರ್ವಜನಿಕರು ಈ ಮಾಲ್‍ಗಳಲ್ಲಿ ಪ್ರತಿದಿನ ತಾವು ಬಳಸುವ ಆಹಾರ ಪದಾರ್ಥಗಳಾದ ಬೇಳೆ ಕಾಳುಗಳು, ಸಕ್ಕರೆ, ಅಡುಗೆ ಎಣ್ಣೆ, ಚಹಾ ಪುಡಿ, ಉಪ್ಪು, ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಪನೀರ್, ಬೆಣ್ಣೆ, ತರಕಾರಿಗಳು, ಧನಿಯಾಪುಡಿ, ಕುಡಿಯುವ ನೀರು ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ತ್ವರಿತವಾಗಿ ಪರೀಕ್ಷೆಗೆ ಒಳಪಡಿಸಬಹುದು.

ರಾಜಧಾನಿಗೆ ಬರುವ ತರಕಾರಿ ಮತ್ತು ಆಹಾರ ಧಾನ್ಯಗಳನ್ನು ಮಾರಾಟ ಮಾಡುವ ಸೂಪರ್ ಮಾರ್ಕೆಟ್ ಗಳಲ್ಲೂ ಫುಡ್ ಟೆಸ್ಟಿಂಗ್ ಕಿಟ್​ಗಳನ್ನ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನಿಡಲಾಗಿದೆ. ಈ ಮೂಲಕ ಹಣ್ಣು, ತರಕಾರಿಗಳು ಹಾಗೂ ಆಹಾರ ಧಾನ್ಯಗಳ ಗುಣಮಟ್ಟವನ್ನ ಪರಿಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಿದೆ.

ಬೆಂಗಳೂರಿನ ಯಾವೆಲ್ಲ ಮಾಲ್​ಗಳಲ್ಲಿದೆ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್

  • ವೈಷ್ಣವಿ ಸಫೈರ್ ಸೆಂಟರ್ ತುಮಕೂರು ರಸ್ತೆ
  • ಎಲಿಮೆಂಟ್ಸ್ ಮಾಲ್ ಥಣಿಸಂದ್ರ
  • ಫೀನಿಕ್ಸ್ ಮಾಲ್ ಆಫ್ ಏಷ್ಯಾ ಬಳ್ಳಾರಿ ರಸ್ತೆ
  • ಮೀನಾಕ್ಷಿ ಮಾಲ್ ಬನ್ನೇರುಘಟ್ಟ ರಸ್ತೆ
  • ಶೋಭಾ ಮಾಲ್ ಚರ್ಚ್ ಸ್ಟ್ರೀಟ್
  • ಸೆಂಟ್ರಲ್ ಮಾಲ್ ಬೆಳ್ಳಂದೂರು
  • ಗೋಪಾಲನ್ ಸಿಗ್ನೇಚರ್ ಮಾಲ್ ಬೆನ್ನಿಗಾನಹಳ್ಳಿ
  • ನೆಕ್ಸಸ್ ಫೋರಂ ಮಾಲ್ ಕೋರಮಂಗಲ
  • ಭಾರತೀಯ ಮಾಲ್ ಆಫ್ ಬೆಂಗಳೂರು ಥಣಿಸಂದ್ರ
  • ಮಾಗಡಿ ರಸ್ತೆಯಲ್ಲಿರುವ ಜಿಟಿ ವಲ್ರ್ಡ್ ಮಾಲ್​ನಲ್ಲಿ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್ ಸ್ಥಾಪಿಸಲಾಗಿದೆ.

ಆಹಾರ ಪದಾರ್ಥಗಳು ಸ್ಟ್ಯಾಂಡರ್ಡ್ ಪ್ರೋಟೋಕಾಲ್ ಪ್ರಕಾರ ಆಹಾರ ಗುಣಮಟ್ಟ ಇದೆಯಾ ಎಂದು ತಿಳಿಯಲು ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್ ಬಳಸಿ ಆಹಾರದ ಗುಣಮಟ್ಟ ತಿಳಿಯಲು ಜನರಿಗೆ ಅವಕಾಶ ಸಿಕ್ಕಿದ್ದು, ಜನರಲ್ಲಿ ಸಂತಸ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೀದರ್ ಜಿಲ್ಲೆಯ ಮುಸಲ್ಮಾನರು ಕಂಡವರ ಜಮೀನು ತಮ್ಮದು ಅಂತಿದ್ದಾರೆ: ಯತ್ನಾಳ್
ಬೀದರ್ ಜಿಲ್ಲೆಯ ಮುಸಲ್ಮಾನರು ಕಂಡವರ ಜಮೀನು ತಮ್ಮದು ಅಂತಿದ್ದಾರೆ: ಯತ್ನಾಳ್
ಕಳಪೆ ಆಗಿ ಜೈಲು ಸೇರಿದ ಗೋಲ್ಡ್ ಸುರೇಶ್; ಈ ವಾರ ಡಬಲ್ ಶಾಕ್
ಕಳಪೆ ಆಗಿ ಜೈಲು ಸೇರಿದ ಗೋಲ್ಡ್ ಸುರೇಶ್; ಈ ವಾರ ಡಬಲ್ ಶಾಕ್
ನರೇಂದ್ರ ಮೋದಿಯವರಿಗೆ ಸರಿಸಾಟಿಯಾಗುವ ನಾಯಕ ಇಂಡಿಯಾದಲ್ಲಿಲ್ಲ: ದೇವೇಗೌಡ
ನರೇಂದ್ರ ಮೋದಿಯವರಿಗೆ ಸರಿಸಾಟಿಯಾಗುವ ನಾಯಕ ಇಂಡಿಯಾದಲ್ಲಿಲ್ಲ: ದೇವೇಗೌಡ
ದಲಿತನ ಜಮೀನು ಕುರುಬರಾಗಿರುವ ಸಿದ್ದರಾಮಯ್ಯಗೆ ಹೇಗೆ ಸೇರುತ್ತದೆ? ಪ್ರತಾಪ್
ದಲಿತನ ಜಮೀನು ಕುರುಬರಾಗಿರುವ ಸಿದ್ದರಾಮಯ್ಯಗೆ ಹೇಗೆ ಸೇರುತ್ತದೆ? ಪ್ರತಾಪ್
ಸಣ್ಣಪ್ಪನ ಕುಟುಂಬಸ್ಥರು ಆತನ ಸಾವನ್ನು ಖಚಿತಪಡಿಸಿದ್ದಾರೆ: ತೇಜಸ್ವೀ ಸೂರ್ಯ
ಸಣ್ಣಪ್ಪನ ಕುಟುಂಬಸ್ಥರು ಆತನ ಸಾವನ್ನು ಖಚಿತಪಡಿಸಿದ್ದಾರೆ: ತೇಜಸ್ವೀ ಸೂರ್ಯ
‘ಬೊಗಳುವ ನಾಯಿಗೆ...’: ಹನುಮಂತನ ಹಾಡಿನ ಗುರಿ ಯಾರ ಕಡೆಗೆ?
‘ಬೊಗಳುವ ನಾಯಿಗೆ...’: ಹನುಮಂತನ ಹಾಡಿನ ಗುರಿ ಯಾರ ಕಡೆಗೆ?
ರೈತ ಆತ್ಮಹತ್ಯೆ: ತಮ್ಮ ವಿರುದ್ಧ ದಾಖಲಾದ FIRಗೆ ತೇಜಸ್ವಿ ಸೂರ್ಯ ಸ್ಪಷ್ಟನೆ
ರೈತ ಆತ್ಮಹತ್ಯೆ: ತಮ್ಮ ವಿರುದ್ಧ ದಾಖಲಾದ FIRಗೆ ತೇಜಸ್ವಿ ಸೂರ್ಯ ಸ್ಪಷ್ಟನೆ
Video: ಬಾಯಿ ತೆರೆದು ನಿದ್ದೆ ಮಾಡಿದ್ರೆ ಹೀಗೂ ಆಗಬಹುದು ಎಚ್ಚರ
Video: ಬಾಯಿ ತೆರೆದು ನಿದ್ದೆ ಮಾಡಿದ್ರೆ ಹೀಗೂ ಆಗಬಹುದು ಎಚ್ಚರ
ಕಳಪೆ ಕಾಮಗಾರಿ ಕುಸಿತಕ್ಕೆ ಕಾರಣವಾಗಿರೋದು ಮೇಲ್ನೋಟಕ್ಕೆ ಗೊತ್ತಾಗುತ್ತದೆ!
ಕಳಪೆ ಕಾಮಗಾರಿ ಕುಸಿತಕ್ಕೆ ಕಾರಣವಾಗಿರೋದು ಮೇಲ್ನೋಟಕ್ಕೆ ಗೊತ್ತಾಗುತ್ತದೆ!
‘ನವಗ್ರಹ’ ರಿ ರೀಲೀಸ್: ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರ ಹದ್ದಿನ ಕಣ್ಣು
‘ನವಗ್ರಹ’ ರಿ ರೀಲೀಸ್: ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರ ಹದ್ದಿನ ಕಣ್ಣು