AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಆಯೋಗಕ್ಕೆ ಸರ್ಕಾರ ಪತ್ರ, ಕಾರಣವೇನು?

ಜಿಬಿಎಗೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ (ಸಲ್ಲಿಸಿದೆ. ವಾರ್ಡ್ ಪುನರ್ ವಿಗಂಡನೆ ಮತ್ತು ಮೀಸಲಾತಿ ಸಂಬಂಧ ಅಫಿಡೆವಿಟ್ ಸಲ್ಲಿಸಿದ್ದು, ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಸರ್ಕಾರ ಕೋರ್ಟ್‌ಗೆ ಮಾಹಿತಿ ನೀಡಿದೆ. ಆದ್ರೆ, ಇದೀಗ ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಸರ್ಕಾರ ಮನವಿ ಮಾಡಿದ್ದು, ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಆಯೋಗಕ್ಕೆ  ಸರ್ಕಾರ ಪತ್ರ, ಕಾರಣವೇನು?
Greater Bengaluru Authority
ಪ್ರಸನ್ನ ಗಾಂವ್ಕರ್​
| Edited By: |

Updated on: Apr 17, 2026 | 9:48 PM

Share

ಬೆಂಗಳೂರು, (ಏಪ್ರಿಲ್ 17): ಇದೇ ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ (GBA Election) ನಡೆಸುವಂತೆ ಸುಪ್ರೀಂಕೋರ್ಟ್ ಅದೇಶಿಸಿದೆ. ಆದ್ರೆ, ಇದೀಗ ರಾಜ್ಯ ಸರ್ಕಾರ (Karnataka Government), ನಾನಾ ಕಾರಣಗಳನ್ನು ನೀಡಿ ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಮನವಿ ಮಾಡಿದೆ. ಈ ಸಂಬಂಧ ಸಿದ್ದರಾಮಯ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗಕ್ಕೆ (Karnataka Election Commission) ಪತ್ರ ಬರೆದಿದ್ದು, ಜನ ಗಣತಿ ಕಾರಣ ಮುಂದಿಟ್ಟು ಸೆಪ್ಟೆಂಬರ್ 30ರ ರವರೆಗೆ ವಿಸ್ತರಣೆಗೆ ಮನವಿ ಮಾಡಿದೆ.

ಸರ್ಕಾರ ಬರೆದ ಪತ್ರದಲ್ಲೆನಿದೆ?

ಜನಗಣತಿ ಕಾರ್ಯದಲ್ಲಿ ಇಡೀ ಆಡಳಿತ ಯಂತ್ರ ತೊಡಗಿಸಿಕೊಂಡಿದೆ. ಜನ ಗಣತಿಯನ್ನು ಸಮಯಕ್ಕೆ ಸೀಮಿತವಾಗಿ ಮುಗಿಸಬೇಕು . ಎಣಿಕೆ ಮೇಲ್ವಿಚಾರಣೆ, ತರಬೇತಿ ಮತ್ತು ಲಾಜಿಸ್ಟಿಕ್ಸ್ಗಾಗಿ ವ್ಯಾಪಕ ಸಿಬ್ಬಂದಿಯನ್ನು ನಿಯೋಜಿಸುವ ಅಗತ್ಯವಿದೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳಿಗೆ ಸೀಮಿತ ಅವಕಾಶವಿದೆ. ಮತದಾರರ ಪಟ್ಟಿಯ ವಿಶೇಷ ವರಿಷ್ಕರಣೆ (SIR) ಸಹ ಏಕಕಾಲದಲ್ಲಿ ಕೈಗೊಳ್ಳುವ ನಿರೀಕ್ಷೆಯಿದೆ. ಇದಕ್ಕೆ ಅದೇ ಕ್ಷೇತ್ರ ಮಟ್ಟದ ಕಾರ್ಯನಿರ್ವಾಹಕರನ್ನು ಒಳಗೊಂಡಿರುತ್ತದೆ . ಮೇ-ಜೂನ್ ಅವಧಿಯಲ್ಲಿ ಶೈಕ್ಷಣಿಕ ಪರೀಕ್ಷಾ ಕರ್ತವ್ಯಗಳಿಗೆ ಸಿಬ್ಬಂದಿಯನ್ನು ನಿಯೋಜಿಸಬೇಕು. ಇದರಿಂದ ಲಭ್ಯವಿರುವ ಮಾನವಶಕ್ತಿ ಮತ್ತಷ್ಟು ಕಡಿಮೆ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕಾಲಾವಕಾಶ ಬೇಕಿದ್ದು, ಚುನಾವಣಾ ಕಾಲಮಿತಿಯನ್ನು ಸೆಪ್ಟೆಂಬರ್ 30, 2026 ರವರೆಗೆ ವಿಸ್ತರಿಸಿ ಎಂದು ಸರ್ಕಾರ, ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಗೆ ಪತ್ರ ಬರೆದು ಮನವಿ ಮಾಡಿದೆ.

ಇದನ್ನೂ ನೋಡಿ: ಜಿಬಿಎ ಚುನಾವಣೆ: ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಜೂನ್ ಅಂತ್ಯದೊಳಗೆ ಮುಗಿಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಈ ಹಿಂದೆ ನಿರ್ದೇಶನ ನೀಡಿತ್ತು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಗಡುವು ವಿಧಿಸಿ ಆದೇಶಿಸಿದ ಹೊರಡಿಸಿತ್ತು. ಕೋರ್ಟ್ ಆದೇಶ ಹಿನ್ನಲೆ ಚುನಾವಣೆಗೆ ಅಗತ್ಯವಿರುವ ಪ್ರಕ್ರಿಯೆಗಳನ್ನು ಸರ್ಕಾರ ಮುಗಿಸಿದ್ದು, ಚುನಾವಣೆ ನಡೆಸುವ ಸಂಬಂಧ ಆಯೋಗವು ಸಹ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದ್ರೆ, ಇದೀಗ ರಾಜ್ಯ ಸರ್ಕಾರ ಏಕಾಏಕಿ, ಚುನಾವಣೆಯನ್ನು ಮುಂದೂಡಿ ಎಂದು ಪತ್ರ ಬರೆದಿದೆ.

ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಕೊನೆಯ ಬಾರಿಗೆ ಆಗಸ್ಟ್ 2015ರಲ್ಲಿ ನಡೆದಿತ್ತು. ಇದರ ಅವಧಿ ಸೆಪ್ಟಂಬರ್ 2020ರಲ್ಲಿ ಕೊನೆಗೊಂಡಿತ್ತು. ಅದಾದ ಬಳಿಕ ಇಲ್ಲಿವರೆಗೂ ಚುನಾವಣೆ ನಡೆದಿಲ್ಲ. ಇದೀಗ ಮತ್ತೆ ರಾಜ್ಯ ಸರ್ಕಾರ ಚುನಾವಣೆಯನ್ನು ಮುಂದೂಡುವಂತೆ ಮನವಿ ಮಾಡಿದ್ದು, ಇದಕ್ಕೆ ರಾಜ್ಯ ಚುನಾವಣಾ ಆಯೊಗ ಯಾವ ರೀತಿ ಸ್ಪಂದಿಸುತ್ತೆ ಎನ್ನುವುದು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ